ಬೆಂಗಳೂರು: ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ವಿಚಾರ ಪದೇ ಪದೇ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಲಿದ್ದಾರೆ, ಡಿ.ಕೆ.ಶಿವಕುಮಾರ್ ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನ ನೀಡಲಾಗುತ್ತದೆ ಎಂದು ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಬೆಂಬಲಿಗರು ಸಹ ಮುಂದಿನ ಕಾಂಗ್ರೆಸ್‍ನ ಮುಂದಿನ ಸಿಎಂ ಬಗ್ಗೆ ಹೊದಲ್ಲಿ ಬಂದಲ್ಲಿ ಘೋಷಣೆ ಕೂಗುತ್ತಾ ಗೊಂದಲ ಮೂಡಿಸುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಸಿದ್ದರಾಮಯ್ಯನವರೇ ಮುಂದಿನ ಸಿಎಂ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬೆಂಬಲಿಗರು ಘೋಷಿಸಿದ್ದಾರೆ. ಸಿದ್ದರಾಮಯ್ಯನವರು ಇಲ್ಲವೆಂದರೆ ಕಾಂಗ್ರೆಸ್ ಪಕ್ಷವೇ ಇರಲ್ಲವೆಂದು ಮಾಜಿ ಶಾಸಕ ರಾಜಣ್ಣ ಹೇಳಿದ್ದಾರೆ. ಇದೇ ವಿಚಾರವನ್ನಿಟ್ಟುಕೊಂಡು ಟೀಕಿಸಿರುವ ಬಿಜೆಪಿ, ‘ಸಿದ್ದರಾಮಯ್ಯ  ಸಿಎಂ ಆಗುವುದೂ ಇಲ್ಲ, ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದೂ ಇಲ್ಲ’ವೆಂದು ಕುಟುಕಿದೆ.


Siddaramaiah : 'PSI 5ನೇ ರ‍್ಯಾಂಕ್ ದರ್ಶನ್, ನಾಗೇಶ್ ಗೌಡ ಅಶ್ವತ್ಥ ನಾರಾಯಣ್ ಸಂಬಂಧಿಕರು'


#ಕಾಂಗ್ರೆಸ್‌ಕಲಹ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕರ್ನಾಟಕ ಕಾಂಗ್ರೆಸ್‌ ಈಗ ಒಡೆದ ಮನೆಯಂತಾಗಿದೆ. ಒಂದಷ್ಟು ಬಣ #ವಲಸೆರಾಮಯ್ಯರಿಗೆ ಜೈಕಾರ ಹಾಕುತ್ತಿದ್ದರೆ, #ಭ್ರಷ್ಟಾಧ್ಯಕ್ಷ ಡಿಕೆಶಿ ಮಾತ್ರ ಸಾಮೂಹಿಕ ನಾಯಕತ್ವದಲ್ಲಿ ಮುಂದಿನ ಚುನಾವಣೆ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಬಣ ಡಿ.ಕೆ.ಶಿವಕುಮಾರ್ ಅವರಿಗೆ ಕವಡೆ ಕಾಸಿನ ಕಿಮ್ಮತ್ತೂ ನೀಡುತ್ತಿಲ್ಲವೇಕೆ?’ ಎಂದು ಪ್ರಶ್ನಿಸಿದೆ.


‘ಮಹಡಿ ಹತ್ತಲು ಆಗದವರು, ಬೆಟ್ಟ ಹತ್ತುವ ಕನಸು ಕಂಡರಂತೆ! ತಮ್ಮ ಬೆಂಬಲಿಗರ ಮೂಲಕ ಮುಂದಿನ ಸಿಎಂ ಎಂದು ಘೋಷಿಸಿಕೊಳ್ಳುವ #ಬುರುಡೆರಾಮಯ್ಯ ಅವರು ಈಗ ಚುನಾವಣೆ ನಡೆದರೂ ಬಾದಾಮಿಯಲ್ಲಿ ಸೋಲುವುದು ಖಚಿತ, ಇದು ವಾಸ್ತವ. ಸಿದ್ದರಾಮಯ್ಯ  ಸಿಎಂ ಆಗುವುದೂ ಇಲ್ಲ, ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದೂ ಇಲ್ಲ’ವೆಂದು ಟ್ವೀಟ್ ಮಾಡಿದೆ.


ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಿಎಂ ಅಧ್ಯಕ್ಷತೆಯಲ್ಲಿ ಸಭೆ


‘ಒಂದೆಡೆ  ಶಾಸಕರ ಅಭಿಪ್ರಾಯ ತೆಗೆದುಕೊಂಡು, ಹೈಕಮಾಂಡ್ ಸಿಎಂ ಅಭ್ಯರ್ಥಿ ಘೋಷಣೆ ಮಾಡುತ್ತದೆ ಎಂದು ಹೇಳುವ ಸಿದ್ದರಾಮಯ್ಯ ಮತ್ತೊಂದೆಡೆ ಬೆಂಬಲಿಗರ ಮೂಲಕ ‘ಮುಂದಿನ ಸಿಎಂ ಸಿದ್ದರಾಮಯ್ಯʼ ಎಂದು ಜೈಕಾರ ಹಾಕಿಸಿಕೊಳ್ಳುತ್ತಿದ್ದಾರೆ. ಇದೆಲ್ಲ ಡಿ.ಕೆ.ಶಿವಕುಮಾರ್ ಅವರನ್ನು ಕಟ್ಟಿಹಾಕುವ ಪೂರ್ವನಿಯೋಜಿತ ರಣತಂತ್ರದ ಭಾಗವೇ?’ ಎಂದು ಪ್ರಶ್ನಿಸಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.