ಬೆಂಗಳೂರು: ಮತಬ್ಯಾಂಕ್‌ ರಾಜಕಾರಣ(Vote Bank Politics)ಕ್ಕಾಗಿ ಸಮಾಜ ಘಾತುಕರನ್ನು ಬೆಳೆಸಿದ್ದು ಕಾಂಗ್ರೆಸ್, ಮತಾಂಧರನ್ನು ಪೋಷಿಸಿದ್ದು ಸಿದ್ದರಾಮಯ್ಯ ಅಂತಾ ಬಿಜೆಪಿ ಗಂಭೀರ ಆರೋಪ ಮಾಡಿದೆ. #ಹಿಂದೂವಿರೋಧಿಕಾಂಗ್ರೆಸ್‌ ಹ್ಯಾಶ್ ಟ್ಯಾಗ್ ಬಳಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ(Siddaramaiah) ವಿರುದ್ಧ ಕಿಡಿಕಾರಿದೆ.


ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಶಂಖದಿಂದಲೇ ತೀರ್ಥ ಬರಬೇಕೇ?: ಡಿಕೆಶಿ


COMMERCIAL BREAK
SCROLL TO CONTINUE READING

‘ಸಿದ್ದರಾಮಯ್ಯ(Siddaramaiah)ನವರೇ ಕೋಟಾ ನೋಟು ಚಲಾವಣೆ, ಡ್ರಗ್ಸ್ ದಂಧೆ, ಸ್ಮಗ್ಲಿಂಗ್, ಗೊ ಕಳ್ಳತನ, ಬಾಂಬ್ ತಯಾರಿಕೆ, ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿ ಮುಂತಾದ ಸಮಾಜ ಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದವರ ಮೇಲಿನ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದು ಅವರನ್ನು ಪೋಷಿಸಿದ್ದು ನೀವೇ ಅಲ್ಲವೇ?’ ಅಂತಾ ಪ್ರಶ್ನಿಸಿದೆ.


Congress Party), ಮತಾಂಧರನ್ನು ಪೋಷಿಸಿದ್ದು ಸಿದ್ದರಾಮಯ್ಯ. ಈಗ ಬಹುಸಂಖ್ಯಾತರ ಮತ ಕಳೆದುಕೊಳ್ಳುವ ಭೀತಿಯಿಂದ ಮತಾಂಧ ಸಂಘಟನೆಗಳನ್ನು ನಿಷೇಧಿಸಿ ಎಂಬ ನಾಟಕ ಮಾಡುತ್ತಿದ್ದಾರೆ. ಪ್ರಕರಣ ಹಿಂಪಡೆಯಲು ಅಂದು ನಿಮಗೆ ಪ್ರೇರೇಪಿಸಿದ ‘ಹಸ್ತʼ ಯಾವುದು?’ ಅಂತಾ ಬಿಜೆಪಿ(BJP) ಟ್ವೀಟ್ ಮಾಡಿದೆ.


ಇದನ್ನೂ ಓದಿ: #ಜನವಿರೋಧಿಕಾಂಗ್ರೆಸ್; “ಸದನದಲ್ಲಿ ನಿಮ್ಮ ಶಾಸಕರು ಮಾಡಿದ್ದೇನು, ಸಾಧಿಸಿದ್ದೇನು?”


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.