ಬೆಂಗಳೂರು: 545 ಪಿಎಸ್ಐ ಹುದ್ದೆಗಳ ನೇಮಕಾತಿ ವಿಚಾರವಾಗಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರನ್ನು ಉಲ್ಲೇಖಿಸಿ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ರೈಲ್ವೆ ಅಪಘಾತವಾದಾಗ ಶಾಸ್ತ್ರೀಯವರು ರಾಜೀನಾಮೆ ನೀಡದ್ದರು. ಈಗಿನವರಿಗೆ ಮಾನ ಮಾರ್ಯಾದೆ ಏನೂ ಇಲ್ಲವೆಂದು ವಾಗ್ದಾಳಿ ನಡೆಸಿದ್ದರು.
ಸಿದ್ದರಾಮಯ್ಯನವರ ಹೇಳಿಕೆಗೆ ಭಾನುವಾರ ಬಿಜೆಪಿ ತಿರುಗೇಟು ನೀಡಿದೆ. #ಬುರುಡೆರಾಮಯ್ಯ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಸಿದ್ದರಾಮಯ್ಯನವರೇ ಲಕ್ಷಾಂತರ ಮೌಲ್ಯದ ವಾಚ್ ಹಗರಣ ಆದಾಗ ನಿಮ್ಮ ಮಾನ ಮಾರ್ಯಾದೆ ಎಲ್ಲಿತ್ತು? ಅರ್ಕಾವತಿ ರೀಡೂ ಪ್ರಕರಣದಲ್ಲಿ ನಿಮ್ಮ ಮಾನ ಮರ್ಯಾದಿ ಎತ್ತರಕ್ಕೇರಿತ್ತೇ? ಜೈಲಿನಿಂದ ಬಂದವರನ್ನು ಕೆಪಿಸಿಸಿಗೆ ಅಧ್ಯಕ್ಷರನ್ನಾಗಿ ಮಾಡುವಾಗ ನಿಮ್ಮ ಮಾನ ಮರ್ಯಾದೆ ಎಲ್ಲಿತ್ತು?’ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರ ‘ಉದ್ಯೋಗ ವ್ಯಾಪಾರೀಕಣʼವನ್ನೇ ‘ಅಧಿಕೃತ ಕಸುಬುʼ ಮಾಡಿಕೊಂಡಿದೆ: ಎಚ್ಡಿಕೆ
‘ಸಿದ್ದರಾಮಯ್ಯನವರೇ ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಗಿರುವ ಸೋನಿಯಾ ಗಾಂಧಿ ಅವರ ರಾಜಿನಾಮೆ ಕೇಳುವ ತಾಕತ್ತಿದೆಯೇ? ಭ್ರಷ್ಟಾಚಾರ ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಗಡೆ ಇರುವ ಕಾಂಗ್ರೆಸ್ ನಾಯಕರ ಮಾನ ಮರ್ಯಾದೆಯನ್ನು ಎಂದು ಪ್ರಶ್ನಿಸುತ್ತೀರಿ?’ ಎಂದು ಕುಟುಕಿದೆ.
‘ಸಿದ್ದರಾಮಯ್ಯನವರೇ ನಿಮ್ಮ ಬಾಯಿಯಿಂದ ಇಂತಹ ಮಾತುಗಳು ಹೊರಬಂದರೆ ರಾಜ್ಯದ ಜನತೆ ನವರಂಧ್ರಗಳಿಂದ ನಗುತ್ತಾರೆ. ಭ್ರಷ್ಟಾಚಾರವನ್ನು ಸಾಂಸ್ಥೀಕರಿಸಿದ ಮಜಾವಾದಿ ರಾಜಕಾರಣಿ ಎಂದರೆ ಅದು ಸಿದ್ದರಾಮಯ್ಯ. ಹೈಕಮಾಂಡ್ಗೆ ನೀಡಿದ ಕಪ್ಪವನ್ನು ಡೈರಿಯಲ್ಲಿ ಬರೆದಿಟ್ಟ ನೀವು ಈಗ ಸತ್ಯ ಹರಿಶ್ಚಂದ್ರನಂತೆ ವರ್ತಿಸಿದರೆ ನಂಬಲು ಸಾಧ್ಯವೇ?’ ಎಂದು ಬಿಜೆಪಿ ಪ್ರಶ್ನಿಸಿದೆ.
ಮಾನ್ಯ @siddaramaiah ಅವರೇ,
√ ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಗಿರುವ ಸೋನಿಯಾ ಗಾಂಧಿ ಅವರ ರಾಜಿನಾಮೆ ಕೇಳುವ ತಾಕತ್ತಿದೆಯೇ?
√ ಭ್ರಷ್ಟಾಚಾರ ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಗಡೆ ಇರುವ ಕಾಂಗ್ರೆಸ್ ನಾಯಕರ ಮಾನ ಮರ್ಯಾದೆಯನ್ನು ಎಂದು ಪ್ರಶ್ನಿಸುತ್ತೀರಿ?#ಬುರುಡೆರಾಮಯ್ಯ
— BJP Karnataka (@BJP4Karnataka) May 8, 2022
ಇದನ್ನೂ ಓದಿ: ಕರ್ನಾಟಕಕ್ಕೆ ʼಅಸಾನಿʼ ಭೀತಿ: ರಾಜ್ಯದ ವಿವಿಧೆಡೆ ಇಂದಿನಿಂದ ಭಾರೀ ಮಳೆ ಸಾಧ್ಯತೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.