ಬೆಂಗಳೂರು: ತಂದೆ ಸಿದ್ದರಾಮಯ್ಯನವರಿಗೆ ಇದು ಕೊನೆ ಚುನಾವಣೆ. ವಯಸ್ಸಿನ ಸಮಸ್ಯೆ ಕಾರಣಕ್ಕೆ ಬಾದಾಮಿ ಕ್ಷೇತ್ರಕ್ಕೆ ಹೋಗಿ ಬರುವುದು ಅವರಿಗೆ ಕಷ್ಟವಾಗಲಿದೆ. ಹೀಗಾಗಿ ಬೆಂಗಳೂರು ಸುತ್ತಮುತ್ತಲಿನ ಕ್ಷೇತ್ರ ಆರಿಸಿಕೊಳ್ಳಲು ಅವರು ಆಸಕ್ತಿ ಹೊಂದಿದ್ದಾರೆಂಬ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ವ್ಯಂಗ್ಯವಾಡಿದೆ.


COMMERCIAL BREAK
SCROLL TO CONTINUE READING

ಬುಧವಾರ #ಸಿದ್ದುಟೂರಿಂಗ್‌ಟಾಕೀಸ್ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಒಮ್ಮೆ ದಕ್ಷಿಣ, ಮತ್ತೊಮ್ಮೆ ಉತ್ತರ! ಮುಂದಿನ ಚುನಾವಣೆಗೆ ಸುರಕ್ಷಿತ ಕ್ಷೇತ್ರ ಹುಡುಕುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮದು ರಾಜಕೀಯ ಆಟವೋ ಅಥವಾ ಫುಟ್ಬಾಲ್ ಆಟವೊ? ಗೋಲು ಹೊಡೆಯಲಾರಿರಿ, ಗುರಿಯ ಮುಟ್ಟಲಾರಿರಿ, ನಿವೃತ್ತಿ ಘೋಷಣೆ ಮಾಡಬಾರದೇಕೆ?’ ಎಂದು ಪ್ರಶ್ನಿಸಿದೆ.


ರಾಜಸ್ಥಾನದಲ್ಲಿ ಐಸಿಸ್ ಮಾದರಿ ಹತ್ಯೆ: ಉಗ್ರರನ್ನು ಗಲ್ಲಿಗೇರಿಸುವಂತೆ ಬಿಜೆಪಿ ಆಗ್ರಹ


‘ಪ್ರತಿ ಬಾರಿಯೂ ಸಿದ್ದರಾಮಯ್ಯನವರು ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳುವುದರ ಅರ್ಥವೇ ಬೇರೆಯಿದೆ. ಒಮ್ಮೆ ವರುಣ, ಮತ್ತೊಮ್ಮೆ ಚಾಮುಂಡೇಶ್ವರಿ, ಮಗದೊಮ್ಮೆ ಬಾದಾಮಿ ಈ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಕೊನೆಯ ಚುನಾವಣೆ ಎಂಬರ್ಥದಲ್ಲಿ ಸಿದ್ದರಾಮಯ್ಯ ಹೇಳುತ್ತಿರುವುದು, ರಾಜಕೀಯ ನಿವೃತ್ತಿಯ ಕೊನೆಯ ಚುನಾವಣೆಯೆಂದಲ್ಲ!’ ಎಂದು ಬಿಜೆಪಿ ಟ್ವೀಟ್ ಮಾಡಿದೆ.


ಸಿದ್ದರಾಮಯ್ಯ ಸರ್ಕಾರಿ ನೌಕರರಲ್ಲ, ಆದರೂ ವರ್ಗಾವಣೆಯಾಗುತ್ತಲೇ ಇದ್ದಾರೆ. ಅಧಿಕಾರದ ಮೋಹಕ್ಕಾಗಿ, ಸುರಕ್ಷಿತ ಕ್ಷೇತ್ರ ಹುಡುಕುತ್ತಿರುವ ಸಿದ್ದರಾಮಯ್ಯನವರೇ, ಸ್ಪರ್ಧಿಸಲು ಒಂದು ಕ್ಷೇತ್ರ ಸಿಗುತ್ತಿಲ್ಲವೆಂದಾದರೇ ನಿಮ್ಮನ್ನು ಜನರು ತಿರಸ್ಕರಿಸಿದ್ದಾರೆ ಎಂದರ್ಥವಲ್ಲವೇ? ಬಾದಾಮಿ ಕ್ಷೇತ್ರಕ್ಕೆ ಹೋಗಿ ಬರಲು ವಯಸ್ಸಿನ ಸಮಸ್ಯೆ ಕಾಡುತ್ತದೆ. ಆದರೆ ಮುಖ್ಯಮಂತ್ರಿಯಾಗಲು ಯಾವುದೇ ಸಮಸ್ಯೆ ಕಾಡುವುದಿಲ್ಲ! ವಿಪರ್ಯಾಸವಲ್ಲದೆ ಮತ್ತೇನು?’ ಎಂದು ಬಿಜೆಪಿ ಟೀಕಿಸಿದೆ.


ಅನುದಾನ ಸಿಕ್ಕರೂ ಹೊಸ ಫ್ಲೈ ಓವರ್ ನಿರ್ಮಾಣಕ್ಕೆ ಪಾಲಿಕೆ ಪರದಾಟ ..!


‘ಒಲೈಕೆಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಮಾಸ್ಟರ್‌ ಡಿಗ್ರಿ ಪಡೆದಿದ್ದಾರೆ. ಎಷ್ಟು ಓಲೈಕೆ ಮಾಡಿದರೇನು ಫಲ, ಸಿದ್ದರಾಮಯ್ಯ ಅಲೆಯೂ ಇಲ್ಲ, ಒಂದು ಗಟ್ಟಿಯಾದ ನೆಲೆಯೂ ಇಲ್ಲ!’ ಎಂದು ಬಿಜೆಪಿ ಕುಟುಕಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ