ಸಿಎಂ ಸಿದ್ದರಾಮಯ್ಯರ ಪುತ್ರ ವ್ಯಾಮೋಹ ಧೃತರಾಷ್ಟ್ರನನ್ನೇ ಮೀರಿಸುವಂತಿದೆ!
ಆಶ್ರಯ ಸಮಿತಿ ಅಧ್ಯಕ್ಷರಾಗಿ ಯತೀಂದ್ರರನ್ನು ನೇಮಕ ಮಾಡಲಾಗಿದೆ. 15 ದಿನಗಳ ಹಿಂದೆಯೇ ನೇಮಕ ಮಾಡಿ ಆದೇಶ ಹೊರಡಿಸಲಾಗಿದ್ದು, ಇಂದು (ಆಗಸ್ಟ್ 27) ಬೆಳಕಿಗೆ ಬಂದಿದೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ಸಾಂವಿಧಾನಿಕ ಹುದ್ದೆ ನೀಡಿರುವ ವಿಚಾರವಾಗಿ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಬಿಜೆಪಿ, ‘ಸಿಎಂ ಸಿದ್ದರಾಮಯ್ಯರ ಪುತ್ರ ವ್ಯಾಮೋಹ ಧೃತರಾಷ್ಟ್ರನನ್ನೇ ಮೀರಿಸುವಂತಿದೆ!’ ಎಂದು ಟೀಕಿಸಿದೆ.
ಇದನ್ನೂ ಓದಿ: ಮೋದಿ ನೋಡ್ಲಿ ಅಂತ ಬಿಜೆಪಿ ರಾಜ್ಯಾಧ್ಯಕ್ಷರು ಬೀದಿಯಲ್ಲಿ ನಿಂತಿದ್ದರು: ದಿನೇಷ್ ಗುಂಡೂರಾವ್
‘ಸಿಎಂ ಸಿದ್ದರಾಮಯ್ಯರ ಪುತ್ರ ವ್ಯಾಮೋಹ, ಧೃತರಾಷ್ಟ್ರನನ್ನೇ ಮೀರಿಸುವಂತಿದೆ. ಸರ್ಕಾರದ ಆಡಳಿತದಲ್ಲಿ ಹಾಗೂ ವರ್ಗಾವಣೆ ದಂಧೆಯಲ್ಲಿ ಇನ್ನಿಲ್ಲದಂತೆ ಹಸ್ತಕ್ಷೇಪ ಮಾಡುವ ಆರೋಪ ಹೊತ್ತಿರುವ ಶ್ಯಾಡೋ ಸಿಎಂ ಯತೀಂದ್ರರಿಗೆ ಈಗ ಸಾಂವಿಧಾನಿಕ ಹುದ್ದೆಯನ್ನು ದಯಪಾಲಿಸಲಾಗಿದೆ, ಅದು ಗುಟ್ಟಾಗಿ! ತಮ್ಮದು ಪಾರದರ್ಶಕ ಸರ್ಕಾರವೆಂದು ಬೊಗಳೆ ಬಿಡುವ ಸಿದ್ದರಾಮಯ್ಯರವರು, ತಮ್ಮ ಪುತ್ರನಿಗೆ ನೀಡಿದ ಹುದ್ದೆಯ ನೇಮಕಾತಿ ಆದೇಶವನ್ನು ಇಷ್ಟು ದಿನ ಗುಟ್ಟಾಗಿರಿಸಿದ್ದರು!’ ಎಂದು ಬಿಜೆಪಿ ಕುಟುಕಿದೆ.
ಭಾರತವನ್ನು ಕಾಪಾಡಲು ನಾವೆಲ್ಲಾ ಒಂದಾಗಬೇಕಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ
ಡಾ.ಯತೀಂದ್ರ ಸಿದ್ದರಾಮಯ್ಯಗೆ ಸಾಂವಿಧಾನಿಕ ಹುದ್ದೆ!
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯನವರಿಗೆ ಸಾಂವಿಧಾನಿಕ ಹುದ್ದೆ ನೀಡಲಾಗಿದೆ. ಆಶ್ರಯ ಸಮಿತಿ ಅಧ್ಯಕ್ಷರಾಗಿ ಯತೀಂದ್ರರನ್ನು ನೇಮಕ ಮಾಡಲಾಗಿದೆ. 15 ದಿನಗಳ ಹಿಂದೆಯೇ ನೇಮಕ ಮಾಡಿ ಆದೇಶ ಹೊರಡಿಸಲಾಗಿದ್ದು, ಇಂದು (ಆಗಸ್ಟ್ 27) ಬೆಳಕಿಗೆ ಬಂದಿದೆ. ಸ್ವತಃ ಯತೀಂದ್ರ ಅವರೇ ತಮಗೆ ಸಾಂವಿಧಾನಿಕ ಹುದ್ದೆ ನೀಡಿರುವ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಸದ್ದಿಲ್ಲದೇ ಸಿದ್ದರಾಮಯ್ಯನವರು ತಮ್ಮ ಪುತ್ರನಿಗೆ ಸಾಂವಿಧಾನಿಕ ಹುದ್ದೆ ನೀಡಿದ್ರಾ? ಎನ್ನುವ ಪ್ರಶ್ನೆ ಉದ್ಭಸಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.