ಬೆಂಗಳೂರು: ಮೀರ್ ಸಾದಿಕ್ ಬಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಹರಕೆಯ ಕುರಿಯಾಗಿಸಲು ಹೊರಟಿದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ. ಹರಕೆಯಡಿಕೆ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ರಾಜಸ್ಥಾನದಲ್ಲಿ ಕಾಂಗ್ರೆಸ್ ಚಿಂತನಾ ಸಭೆ ನಡೆಯುತ್ತಿದೆ. ರಾಹುಲ್ ಗಾಂಧಿಗೆ ಮತ್ತೆ ಎಐಸಿಸಿ ಪಟ್ಟ ಕಟ್ಟುವಂತೆ ಚರ್ಚೆ ನಡೆಯುತ್ತಿದೆ. ಇದೇ ವೇಳೆ ಸಿದ್ದರಾಮಯ್ಯ ಬಣ ಡಿಕೆಶಿ ವಿರುದ್ಧ ಒಳಸಂಚು ನಡೆಸುತ್ತಿದೆ. #ಭ್ರಷ್ಟಾಧ್ಯಕ್ಷರಿಗೆ ರಮ್ಯಾ ಮಂಗಳಾರತಿ ಮಾಡಿದರೆ, ಸಿದ್ದರಾಮಯ್ಯ ಆಪ್ತರು ರಮ್ಯಾ ಪರ ನಿಲ್ಲುತ್ತಿದ್ದಾರೆ’ ಎಂದು ಟೀಕಿಸಿದೆ.
ರಾಜಸ್ಥಾನದಲ್ಲಿ ಕಾಂಗ್ರೆಸ್ ಚಿಂತನಾ ಸಭೆ ನಡೆಯುತ್ತಿದೆ. ರಾಹುಲ್ ಗಾಂಧಿಗೆ ಮತ್ತೆ ಎಐಸಿಸಿ ಪಟ್ಟ ಕಟ್ಟುವಂತೆ ಚರ್ಚೆ ನಡೆಯುತ್ತಿದೆ.
ಇದೇ ವೇಳೆ @siddaramaiah ಬಣ ಡಿಕೆಶಿ ವಿರುದ್ಧ ಒಳಸಂಚು ನಡೆಸುತ್ತಿದೆ.#ಭ್ರಷ್ಟಾಧ್ಯಕ್ಷ ರಿಗೆ ರಮ್ಯಾ ಮಂಗಳಾರತಿ ಮಾಡಿದರೆ, ಸಿದ್ದರಾಮಯ್ಯ ಆಪ್ತರು ರಮ್ಯಾ ಪರ ನಿಲ್ಲುತ್ತಿದ್ದಾರೆ.#ಹರಕೆಯಡಿಕೆ
— BJP Karnataka (@BJP4Karnataka) May 13, 2022
‘ಇಷ್ಟು ದಿನಗಳ ಕಾಲ "ಅಂತರ್ಧಾನ" ಸ್ಥಿತಿಯಲ್ಲಿದ್ದ ರಮ್ಯಾ ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸುತ್ತಾ ಹಠಾತ್ ಪ್ರತ್ಯಕ್ಷರಾಗಿದ್ದಾರೆ. ಈ ಅನಿರೀಕ್ಷಿತ ದಾಳಿಯ ಹಿಂದೆ #ಮೀರ್ಸಾದಿಕ್ ಕೈವಾಡವಿದೆ. ಡಿಕೆಶಿ ಅವರೇ ನಿಮ್ಮ ವಿರೋಧಿ ಶಕ್ತಿಗಳ ಕೈ ಮೇಲಾಗುತ್ತಿದೆಯೇ?’ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: PSI Recruitment Scam: ಅಕ್ರಮದ ಮಾಸ್ಟರ್ ಮೈಂಡ್ DySP ಶಾಂತಕುಮಾರ್ ಬಂಧನ
ಇಷ್ಟು ದಿನಗಳ ಕಾಲ "ಅಂತರ್ಧಾನ" ಸ್ಥಿತಿಯಲ್ಲಿದ್ದ ರಮ್ಯಾ ಈಗ ಕೆಪಿಸಿಸಿ ಅಧ್ಯಕ್ಷ @DKShivakumar ವಿರುದ್ಧ ವಾಗ್ದಾಳಿ ನಡೆಸುತ್ತಾ ಹಠಾತ್ ಪ್ರತ್ಯಕ್ಷರಾಗಿದ್ದಾರೆ.
ಈ ಅನಿರೀಕ್ಷಿತ ದಾಳಿಯ ಹಿಂದೆ #ಮೀರ್ಸಾದಿಕ್ ಕೈವಾಡವಿದೆ.
ಡಿಕೆಶಿ ಅವರೇ, ನಿಮ್ಮ ವಿರೋಧಿ ಶಕ್ತಿಗಳ ಕೈ ಮೇಲಾಗುತ್ತಿದೆಯೇ?#ಹರಕೆಯಡಿಕೆ
— BJP Karnataka (@BJP4Karnataka) May 13, 2022
‘ಮಾಜಿ ಸಚಿವ ಎಚ್.ಸಿ.ಮಹಾದೇವಪ್ಪ ಅವರು ರಮ್ಯಾ ಪರ ಬ್ಯಾಟ್ ಬೀಸಿದ್ದಾರೆಯೇ ಹೊರತು ಡಿಕೆಶಿ ಪರವಲ್ಲ! ಮಹಾದೇವಪ್ಪ ಅವರು ಸಿದ್ದರಾಮಯ್ಯರ ಅತ್ಯಾಪ್ತರಲ್ಲೋರ್ವರು. ಸಿದ್ದರಾಮಯ್ಯ ಆಪ್ತರೆಲ್ಲಾ ರಮ್ಯಾ ಪರವಾಗಿ ಧ್ವನಿ ಎತ್ತುತ್ತಿದ್ದಾರೆ. ಇದೆಲ್ಲ ಏನನ್ನು ಸೂಚಿಸುತ್ತದೆ? #ಮೀರ್ಸಾದಿಕ್ ಬಣ ಡಿಕೆಶಿಯನ್ನು ಹರಕೆಯ ಕುರಿಯಾಗಿಸಲು ಹೊರಟಿದೆಯೇ?’ ಎಂದು ಬಿಜೆಪಿ ಕುಟುಕಿದೆ.
ಮಾಜಿ ಸಚಿವ ಮಹಾದೇವಪ್ಪ ಅವರು ರಮ್ಯಾ ಪರ ಬ್ಯಾಟ್ ಬೀಸಿದ್ದಾರೆಯೇ ಹೊರತು ಡಿಕೆಶಿ ಪರವಲ್ಲ!
ಮಹಾದೇವಪ್ಪ, ಸಿದ್ದರಾಮಯ್ಯ ಅತ್ಯಾಪ್ತರಲ್ಲೋರ್ವರು. ಸಿದ್ದರಾಮಯ್ಯ ಆಪ್ತರೆಲ್ಲಾ ರಮ್ಯಾ ಪರವಾಗಿ ಧ್ವನಿ ಎತ್ತುತ್ತಿದ್ದಾರೆ. ಇದೆಲ್ಲ ಏನನ್ನು ಸೂಚಿಸುತ್ತದೆ?#ಮೀರ್ಸಾದಿಕ್ ಬಣ ಡಿಕೆಶಿಯನ್ನು ಹರಕೆಯ ಕುರಿಯಾಗಿಸಲು ಹೊರಟಿದೆಯೇ?#ಹರಕೆಯಡಿಕೆ pic.twitter.com/ZiysFfOZTW
— BJP Karnataka (@BJP4Karnataka) May 13, 2022
‘ಡಿಕೆಶಿಯವರೇ ನಿಮ್ಮ ವಿರುದ್ಧ ಈಗ ನಡೆಯುತ್ತಿರುವುದು #ಮೀರ್ಸಾದಿಕ್ ಬಣದ ಸಂಚು. ಕಾಂಗ್ರೆಸ್ ಪಕ್ಷದಲ್ಲಿ ನಿಮ್ಮನ್ನು ಹಾಗೂ ನಿಮ್ಮ ತಂಡವನ್ನು ರೌಡಿಪಟ್ಟಿಗೆ ಸೇರಿಸುವ ತಂತ್ರ ನಡೆಯುತ್ತಿದೆ. ನನಗೆ ಕಾಂಗ್ರೆಸ್ ಪಕ್ಷದಲ್ಲಿ ಸ್ಥಾನಮಾನ ಕೊಡಿಸಿದ್ದು ರಾಹುಲ್ ಗಾಂಧಿ ಅವರೇ ಹೊರತು ಬೇರೆ ಯಾವುದೇ ಅವಕಾಶವಾದಿಗಳಲ್ಲ ಎಂದು ರಮ್ಯಾ ಹೇಳಿದ್ದಾರೆ. ಮುಂದಿನ ಅಧ್ಯಕ್ಷ ರಾಹುಲ್ ಗಾಂಧಿ ಆಗಲಿ ಎಂದು ರಾಜಸ್ಥಾನದ ಕಾಂಗ್ರೆಸ್ ಚಿಂತನ ಶಿಬಿರ ಹೇಳಲಾಗಿದೆ. ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಅವರ ಬೆಂಬಲಿಗರು ಹೇಳಿದ್ದಾರೆ. ಇದೆಲ್ಲಾ ನೋಡಿದ್ರೆ ಡಿಕೆಶಿ ಹರಕೆಯ ಕುರಿಯಾಗುವುದರಲ್ಲಿ ಸಂದೇಹವಿಲ್ಲ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ನನಗೆ ಕಾಂಗ್ರೆಸ್ ಪಕ್ಷದಲ್ಲಿ ಸ್ಥಾನಮಾನ ಕೊಡಿಸಿದ್ದು ರಾಹುಲ್ ಗಾಂಧಿ ಅವರೇ ಹೊರತು ಬೇರೆ ಯಾವುದೇ ಅವಕಾಶವಾದಿಗಳಲ್ಲ - ರಮ್ಯಾ
ಮುಂದಿನ ಅಧ್ಯಕ್ಷ ರಾಹುಲ್ ಗಾಂಧಿ ಆಗಲಿ - ಚಿಂತನ ಶಿಬಿರ, ರಾಜಸ್ಥಾನ
ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ - ಬೆಂಬಲಿಗರು
ಹರಕೆಯ ಕುರಿ - ಡಿಕೆಶಿ#ಹರಕೆಯಡಿಕೆ
— BJP Karnataka (@BJP4Karnataka) May 13, 2022
ಇದನ್ನೂ ಓದಿ: ಜನತಾ ಜಲಧಾರೆ ಮೂಲಕ ಮಿಷನ್ 123 ಯುದ್ಧ ಆರಂಭ: ಹೆಚ್.ಡಿ.ಕುಮಾರಸ್ವಾಮಿ ಘೋಷಣೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.