ನೀರಿನ ರಾಜಕಾರಣ ಮಾಡಿ ಸಿಎಂ ಆಗುತ್ತೇನೆಂಬ ಭ್ರಮೆಯಿಂದ ಹೊರಬನ್ನಿ: ಡಿಕೆಶಿಗೆ ಬಿಜೆಪಿ ಗುದ್ದು
‘ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಲು ಬಿಡುವುದಿಲ್ಲವೆಂದು ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದೆ. ತಮ್ಮದೇ ಮೈತ್ರಿ ಪಕ್ಷದ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಏಕೆ ಮೌನವಾಗಿದ್ದಾರೆ?`
ಬೆಂಗಳೂರು: ನೀರಿನ ರಾಜಕಾರಣ ಮಾಡಿ ಮುಖ್ಯಮಂತ್ರಿ ಆಗುತ್ತೇನೆ ಎನ್ನುವ ಭ್ರಮೆಯಿಂದ ಹೊರಗೆ ಬನ್ನಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಗೆ ಬಿಜೆಪಿ ಟಾಂಗ್ ನೀಡಿದೆ. ಮೇಕೆದಾಟು ಯೋಜನೆ ವಿಚಾರವಾಗಿ ಮಂಗಳವಾರ ಬಿಜೆಪಿ ಸರಣಿ ಟ್ವೀಟ್ ಮಾಡಿದೆ.
‘ಮೇಕೆದಾಟು ಯೋಜನೆ(Mekedatu Project)ಯನ್ನು ಜಾರಿಗೊಳಿಸಲು ಬಿಡುವುದಿಲ್ಲವೆಂದು ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದೆ. ತಮ್ಮದೇ ಮೈತ್ರಿ ಪಕ್ಷದ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಏಕೆ ಮೌನವಾಗಿದ್ದಾರೆ? ತಮಿಳುನಾಡಿಗೆ ಪಾದಯಾತ್ರೆ ಮಾಡುವುದೆಂದು?’ ಅಂತಾ ಪ್ರಶ್ನಿಸಿದೆ.
Cyber Security Policy: ಸರಕಾರದಿಂದ ಸದ್ಯದಲ್ಲೇ ಸೈಬರ್ ಭದ್ರತಾ ನೀತಿ ಜಾರಿ: ಅಶ್ವತ್ಥನಾರಾಯಣ
‘ರಾಜಕೀಯ ಲಾಭಕ್ಕಾಗಿ ಡಿಕೆಶಿ(DK Shivakumar)ಯವರು ಒಂದಲ್ಲ ಎರಡು ಬಾರಿ ಮೇಕೆದಾಟು ಪಾದಯಾತ್ರೆ ಮಾಡಿದ್ದಾರೆ. ಎರಡು ಬಾರಿ #ಸುಳ್ಳಿನಜಾತ್ರೆ ಮಾಡಿ ಅಭ್ಯಾಸವಿರುವ ಡಿಕೆಶಿ ಅವರಿಗೆ ಮತ್ತೊಂದು ಬಾರಿ ಪಾದಯಾತ್ರೆ ಮಾಡುವುದು ಕಷ್ಟವೇನಿಲ್ಲ. ಮೂರನೇ ಬಾರಿ ರಾಜ್ಯದ ಹಿತದೃಷ್ಟಿಯಿಂದ ತಮಿಳುನಾಡು ಕಡೆಗೆ ಪಾದಯಾತ್ರೆ ಮಾಡಿ. ನಿರೀಕ್ಷಿಸಬಹುದೇ? ಮೇಕೆದಾಟು ಪಾದಯಾತ್ರೆಯ ಮೂಲಕ ಬೆಂಗಳೂರಿನ 15ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಮಾಡಿರುವುದಾಗಿ ಡಿಕೆಶಿ ಹೇಳಿದ್ದಾರೆ. ಅದು ನೀರಿಗಾಗಿ ಅಲ್ಲ, ರಾಜಕೀಯ ಲಾಭಕ್ಕಾಗಿ ಎಂಬುದು ಡಿಕೆಶಿಯವರ ಹೇಳಿಕೆಯಲ್ಲೇ ಸ್ಪಷ್ಟವಾಗುತ್ತದೆ. ಹೋಳಿ ಹಬ್ಬ ಮುಗಿದಿದೆ, ಕಾಂಗ್ರೆಸ್ಸಿಗರ ನಿಜ ಬಣ್ಣ ಬಯಲಾಗುತ್ತಿದೆ’ ಅಂತಾ ಬಿಜೆಪಿ ಕುಟುಕಿದೆ.
CLP Meeting : ಕಾಂಗ್ರೆಸ್ ಶಾಸಕಾಂಗ ಸಭೆಗೆ ಪಕ್ಷದ ಪ್ರಮುಖರೆ ಗೈರು!
‘ಮೇಕೆದಾಟು ಹೋರಾಟ(Mekedatu Project)ದ ನಾಟಕದ ಮೂಲಕ ಹಳೆ ಮೈಸೂರು ಭಾಗದಲ್ಲಿ ತಮ್ಮ ನಾಯಕತ್ವ ಪ್ರತಿಷ್ಠಾಪನೆ ಮಾಡುವುದಷ್ಟೇ ಡಿಕೆಶಿಯವರ ಉದ್ದೇಶವಾಗಿತ್ತು. ಆದರೆ ಪಾದಯಾತ್ರೆಯ ಉದ್ದೇಶಕ್ಕೆ ಅವರ ಮೈತ್ರಿ ಪಕ್ಷದಿಂದಲೇ ಅಡ್ಡಿಯುಂಟಾಗಿದೆ. ಡಿಕೆಶಿಯವರೇ ಜಲ ಜಪ ಮಾಡಿಕೊಂಡು ನಾಲ್ಕು ಹೆಜ್ಜೆ ನಡೆದವರೆಲ್ಲ ಭಗೀರಥರಾಗಲು ಸಾಧ್ಯವಿಲ್ಲ’ ಅಂತಾ ಬಿಜೆಪಿ ಟೀಕಾಪ್ರಹಾರ ನಡೆಸಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.