ಬೆಂಗಳೂರು: ಕೆಪಿಸಿಸಿ ಅಧ‍್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದೆ ರಮ್ಯಾ ನಡುವಿನ ಕಲಹದಲ್ಲಿ ‘ಕೇಸರಿ’ ಪಡೆ ಎಂಟ್ರಿಯಾಗಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘"ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ", ಇದು #ಅಸಹಾಯಕಡಿಕೆಶಿ ಅವರ ಸದ್ಯದ ಸ್ಥಿತಿ’ ಎಂದು ವ್ಯಂಗ್ಯವಾಡಿದೆ.
‘ಡಿಕೆಶಿ ಅವರೇ ಬೆಳೆಸಿದ ರಮ್ಯಾ ಈಗ ಡಿಕೆಶಿಗೆ ಸಾಮಾಜಿಕ ಮಾಧ್ಯಮದಲ್ಲಿ ಬುದ್ಧಿ ಮಾತು ಹೇಳುತ್ತಿದ್ದಾರೆ. ರಮ್ಯಾ ಅವರನ್ನು #ಭ್ರಷ್ಟಾಧ್ಯಕ್ಷ ರ ವಿರುದ್ಧ ಛೂಬಿಟ್ಟಿದ್ದು #ಮೀರ್‌ಸಾದಿಕ್ ಅವರಿರಬಹುದೇ? ಕಾಂಗ್ರೆಸ್ ಒಂದು ಒಡೆದ ಮನೆ. ಇಲ್ಲಿ ಯಾರ ಅಭಿಪ್ರಾಯವನ್ನು ಯಾರು ಸಮರ್ಥಿಸುತ್ತಾರೆ, ಯಾರು ವಿರೋಧಿಸುತ್ತಾರೆ ಎಂಬುದು ಯಾರಿಗೂ ಗೊತ್ತಿಲ್ಲ. ಎಂ.ಬಿ.ಪಾಟೀಲ್ ಹಾಗೂ ಅಶ್ವತ್ಥ್ ನಾರಾಯಣ್ ಅವರ ಭೇಟಿಯ ಬಗ್ಗೆ ಮಾತನಾಡಿದ #ಅಸಹಾಯಕಡಿಕೆಶಿ ಅವರೀಗ ತಮ್ಮ ಸ್ವಂತ ಮನೆಯಲ್ಲೇ ಉಪವಾಸ ಮಾಡುವ ಸ್ಥಿತಿಯಲ್ಲಿದ್ದಾರೆ. ಹೀಗೇಕಾಯಿತು ಡಿಕೆಶಿಯವರೇ?’ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ಮದುವೆ ದಿನವೇ ಪರೀಕ್ಷೆ ಬರೆದು ಮಾದರಿಯಾದ ಮಂಡ್ಯ ವಿದ್ಯಾರ್ಥಿನಿ
‘ಅಕ್ರಮ ಸಂಪಾದನೆಯ ಹಣದ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಏನೋ ಸಾಧನೆ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಡಿಕೆಶಿ ಅವರೀಗ #ಅಸಹಾಯಕಡಿಕೆಶಿ ಆಗಿದ್ದಾರೆ. ಕೆಪಿಸಿಸಿ ಮನೆಯಲ್ಲಿ ಈಗ #ಮೀರ್‌ಸಾದಿಕ್ ಹಾವಳಿ ಜಾಸ್ತಿಯಾಗಿದ್ದು ನಿಜವೇ? ಗುಂಪುಗಾರಿಕೆ, ಬಣ, ಉಪಬಣ, ಆ ಬಣ ಈ ಬಣಗಳ ನಡುವೆಯೂ ಒಗ್ಗಟ್ಟಿನ ಮಂತ್ರವೇಕೆ?’ ಎಂದು ಕುಟುಕಿದೆ.
‘ತನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ವಿ.ಎಸ್.ಉಗ್ರಪ್ಪ ಅವರನ್ನು ಪಕ್ಕದಲ್ಲಿ ಕೂರಿಸಿಕೊಳ್ಳುವಷ್ಟು ಡಿ.ಕೆ.ಶಿವಕುಮಾರ್ ಅಸಹಾಯಕರೇ? ಅಲ್ಪಸಂಖ್ಯಾತ ಸಲೀಂ ಅವರನ್ನು ಕಿತ್ತೊಗೆದು ಉಗ್ರಪ್ಪ ಜೊತೆ ಪತ್ರಿಕಾಗೋಷ್ಠಿ ಮಾಡುವ ಮೂಲಕ ಯಾವ ಸಂದೇಶ ನೀಡುತ್ತಿದ್ದೀರಿ? ನೀವೆಂತಹ ಬಂಡೆ, ಕಲ್ಲುಬಂಡೆಯೋ ಅಥವಾ ಟೊಳ್ಳು ಬಂಡೆಯೋ?’ ಎಂದು ಬಿಜೆಪಿ ಟೀಕಿಸಿದೆ.
ಇದನ್ನೂ ಓದಿ: ಸ್ವಗ್ರಾಮದಲ್ಲೇ ನಡೆದಿರುವ ದಲಿತ ಮಹಿಳೆ ಮೇಲಿನ ಅತ್ಯಾಚಾರ ಆರಗ ಜ್ಞಾನೇಂದ್ರರ ಗಮನಕ್ಕೇ ಬಂದಿಲ್ಲವೇ?
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.