ಬೆಂಗಳೂರು: ಮೀರ್‌ ಸಾದಿಕ್‌ ‌ಬಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಹರಕೆಯ ಕುರಿಯಾಗಿಸಲು ಹೊರಟಿದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.  ಹರಕೆಯಡಿಕೆ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ರಾಜಸ್ಥಾನದಲ್ಲಿ ಕಾಂಗ್ರೆಸ್ ಚಿಂತನಾ ಸಭೆ ನಡೆಯುತ್ತಿದೆ. ರಾಹುಲ್ ಗಾಂಧಿಗೆ ಮತ್ತೆ ಎಐಸಿಸಿ ಪಟ್ಟ ಕಟ್ಟುವಂತೆ ಚರ್ಚೆ ನಡೆಯುತ್ತಿದೆ. ಇದೇ ವೇಳೆ ಸಿದ್ದರಾಮಯ್ಯ ಬಣ ಡಿಕೆಶಿ ವಿರುದ್ಧ ಒಳಸಂಚು ನಡೆಸುತ್ತಿದೆ. #ಭ್ರಷ್ಟಾಧ್ಯಕ್ಷರಿಗೆ ರಮ್ಯಾ ಮಂಗಳಾರತಿ ಮಾಡಿದರೆ, ಸಿದ್ದರಾಮಯ್ಯ ಆಪ್ತರು ರಮ್ಯಾ ಪರ ನಿಲ್ಲುತ್ತಿದ್ದಾರೆ’ ಎಂದು ಟೀಕಿಸಿದೆ.


ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸುತ್ತಾ ಹಠಾತ್ ಪ್ರತ್ಯಕ್ಷರಾಗಿದ್ದಾರೆ. ಈ ಅನಿರೀಕ್ಷಿತ ದಾಳಿಯ ಹಿಂದೆ #ಮೀರ್‌ಸಾದಿಕ್‌ ಕೈವಾಡವಿದೆ. ಡಿಕೆಶಿ ಅವರೇ ನಿಮ್ಮ ವಿರೋಧಿ ಶಕ್ತಿಗಳ ಕೈ ಮೇಲಾಗುತ್ತಿದೆಯೇ?’ ಎಂದು ಪ್ರಶ್ನಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: PSI Recruitment Scam: ಅಕ್ರಮದ ಮಾಸ್ಟರ್ ಮೈಂಡ್ DySP ಶಾಂತಕುಮಾರ್ ಬಂಧನ


ರಾಹುಲ್ ಗಾಂಧಿ ಆಗಲಿ ಎಂದು ರಾಜಸ್ಥಾನದ ಕಾಂಗ್ರೆಸ್ ಚಿಂತನ ಶಿಬಿರ ಹೇಳಲಾಗಿದೆ. ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಅವರ ಬೆಂಬಲಿಗರು ಹೇಳಿದ್ದಾರೆ. ಇದೆಲ್ಲಾ ನೋಡಿದ್ರೆ ಡಿಕೆಶಿ ಹರಕೆಯ ಕುರಿಯಾಗುವುದರಲ್ಲಿ ಸಂದೇಹವಿಲ್ಲ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.


ಜನತಾ ಜಲಧಾರೆ ಮೂಲಕ ಮಿಷನ್ 123 ಯುದ್ಧ ಆರಂಭ: ಹೆಚ್.ಡಿ.ಕುಮಾರಸ್ವಾಮಿ ಘೋಷಣೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.