ಬೆಂಗಳೂರು: ಕೆಪಿಸಿಸಿ ಅಧ‍್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದೆ ರಮ್ಯಾ ಕಲಹದಲ್ಲಿ ಎಂಟ್ರಿಯಾಗಿರುವ ಬಿಜೆಪಿ ವಿಪಕ್ಷ ನಾಯಕ ಸಿದ್ದರಾಮಯ್ಯರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದೆ. #ಅಸಹಾಯಕಡಿಕೆಶಿ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ‘ಕೇಸರಿ’ ಪಕ್ಷ, ‘ಡಿಕೆಶಿ ಅವರನ್ನು ಅಧೀರರನ್ನಾಗಿಸುವ ಹಿಂದೆ #ಮೀರ್‌ಸಾದಿಕ್‌ ತಂತ್ರವಿದೆಯೇ?’ ಎಂದು ಪ್ರಶ್ನಿಸಿದೆ.


COMMERCIAL BREAK
SCROLL TO CONTINUE READING

ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ ನೀವು ನಿಜಕ್ಕೂ ಕೆಪಿಸಿಸಿ ಅಧ್ಯಕ್ಷರೇ? ಸಾರ್ವಜನಿಕ ಬದುಕಿನಿಂದ ಕಳೆದು ಹೋದವರೆಲ್ಲಈಗ ಬಂದು‌ ಕೆಪಿಸಿಸಿ ಅಧ್ಯಕ್ಷರಿಗೆ ಪಾಠ ಹೇಳುತ್ತಿರುವುದನ್ನು ನೋಡಿದರೆ, ಕನಕಪುರದ ಬಂಡೆ ಎಷ್ಟು ಗಟ್ಟಿ ಎಂದು ಯೋಚಿಸಬೇಕಲ್ಲವೇ? ಡಿಕೆಶಿ ಅವರನ್ನು ಅಧೀರರನ್ನಾಗಿಸುವ ಹಿಂದೆ #ಮೀರ್‌ಸಾದಿಕ್‌ ತಂತ್ರವಿದೆಯೇ?’ ಎಂದು ಪ್ರಶ್ನಿಸಿದೆ.


DKS v/s Ramya: ‘ನೀನೇ ಸಾಕಿದಾ ಗಿಣಿ ಹದ್ದಾಗಿ ಕುಕ್ಕಿತಲ್ಲೋ...!’


‘ಚುನಾವಣೆಯ ಹೊಸ್ತಿಲಲ್ಲಿ ಡಿ.ಕೆ.ಶಿವಕುಮಾರ್ ಜೊತೆ ಎಷ್ಟು ಮಂದಿ ನಿಲ್ಲಬಹುದು ಎಂದು ಕಾಂಗ್ರೆಸಿಗರು ಈಗಲೇ ನಿರ್ಧರಿಸಿರಬಹುದು. #ಮೀರ್‌ಸಾದಿಕ್‌ ಬಣದ ಜೊತೆಗೆ #ಅಸಹಾಯಕಡಿಕೆಶಿ ಅವರ ವಿರೋಧಿಗಳ ಸಾಲಿಗೆ ಈಗ ಮಾಜಿ ಸಂಸದೆ ರಮ್ಯಾ ಕೂಡ ಸೇರಿದ್ದಾರೆ. ಡಿಕೆಶಿ ಅವರೇ ಸಹೋದರ ಡಿ.ಕೆ.ಸುರೇಶ್ ಅವರಾದರೂ ನಿಮ್ಮ ಜೊತೆ ನಿಲ್ಲಬಹುದೇ?’ ಎಂದು ಪ್ರಶ್ನಿಸಿದೆ.


ಅಸಹಾಯಕಡಿಕೆಶಿ ಅವರೇ ನೀವೇ ಬೆಳೆಸಿದ Social Media Encounter Specialist ರಮ್ಯಾ ನೇತೃತ್ವದಲ್ಲಿ ಮತ್ತಷ್ಟು ನಕಲಿ ಖಾತೆ ಜನಿಸಲಿದ್ದು, ನಿಮ್ಮದೇ ಮೂಗಿನ ಕೆಳಗೆ ನಿಮ್ಮ ವಿರುದ್ಧವೇ #ToolKit ಹಣೆಯಲಾಗುತ್ತಿದೆ. ಇದರ ಹಿಂದೆ #ಮೀರ್‌ಸಾದಿಕ್‌ ಕೈವಾಡವಿದೆ, ಎಚ್ಚರ!’ ಎಂದು ಸಲಹೆ ನೀಡಿದೆ.


ಡಿಕೆಶಿ ವಿರುದ್ಧ ಸಿಡಿದೆದ್ದ ಮಾಜಿ ಸಂಸದೆ ರಮ್ಯಾ..!


ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಬೇಟಿಯಾಗಿಲ್ಲ, ಡಿಕೆಶಿ ಹೇಳಿಕೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆಂಬ ಎಂ.ಬಿ.ಪಾಟೀಲ್ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ‘ಡಿಕೆಶಿ ಅವರೇ ನಿಮ್ಮ ಹೇಳಿಕೆಯನ್ನು ಪಕ್ಷದ ವೇದಿಕೆಯಲ್ಲಿ ಪ್ರಶ್ನಿಸುತ್ತೇನೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ. ದೆಹಲಿ ವರಿಷ್ಠರ ಮುಂದೆಯೇ ನಿಮ್ಮ ನಾಯಕತ್ವದ ಪ್ರಶ್ನೆಗೆ ವೇದಿಕೆ ಸಿದ್ಧವಾಗುತ್ತಿದೆಯೇ #ಅಸಹಾಯಕಡಿಕೆಶಿ?’ ಎಂದು ಕುಟುಕಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.