ಬೆಂಗಳೂರು: ಚುನಾವಣೆಗೆ ಸ್ಪರ್ಧಿಸದೆ ಇದ್ದರೂ, ಜನರಿಂದ ಆಯ್ಕೆ ಆಗದೆ ಇದ್ದರೂ, ಜನಪ್ರತಿನಿಧಿ ಅಲ್ಲದೆ ಇದ್ದರೂ #ShadowCM ಯತೀಂದ್ರ ಸಿದ್ದರಾಮಯ್ಯರ ಕಾರುಬಾರು ಜೋರಾಗಿದೆ ಎಂದು ಬಿಜೆಪಿ ಟೀಕಿಸಿದೆ.
ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಬಿಜೆಪಿ, ‘ರಾಜ್ಯದಲ್ಲಿ ವರ್ಗಾವಣೆ ದಂಧೆಯ ಬಹುದೊಡ್ಡ ಜವಾಬ್ದಾರಿ ಹೆಗಲ ಮೇಲೆ ಇದ್ದರೂ, ಯತೀಂದ್ರರವರು ಅದ್ಧೂರಿ ಸ್ವಾಗತ ಪಡೆದು ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಕಾಮಗಾರಿಗಳನ್ನು ಉದ್ಘಾಟಿಸಿದ್ದಾರೆ. ಇದು ಯಾವ ಪ್ರಜಾಪ್ರಭುತ್ವ!’ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ಸೀಬೆ ಹಣ್ಣಿನ ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜಗಳಿವೆ ಗೊತ್ತಾ..?
ಇನ್ನು ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ‘ಯಾವ ಅಧಿಕಾರದಲ್ಲಿ ಸಿದ್ದರಾಮಯ್ಯನವರ ಮಗ ಸರ್ಕಾರಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸುತ್ತಾರೆ? ಕಾಮಗಾರಿಗಳನ್ನು ಉದ್ಘಾಟನೆ ಮಾಡುತ್ತಾರೆ? ಸಿಎಂ ಸಿದ್ದರಾಮಯ್ಯನವರ ಪರವಾಗಿ ಉದ್ಘಾಟನೆ ಮಾಡುವುದಕ್ಕೆ ಇದೇನು ಅವರ ಮನೆಯ ಕಾರ್ಯಕ್ರಮವಾ?’ ಎಂದು ಪ್ರಶ್ನಿಸಿದ್ದಾರೆ.
ಸರ್ಕಾರಿ ಕಾರ್ಯಕ್ರಮದಲ್ಲಿ ಯತೀಂದ್ರ ಭಾಗಿ!
ಸಿಎಂ ಸಿದ್ದರಾಮಯ್ಯನವರು ಪ್ರತಿನಿಧಿಸುವ ವರುಣಾ ಕ್ಷೇತ್ರದ ತುಂಬಲ ಗ್ರಾಮದಲ್ಲಿ ನಡೆದ ನೂತನ ಹಾಲಿನ ಡೈರಿ ಮೇಲ್ಛಾವಣಿ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಬಳಿಕ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನೂತನ ಸಂಜೀವಿನಿ ಕಟ್ಟಡದ ಉದ್ಘಾಟನೆಯಲ್ಲೂ ಅವರು ಭಾಗಿಯಾಗಿದ್ದರು. ಯಾವುದೇ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಯತೀಂದ್ರ ಅವರು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿ: ಮೊಹರಂ ನಿಮಿತ್ಯ ಹಾಕಿದ ಕೆಂಡದಲ್ಲಿ ಕಂಬಳಿ ಹಾಸಿ ಕುಳಿತ ವ್ಯಕ್ತಿ..!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.