‘ಟಿಪ್ಪು ಇಸ್ಲಾಂ ಸಾಮ್ರಾಜ್ಯದ ವಿಸ್ತಾರಕನಾಗಿದ್ದನೇ ಹೊರತು ಭಾರತಕ್ಕಾಗಿ ಬೆವರು ಸುರಿಸಿಲ್ಲ’

ಮತಾಂಧ ಟಿಪ್ಪು ಸುಲ್ತಾನ್‌ ಬ್ರಿಟಿಷರ ವಿರುದ್ಧ ಹೋರಾಡಿದ್ದು ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿಯೇ ವಿನಃ ಭಾರತವನ್ನು ದಾಸ್ಯದಿಂದ ಮುಕ್ತಿಗೊಳಿಸುವುದಕ್ಕಲ್ಲ ಎಂದು ಬಿಜೆಪಿ ಟ್ವೀಟ್ ಮಾಡಿದೆ.

Written by - Zee Kannada News Desk | Last Updated : Mar 30, 2022, 04:06 PM IST
  • ಟಿಪ್ಪು ಸುಲ್ತಾನ್ ಇಸ್ಲಾಂ ಸಾಮ್ರಾಜ್ಯದ ವಿಸ್ತಾರಕನಾಗಿದ್ದನೇ ಹೊರತು ಭಾರತಕ್ಕಾಗಿ ಬೆವರು ಸುರಿಸಿಲ್ಲ
  • ಮತಬ್ಯಾಂಕ್ ಗಟ್ಟಿಮಾಡಿಕೊಳ್ಳಲು ಸಿದ್ದರಾಮಯ್ಯ ಟಿಪ್ಪು ಜಯಂತಿಯನ್ನು ಆಚರಿಸಲು ಆದೇಶ ನೀಡಿದ್ದರು
  • ಟಿಪ್ಪು ಮಾತ್ರವಲ್ಲ ಶಾಲಾ ಪಠ್ಯಕ್ರಮದಲ್ಲಿ ಸೇರಿದ ಎಲ್ಲಾ ಸುಳ್ಳು ಇತಿಹಾಸಗಳ ಪರಿಷ್ಕರಣೆಯಾಗಬೇಕು
‘ಟಿಪ್ಪು ಇಸ್ಲಾಂ ಸಾಮ್ರಾಜ್ಯದ ವಿಸ್ತಾರಕನಾಗಿದ್ದನೇ ಹೊರತು ಭಾರತಕ್ಕಾಗಿ ಬೆವರು ಸುರಿಸಿಲ್ಲ’ title=
ಟಿಪ್ಪು ಸುಲ್ತಾನ್ ವಿರುದ್ಧ ಬಿಜೆಪಿ ಕಿಡಿಕಾರಿದೆ

ಬೆಂಗಳೂರು: ಟಿಪ್ಪು(​Tipu Sultan) ಇಸ್ಲಾಂ ಸಾಮ್ರಾಜ್ಯದ ವಿಸ್ತಾರಕನಾಗಿದ್ದನೇ ಹೊರತು ಭಾರತಕ್ಕಾಗಿ ಬೆವರು ಸುರಿಸಿಲ್ಲವೆಂದು ಬಿಜೆಪಿ ಟೀಕಿಸಿದೆ. ‘ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಉದ್ದೇಶದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ತಮ್ಮ ಅವಧಿಯಲ್ಲಿ ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ಆದೇಶ ನೀಡಿದರು’ ಎಂದು ಬಿಜೆಪಿ ಆರೋಪಿಸಿದೆ.

‘ಟಿಪ್ಪು ನಡೆಸಿದ ಹತ್ಯಾಕಾಂಡಕ್ಕೆ‌ #ಟಿಪ್ಪುರಾಮಯ್ಯ ಒಪ್ಪಿಗೆಯ ಮುದ್ರೆ ನೀಡಿದ್ದರು. ಈಗ ಅದೇ ಭಜಕರ ಗುಂಪು #ಟಿಪ್ಪುಸುಳ್ಳುಇತಿಹಾಸ(Tipu Sultan Syllabus) ಬಯಲಾಗುವುದಕ್ಕೆ ಅಡ್ಡಿಪಡಿಸುತ್ತಿದ್ದಾರೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: Aam Aadmi Party: ಆಮ್ ಆದ್ಮಿ ಪಕ್ಷಕ್ಕೆ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಸೇರ್ಪಡೆ ಸಾಧ್ಯತೆ?!

‘ಟಿಪ್ಪು ಮಾತ್ರವಲ್ಲ ಶಾಲಾ ಪಠ್ಯಕ್ರಮ(School Textbook)ದಲ್ಲಿ ಸೇರಿದ ಎಲ್ಲಾ ಸುಳ್ಳು ಇತಿಹಾಸಗಳ ಪರಿಷ್ಕರಣೆಯಾಗಬೇಕು. ಇತಿಹಾಸ ಎಂದರೆ "ಹೀಗೆ ಇತ್ತು" ಎಂಬ ರೀತಿಯ ವಾಸ್ತವ ಸತ್ಯದಲ್ಲಿರಬೇಕೇ ಹೊರತು ಸುಳ್ಳಿನಿಂದ ಕೂಡಿರಬಾರದು. ಆದರೆ ಈಗ ನಾವು ಓದುತ್ತಿರುವ ಇತಿಹಾಸ, "ಕಾಂಗ್ರೆಸ್ ಕೈಪಿಡಿ"!’ ಎಂದು ಬಿಜೆಪಿ ಕುಟುಕಿದೆ.

‘ಟಿಪ್ಪು(Tipu Sultan) ಕಾಲವೆಂದರೆ ಅದು ಹಿಂದೂ ಮತ್ತು ಕ್ರೈಸ್ತರ ದೌರ್ಭಾಗ್ಯದ ಕಾಲ. ಜನಾನುರಾಗಿಯಾಗಿದ್ದ ಮೈಸೂರು ಒಡೆಯರನ್ನು ಕಪಟ ಮಾರ್ಗದ ಮೂಲಕ ಅಧಿಕಾರದಿಂದ ಕೆಳಕ್ಕೆ ಇಳಿಸಿದರು. ಹಿಂದೂಗಳು ಮೂರನೇ ದರ್ಜೆಯ ಪ್ರಜೆಗಳಾಗಿದ್ದರು. ನೆತ್ತರಕೆರೆಯಲ್ಲಿ ಸಾವಿರಾರು ಕ್ರೈಸ್ತರ ಹತ್ಯೆಯಾಯಿತು’ ಎಂದು ಬಿಜೆಪಿ ಹೇಳಿದೆ.

ಇದನ್ನೂ ಓದಿ: ಚುನಾವಣೆ ಮೂಡ್‌ಗೆ ಜಾರಿದ ರಾಜಕೀಯ ಪಕ್ಷಗಳು: ನಡೆಯಲಿದೆ ಆರೋಪ-ಪ್ರತ್ಯಾರೋಪ ವಾಗ್ಯುದ್ಧ!

‘ಮತಾಂಧ ಟಿಪ್ಪು ಸುಲ್ತಾನ್‌(Tipu Sultan) ಬ್ರಿಟಿಷರ ವಿರುದ್ಧ ಹೋರಾಡಿದ್ದು ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿಯೇ ವಿನಃ ಭಾರತವನ್ನು ದಾಸ್ಯದಿಂದ ಮುಕ್ತಿಗೊಳಿಸುವುದಕ್ಕಲ್ಲ. ಟಿಪ್ಪು ಇಸ್ಲಾಂ ಸಾಮ್ರಾಜ್ಯದ ವಿಸ್ತಾರಕನಾಗಿದ್ದನೇ ಹೊರತು ಭಾರತಕ್ಕಾಗಿ ಬೆವರು ಸುರಿಸಿಲ್ಲ’ವೆಂದು ಬಿಜೆಪಿ ಟ್ವೀಟ್ ಮಾಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News