ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ಸಾಕಷ್ಟು ರಂಗ-ಬಿರಂಗಿ ಗುಪ್ತಸಿಡಿಗಳಿವೆ: ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತಿರುಗೇಟು
ಪ್ರಿಯಾಂಕ್ ಖರ್ಗೆ ಅವರೇ ಸಹಾಯ ಮಾಡುವುದಾಗಿ ನಂಬಿಸಿ ಅಸಹಾಯಕ ಹೆಣ್ಣೊಬ್ಬಳ ಮೇಲೆ ಮೇಟಿ ಲೈಂಗಿಕ ದೌರ್ಜನ್ಯ ಎಸಗಿದ್ದು ನಿಮ್ಮ ಕಾಲದಲ್ಲೇ ಅಲ್ಲವೇ? ಎಂದು ಬಿಜೆಪಿ ಪ್ರಶ್ನಿಸಿದೆ.
ಬೆಂಗಳೂರು: ಬಿಜೆಪಿ ಸರ್ಕಾರಕ್ಕೆ ಲಂಚ- ಮಂಚದ ಸರ್ಕಾರವೆಂದು ಟೀಕಿಸಿದ್ದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತಿರುಗೇಟು ನೀಡಿದೆ. ‘ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತಸಿಡಿಗಳೂ ಇವೆ’ ಎಂದು ಬಿಜೆಪಿ ಕುಟುಕಿದೆ.
#ಮಹಿಳಾವಿರೋಧಿಕಾಂಗ್ರೆಸ್ ಹ್ಯಾಶ್ ಟ್ಯಾಗ್ ಬಳಸಿ ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಲಂಚ-ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ‘ತಮ್ಮ ಮನೆಯ ಹೆಂಚು ತೂತು’ ಎಂಬುದೇ ಗೊತ್ತಿಲ್ಲ. ಇವರು ಆರೋಪ ಮಾಡಿದ ಬೆನ್ನಲ್ಲೆ ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು?’ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: Khadi Flags : ಪಾಲಿಸ್ಟರ್ ಧ್ವಜಗಳ ಮಧ್ಯೆ, ಮಾರುಕಟ್ಟೆಯಲ್ಲಿ ಖಾದಿ ಧ್ವಜಗಳಿಗೆ ಭಾರಿ ಬೇಡಿಕೆ!
ಯಾದಗಿರಿಯಲ್ಲಿ ಗಾಂಜಾ ಘಾಟು; ಪಾನ್-ಬೀಡಾ ಅಂಗಡಿಗಳಲ್ಲಿ ಗಾಂಜಾ ಜಾಕಲೇಟ್ ಮಾರಾಟ..!
ಸರ್ಕಾರಿ ಕೆಲಸಕ್ಕೆ ಯುವತಿಯರು ಮಂಚ ಹತ್ತಬೇಕೆಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ, ‘ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕ್ ಅವರೇ ನಿಮ್ಮ ಈ ಮಾತುಗಳು ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ? ಕೂಡಲೇ ಕ್ಷಮೆಯಾಚಿಸಿ’ ಎಂದು ಬಿಜೆಪಿ ಆಗ್ರಹಿಸಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.