ಬೆಂಗಳೂರು: ಲೋಕಾಯುಕ್ತಕ್ಕೆ ಮೊಳೆ ಹೊಡೆದು, #ACBಯನ್ನು #ActiveCollectionBureau ರೀತಿ ಬಳಸಿಕೊಂಡಿದ್ದೇ ಸಿದ್ದರಾಮಯ್ಯ ಸಾಧನೆ ಎಂದು ಬಿಜೆಪಿ ಟೀಕಿಸಿದೆ. ಈ ಬಗ್ಗೆ ಬುಧವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಸಿದ್ದರಾಮಯ್ಯರಿಗೆ ಅಂದು ತನಿಖೆ ಮಾಡಿಸುವ ತಾಕತ್ತು ಇರಲಿಲ್ಲವೇ ಅಥವಾ ತನಿಖೆಯಾದರೆ ಜೈಲಿಗೆ ಹೋಗಬೇಕಾದೀತು ಎಂಬ ಭಯ ಕಾಡಿತ್ತೇ? ಪಂಚೆ ಮಾತ್ರ ಶುಭ್ರ, ಮೈಯೆಲ್ಲಾ ಭ್ರಷ್ಟಾಚಾರದ ಕೊಳೆ!’ ಅಂತಾ ಕುಟುಕಿದೆ.


COMMERCIAL BREAK
SCROLL TO CONTINUE READING

‘ಗಾಳಿಯಲ್ಲಿ ಗುಂಡು ಹೊಡೆದಂತೆ, ಕೇವಲ ಸಾಕ್ಷ್ಯರಹಿತ ಆರೋಪ ಮಾಡಿದ್ದೇ ಸಿದ್ದರಾಮಯ್ಯ ಸಾಧನೆ! ಸಿದ್ದರಾಮಯ್ಯನವರೇ, ಯಾವ ಕಾರಣಕ್ಕಾಗಿ ನಿಮಗೆ ದುಬಾರಿ ವಾಚ್ ಉಡುಗೊರೆಯಾಗಿ ಸಿಕ್ಕಿದ್ದು? ನೀವು #WatchPe ಮೂಲಕ ಪಡೆದ ಲಂಚವೆಷ್ಟು?’ ಎಂದು ಬಿಜೆಪಿ ಪ್ರಶ್ನಿಸಿದೆ.


ಪ್ರಧಾನಿ ಮೋದಿ ಮತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಿ ಮನೆಗೆ ಹೋಗಲಿ: ಸಿದ್ದರಾಮಯ್ಯ


‘ಈಗ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರು ಇಂಧನ ಸಚಿವರಾಗಿದ್ದಾಗ ಸೋಲಾರ್ ಹಗರಣದಲ್ಲಿ "ಲಕ್ಷ್ಮಿ ಭಾಗ್ಯ" ಪಡೆದಿದ್ದು ಯಾರು? ಸಂಬಂಧಿಕರೇ ಸೋಲಾರ್ ಉತ್ಪಾದಕರಾಗಿದ್ದು ಯಾರ ಕೃಪೆಯಿಂದ? ಈ ಹಗರಣದಲ್ಲಿ #LaxmiPayಯಿಂದ ಎಷ್ಟು ಲಂಚ, #PayDK ಆಗಿದೆ? ಮೌನವೇಕೆ? #SayDK’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.


‘ಸಿದ್ದರಾಮಯ್ಯ ಅವಧಿಯಲ್ಲಿ ಸಚಿವರಾಗಿದ್ದ ಆಂಜನೇಯ ಅವರ "ವಿಜಯ ಬ್ಯಾಂಕ್" ಖಾತೆಯಲ್ಲಿ ಠೇವಣಿಯಾಗಿದ್ದು ಯಾರ ಹಣ? ಆಯ್ಕೆ 1 – ಸಿದ್ದರಾಮಯ್ಯ, 2 - ಅಂದಿನ ಕಾಂಗ್ರೆಸ್ ಸಿಎಂ, 3 - ಇಂದಿನ ವಿಪಕ್ಷ ನಾಯಕ. #BankPe ಮೂಲಕ ಸಿದ್ದರಾಮಯ್ಯಗೆ ಎಷ್ಟು ಸಂದಾಯವಾಗಿದೆ? ಡೀಯರ್ ಕಾಂಗ್ರೆಸ್ ಇದಕ್ಕೆ ಒಂದೇ ವಾಕ್ಯದಲ್ಲಿ ಉತ್ತರಿಸಿ’ ಅಂತಾ ಬಿಜೆಪಿ ಕುಟುಕಿದೆ.


ಷ್ಟರಾಮಯ್ಯ?’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಪಿಎಸ್ಐ ಅಕ್ರಮ ನೇಮಕಾತಿ : ಪುಟ್ ಪಾತ್ ನಲ್ಲಿ ಕೋಟಿ ಹಣ ಪಡೆದಿದ್ದ ಶಾಂತಕುಮಾರ್ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ