ಬೆಂಗಳೂರು: ವಿಧಾನ ಪರಿಷತ್‍ಗೆ ಚುನಾವಣೆಗೆ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸುವಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಯಶಸ್ವಿಯಾಗಿದ್ದರೆ, ಕೆಪಿಸಿಸಿ ಅಧ‍್ಯಕ್ಷ ಡಿ.ಕೆ.ಶಿವಕುಮಾರ್ ಮತ್ತೆ ಅಸಹಾಯಕರಾಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.  


COMMERCIAL BREAK
SCROLL TO CONTINUE READING

‘ಒಂದು ವಾರದಲ್ಲಿ ಎರಡು ಬಾರಿ ದೆಹಲಿ ದಂಡಯಾತ್ರೆ, ಚಿಂತನ ಶಿಬಿರದಲ್ಲಿ ಒಗ್ಗಟ್ಟಿನ ಮಂತ್ರ ಜಪ. ಇಷ್ಟೆಲ್ಲಾ ಆದರೂ ಡಿಕೆಶಿ ಹಿರಿಯ ನಾಯಕ ಎಸ್‌ಆರ್‌ಪಿ ಅವರಿಗೆ ಟಿಕೆಟ್‌ ಕೊಡಿಸಲು ಸಾಧ್ಯವಾಗಿಲ್ಲ. ಸಿದ್ದರಾಮಯ್ಯ ಅವರ ಹಠವೇ ಅಂತಿಮವಾಯಿತು. ಡಿಕೆಶಿ ಅವರೇ ನೀವು ನಾಮಕಾವಸ್ಥೆ ಅಧ್ಯಕ್ಷರೇ?’ ಎಂದು ಬಿಜೆಪಿ ಪ್ರಶ್ನಿಸಿದೆ.


ನನ್ನ ತಂಡದ ನಾಲ್ವರಿಗೆ ಟಿಕೆಟ್! ವಿಜಯೇಂದ್ರ ಅವರಗೆ ಬೇರೆ ಅವಕಾಶವಿದೆ: ನಳಿನ್ ಕುಮಾರ್ ಕಟೀಲ್


‘ತಮ್ಮ ಪರಮಾಪ್ತ ಎಂ.ಬಿ.ಪಾಟೀಲರನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಡುವಲ್ಲಿ ಸಿದ್ದರಾಮಯ್ಯ ಯಶಸ್ಸು ಕಂಡಿದ್ದಾರೆ. ಅದೇ ಎಂ.ಬಿ.ಪಾಟೀಲರು ಕೆಪಿಸಿಸಿ ಅಧ್ಯಕ್ಷರನ್ನೇ ಸಾರ್ವಜನಿಕ ವಲಯದಲ್ಲಿ, ಮಾಧ್ಯಮದವರ ಮುಂದೆ ಪ್ರಶ್ನಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇವಲ ಅಲಂಕಾರಿಕವೇ!?’ ಎಂದು ಟೀಕಿಸಿದೆ.


ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ


ಸಿದ್ದರಾಮಯ್ಯ ಹೇಳುತ್ತಿದ್ದರೆ, ಪಕ್ಷ ಕಟ್ಟಿರುವುದು ನಾನು ಎಂದು ಡಿಕೆಶಿ ಹೇಳುತ್ತಿದ್ದಾರೆ. ಎದುರಾಳಿ ಬಲಗೊಳ್ಳುತ್ತಿದ್ದಾನೆ ಅಂದರೆ #ಅಸಹಾಯಕಡಿಕೆಶಿ ಆಗಿದ್ದಾರೆಂದರ್ಥವೇ? ತಿಹಾರ್ ಜೈಲಿನಿಂದ  ದೊಡ್ಡ ಮೆರವಣಿಗೆ ಮಾಡಿಕೊಂಡು ಬಂದು ಕೆಪಿಸಿಸಿ ಅಧ್ಯಕ್ಷ ಸ್ಥಾನ ಪಡೆದು 2 ವರ್ಷ ಕಳೆದರೂ ಪದಾಧಿಕಾರಿಗಳ ಪಟ್ಟಿಯನ್ನು ಭರ್ತಿ ಮಾಡಲು ಡಿಕೆಶಿಯವರಿಂದ ಸಾಧ್ಯವಾಗಿರಲಿಲ್ಲ. ಈಗ ಉಪಾಧ್ಯಕ್ಷರ ಸ್ಥಾನದ  ಪಟ್ಟಿಯಲ್ಲಿ ಸಿದ್ದರಾಮಯ್ಯ ಸೂಚಿಸಿದ ಹೆಸರುಗಳಿವೆ. ಅಷ್ಟೊಂದು #ಅಸಹಾಯಕಡಿಕೆಶಿ ಆಗಿದ್ದೇಕೆ?’ ಎಂದು ಬಿಜೆಪಿ ಪ್ರಶ್ನಿಸಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.