ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಅರ್ಜಿಯೇ ಹಾಕದೆ ಸರ್ಕಾರಿ ಉದ್ಯೋಗಿಯಾಗಬಹುದಿತ್ತು ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿರುವ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘#ಭ್ರಷ್ಟರಾಮಯ್ಯನವರೇ, ನಿಮ್ಮ ಅವಧಿಯಲ್ಲಿ ನಡೆದ 2014-15ರ ಸಾಲಿನ ಶಿಕ್ಷಕರ ನೇಮಕಾತಿಯಲ್ಲಿ ನಡೆದ ಹಗರಣ ಒಂದೊಂದಾಗಿಯೇ ಹೊರಬೀಳುತ್ತಿದೆ. ಕಾಂಗ್ರೆಸ್ ಸರ್ಕಾರ 100% ಕಮಿಷನ್ ಸರ್ಕಾರ ಎಂಬ ನಮ್ಮ ವಾದದಲ್ಲಿ ಏನು ತಪ್ಪಿದೆ?’ ಎಂದು ಪ್ರಶ್ನಿಸಿದೆ.


ಇದನ್ನೂ ಓದಿ: ಒತ್ತುವರಿದಾರರಿಗೆ ಬಿಸಿ ಮುಟ್ಟಿಸುತ್ತಿರುವ ಬಿಬಿಎಂಪಿ, ಅನಧಿಕೃತವಾಗಿ ನಿರ್ಮಾಣವಾಗಿದ್ದ ಪ್ರಾರ್ಥನಾ ಮಂದಿರ ನೆಲಸಮ


ಕರ್ನಾಟಕದತ್ತ ಭಾರತ ಐಕ್ಯತಾ ಯಾತ್ರೆ, ಸರ್ವರಿಗೂ ಕಾಂಗ್ರೆಸ್ ಮುಕ್ತ ಆಹ್ವಾನ!


ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಅರ್ಜಿಯೇ ಹಾಕದೆ ಸರ್ಕಾರಿ ಉದ್ಯೋಗಿಯಾಗಬಹುದಿತ್ತು. #ಭ್ರಷ್ಟರಾಮಯ್ಯ ಸಿಎಂ ಆಗಿದ್ದಾಗ 14 ಜನರು ಅಕ್ರಮವಾಗಿ ಶಿಕ್ಷಕರಾಗಿ ನೇಮಕಾತಿಯಾಗಿದ್ದರು. ಈ ಅಕ್ರಮ ನೇಮಕಾತಿಗೆ ಕಾಂಗ್ರೆಸ್ ಫಿಕ್ಸ್‌ ಮಾಡಿದ ಕಮಿಷನ್ ಪರ್ಸಂಟೇಜ್‌ ಎಷ್ಟು?’ ಎಂದು ಬಿಜೆಪಿ ಪ್ರಶ್ನಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.