Hijab verdict: ‘ಹಿಜಾಬ್ ಒಳಗಿರುವ ಮತ ಗಟ್ಟಿಗೊಳಿಸಲು ಯತ್ನಿಸಿದ ಸಿದ್ದರಾಮಯ್ಯಗೆ ಹಿನ್ನಡೆ’
ಮಕ್ಕಳ ಭವಿಷ್ಯದ ವಿಚಾರದಲ್ಲೂ ರಾಜಕೀಯ ಬೆರೆಸಿದ ಕಾಂಗ್ರೆಸ್ ಧೋರಣೆಗೆ ಈಗ ಉತ್ತರ ಸಿಕ್ಕಿದೆ ಬಿಜೆಪಿ ಟ್ವೀಟ್ ಮಾಡಿದೆ.
ಬೆಂಗಳೂರು: ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲವೆಂದು ಕರ್ನಾಟಕ ಹೈಕೋರ್ಟ್(Karnataka Hijab Judgement) ನೀಡಿರುವ ತೀರ್ಪನ್ನು ಸ್ವಾಗತಿಸಿರುವ ಬಿಜೆಪಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ. #YesToUniform_NoToHijab ಹ್ಯಾಶ್ ಟ್ಯಾಗ್ ಬಳಸಿ ಮಂಗಳವಾರ ಸರಣಿ ಟ್ವೀಟ್ ಮಾಡಿದೆ.
‘ಶಾಲಾ ಹಂತದಲ್ಲೇ ಬಗೆಹರಿಯಬಹುದಾದ ಹಿಜಾಬ್ ವಿಚಾರವನ್ನು ನ್ಯಾಯಾಲಯದವರೆಗೆ ಎಳೆದು ತರುವ ಅಗತ್ಯವಿರಲಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ರಾಜ್ಯ ಸರ್ಕಾರ ಜಾರಿಗೊಳಿಸಿದ ಸಮವಸ್ತ್ರ ನೀತಿಯಲ್ಲಿ ತಪ್ಪಿಲ್ಲ. ಸಮವಸ್ತ್ರ ಮೂಲಭೂತ ಹಕ್ಕುಗಳ ಮೇಲಿನ ಸಮಂಜಸ ನಿರ್ಬಂಧ ಎಂದು ಕೋರ್ಟ್(Hijab Verdict)ಅಭಿಪ್ರಾಯಪಟ್ಟಿರುವುದು ಸ್ವಾಗತಾರ್ಹ’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.
ಇದನ್ನೂ ಓದಿ: ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ : ಹೈಕೋರ್ಟ್
‘ಹಿಜಾಬ್ ವಿಚಾರ(Karnataka Hijab Row)ದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕೆಲ ಮತೀಯ ಶಕ್ತಿಗಳು ಅನಗತ್ಯವಾಗಿ ಪ್ರಚೋದನೆ ನೀಡಿದವು. ಇದರಿಂದ ವಿದ್ಯಾರ್ಥಿನಿಯರ ಶಿಕ್ಷಣ ವಿಚಾರದಲ್ಲಿ ಗೊಂದಲ ಸೃಷ್ಟಿಯಾಯ್ತು. ಮಕ್ಕಳ ಭವಿಷ್ಯದ ವಿಚಾರದಲ್ಲೂ ರಾಜಕೀಯ ಬೆರೆಸಿದ ಕಾಂಗ್ರೆಸ್ ಧೋರಣೆಗೆ ಈಗ ಉತ್ತರ ಸಿಕ್ಕಿದೆ’ ಅಂತಾ ಬಿಜೆಪಿ ಹೇಳಿದೆ.
‘ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್, ಎಸ್‌ಡಿಪಿಐ(SDPI), ಸಿಎಫ್‌ಐ ಮೂಗು ತೂರಿಸಿದ್ದರಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಯ್ತು. ಕಾಂಗ್ರೆಸ್ ಪಕ್ಷದ ಇಬ್ಬಗೆ ನೀತಿ, ಮತ ರಾಜಕಾರಣಕ್ಕಾಗಿ ಒಡೆದಾಳು ನೀತಿಯ ಪರಿಣಾಮವಾಗಿ ಸಾವಿರಾರು ವಿದ್ಯಾರ್ಥಿನಿಯರು ಪರೀಕ್ಷೆಯಿಂದ ಹಿಂದೆ ಸರಿದರು. ಇದಕ್ಕೆಲ್ಲಾ ಕಾಂಗ್ರೆಸ್ ನೇರ ಹೊಣೆ’ ಅಂತಾ ಬಿಜೆಪಿ ಟೀಕಿಸಿದೆ.
ಇದನ್ನೂ ಓದಿ: Hijab Verdict: ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಬಗ್ಗೆ ಚರ್ಚೆ ಮಾಡುತ್ತೇವೆ- ಸಿ.ಎಂ.ಇಬ್ರಾಹಿಂ
‘ಈ ಪ್ರಕರಣದಲ್ಲಿ ಹಿಜಾಬ್ ಒಳಗಿರುವ ಮತ ಗಟ್ಟಿಗೊಳಿಸಲು ಯತ್ನಿಸಿದ ಸಿದ್ದರಾಮಯ್ಯ(Siddaramaiah)ನವರಿಗೆ ತೀವ್ರ ಹಿನ್ನಡೆಯಾಗಿದೆ. ಸಿದ್ದರಾಮಯ್ಯನವರು ‘ಹಿಜಾಬ್ ಧರಿಸುವುದು ಮೂಲಭೂತ ಹಕ್ಕು’ ಎಂದು ಪ್ರತಿಪಾದಿಸಿದ್ದರು. ಈಗ ನ್ಯಾಯಾಲಯವೇ, ಹಿಜಾಬ್ ಇಸ್ಲಾಂ ಮತದ ಅವಿಭಾಜ್ಯ ಅಂಗವಲ್ಲ ಎಂಬ ತೀರ್ಪು ನೀಡಿದೆ’ ಎಂದು ಹೇಳಿದೆ.
‘ಕಾಂಗ್ರೆಸ್ ತನ್ನ ವೈಯುಕ್ತಿಕ ರಾಜಕೀಯ ಲಾಭಕ್ಕಾಗಿ ಹಿಜಾಬ್ ವಿವಾದ(Hijab Row)ಕ್ಕೆ ಪುಷ್ಟಿ ನೀಡಿತು. ವಿದ್ಯಾರ್ಥಿನಿಯರು ತರಗತಿ ಮತ್ತು ಪರೀಕ್ಷೆ ಹಾಜರಾಗದಂತಹ ವಾತಾವರಣ ನಿರ್ಮಿಸಿತ್ತು. ಈಗ ನ್ಯಾಯಾಲಯದ ತೀರ್ಪು ಬಂದಿದೆ. ಇನ್ನಾದರೂ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳ ಭವಿಷ್ಯ ಜೊತೆ ಚೆಲ್ಲಾಟವಾಡದಿರಲಿ’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.