ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್‌ ಖಾಲಿ ಖಾಲಿಯಾಗಲಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. #SidduVsDKS ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.


COMMERCIAL BREAK
SCROLL TO CONTINUE READING

‘ಒಡೆದ ಮನೆ ಕಾಂಗ್ರೆಸ್ ಪಕ್ಷದಲ್ಲಿ ಮೊದಲೆಲ್ಲಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ಮನಸ್ತಾಪದ ಪಿಸುಮಾತು ರಾಜ್ಯಕ್ಕೆ ಕೇಳಿಸುತ್ತಿತ್ತು. ಈಗ ಅದರ ಸದ್ದು, ದೆಹಲಿವರೆಗೂ ಕೇಳಿಸುತ್ತಿದೆ. ಕೈ ಕಮಾಂಡ್ ತೇಪೆ ಹಚ್ಚುವ ವ್ಯರ್ಥ ಪ್ರಯತ್ನ ಮಾಡುತ್ತಿದೆ. ಇವರ ಒಳಜಗಳದಿಂದಲೇ ರಾಜ್ಯ ಕಾಂಗ್ರೆಸ್‌ ಮುಕ್ತವಾಗಲಿದೆ’ ಎಂದು ಕುಟುಕಿದೆ.


ತಲೆಗೆ ಪಿಸ್ತೂಲ್ ಇಟ್ಟು ಬಾಡಿಗೆಗಿದ್ದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ: ಮನೆ ಮಾಲೀಕ ಅರೆಸ್ಟ್


‘ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವಿನ ಮನಸ್ತಾಪಕ್ಕೆ ಎಷ್ಟೊಂದು ಕಾರಣಗಳಿವೆ. ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿ, ವಿಧಾನಸಭೆಯ ವಿಪಕ್ಷ ಉಪ ನಾಯಕರ ಸ್ಥಾನ, ಸಿಎಂ ಅಭ್ಯರ್ಥಿ ಘೋಷಣೆ ಮತ್ತು ಎಂಎಲ್‌ಸಿ ಅಭ್ಯರ್ಥಿ ಹೀಗೆ ಎಲ್ಲದರಲ್ಲೂ ಮುಸುಕಿನ ಗುದ್ದಾಟ ನಡೆಯುತ್ತಿದೆ’ ಎಂದು ಬಿಜೆಪಿ ಟೀಕಿಸಿದೆ.


ರಾಜಸ್ಥಾನದ ಚಿಂತನಾ ಶಿಬಿರದಲ್ಲಿಮತ್ತು ರಾಷ್ಟ್ರ ರಾಜಧಾನಿಯಲ್ಲಿ ಒಟ್ಟಿಗೆ ನಿಂತು ಎಷ್ಟೇ ಫೋಟೋಶೂಟ್ ಮಾಡಿಸಿಕೊಂಡರೂ, ಒಳ ಬೇಗುದಿ ಶಮನವಾಗುವುದೇ?’ ಎಂದು ಬಿಜೆಪಿ ಪ್ರಶ್ನಿಸಿದೆ.


ಟಿಪ್ಪು ಕೇವಲ ಮತಾಂಧನಷ್ಟೇ ಅಲ್ಲ, ಕನ್ನಡ ದ್ವೇಷಿ ಕೂಡ: ಬಿಜೆಪಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.