ಕೊತ್ವಾಲ್ ಶಿಷ್ಯನೆಂಬ ಮಾತ್ರಕ್ಕೆ ಸದನದಲ್ಲೂ ಅದೇ ರೀತಿ ವರ್ತಿಸುವುದು ತರವೇ?: ಡಿಕೆಶಿಗೆ ಬಿಜೆಪಿ ಪ್ರಶ್ನೆ
ರಾಷ್ಟ್ರ ಧ್ವಜದ ಬಗ್ಗೆ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಪ್ರಹಸನವನ್ನು ನೋಡಿದಾಗ ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದೇ ಭಾಸವಾಗುತ್ತದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಬೆಂಗಳೂರು: ರಾಷ್ಟ್ರಧ್ವಜ(National Flag)ಕ್ಕೆ ಅಗೌರವ ತೋರಿದ ವಿಚಾರವಾಗಿ ಬುಧವಾರ ಸದನದಲ್ಲಿ ನಡೆದ ಚರ್ಚೆ ವೇಳೆ ಗ್ರಾಮೀಣಾವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar)ತೀವ್ರ ವಾಗ್ದಾಳಿ ನಡೆಸಿದ್ದರು. ಇದೇ ವಿಚಾರವಾಗಿ ಸರಣೀ ಟ್ವೀಟ್ ಮಾಡಿರುವ ಬಿಜೆಪಿ, ಡಿಕೆಶಿಗೆ ತಿರುಗೇಟು ನೀಡಿದೆ.
#ಕಾಂಗ್ರೆಸ್ಗೂಂಡಾಗಿರಿ ಹ್ಯಾಶ್ ಟ್ಯಾಗ್ ಬಳಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಕೆಪಿಸಿಸಿ ಅಧ್ಯಕ್ಷ ಡಿಕೆಶಿ(DK Shivakumar)ಯವರೇ ಸದನದಲ್ಲಿ ಸಚಿವ ಈಶ್ವರಪ್ಪ(KS Eshwarappa) ಅವರು ಹೇಳಿದ ಮಾತಿನಲ್ಲಿ ತಪ್ಪೇನಿದೆ? ನೀವು ಜಾಮೀನಿನ ಮೇಲೆ ಜೈಲಿನಿಂದ ಹೊರಗಿರುವುದು ಸುಳ್ಳೇ? ಜಾಮೀನು ವಜಾಗೊಂಡರೆ ನೀವು ಮತ್ತೆ ಜೈಲಿಗೆ ಹೋಗುವುದು ನಿಜವಲ್ಲವೇ? ಸತ್ಯ ಹೇಳಿದರೆ ಕೆಂಡದಂಥ ಕೋಪವೇಕೆ?’ ಅಂತಾ ವ್ಯಂಗ್ಯವಾಗಿ ಪ್ರಶ್ನಿಸಿದೆ.
ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು, ಕಾಲೇಜಿನ ಹೊರಗೆ 'We Want Justice' ಘೋಷಣೆ
Karnataka Assembly Session)ದಲ್ಲಿ ಕೋಲಾಹಲ ನಿರ್ಮಾಣವಾಗಿದೆ. ವಿಧಾನಸಭೆಯ ಮಹತ್ವ ನಿಮಗೆ ತಿಳಿದಿದೆಯೇ?’ ಅಂತಾ ಬಿಜೆಪಿ ಕುಟುಕಿದೆ.
ನಷ್ಟದ ಹೊಂಡದಲ್ಲಿ KSRTC: 3 ವರ್ಷಗಳಿಂದ 2,945 ಕೋಟಿ ನಷ್ಟ, ವಿದ್ಯುತ್ ವಾಹನ ಖರೀದಿಗೆ ಹಣವಿಲ್ಲ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.