BJP: ಬಿಜೆಪಿ ಕಾರ್ಯಕಾರಿಣಿಯಲ್ಲಿ ಎರಡು ಮಹತ್ವದ ನಿರ್ಣಯ..!
ಸಚಿವ ಸಂಪುಟ ವಿಸ್ತರಣೆ ಬಿ.ಎಸ್. ಯಡಿಯೂರಪ್ಪ ಅವರ ಪರಮಾಧಿಕಾರ
ಬೆಳಗಾವಿ: ನಗರದಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಎರಡು ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin kumar kateel), ಗ್ರಾಮ ಸ್ವರಾಜ್ ಪರಿಕಲ್ಪನೆ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆಸಲಾಗಿದೆ. ಗ್ರಾಮಗಳನ್ನು ಅಭಿವೃದ್ಧಿ ಮಾಡುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
Congress: ಗ್ರಾ.ಪಂ. ಚುನಾವಣೆ: ಕ್ಷೇತ್ರವಾರು ಉಸ್ತುವಾರಿಗಳನ್ನು ನೇಮಕ ಮಾಡಿದ ಕಾಂಗ್ರೆಸ್!
ಎರಡು ಪ್ರಮುಖ ವಿಧೇಯಕ ಜಾರಿಗೆ ತರುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಗೋಹತ್ಯೆ ನಿಷೇಧ, ಲವ್ ಜಿಹಾದ್ ನಿಷೇಧ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
B.S.Yediyurappa: 'ಸಿಎಂ ಯಡಿಯೂರಪ್ಪ ಆಧುನಿಕ ಹಿಟ್ಲರ್'
ನಂತರ ಮಾತನಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪರಮಾಧಿಕಾರವಾಗಿದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
Nikhil: ಮಂಡ್ಯದಿಂದ ಲೋಕಸಭೆಗೆ ನಿಖಿಲ್ ಮತ್ತೊಮ್ಮೆ ಸ್ಪರ್ಧೆ: ಸುಳಿವು ಕೊಟ್ಟ ಹೆಚ್ ಡಿಕೆ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಕುರಿತಾಗಿ ಅನಗತ್ಯ ಹೇಳಿಕೆ ನೀಡಬಾರದು. ಒಂದು ವೇಳೆ ಅನಗತ್ಯವಾಗಿ ಹೇಳಿಕೆ ನೀಡಿದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
H D Kumaraswamy: ಕಾಂಗ್ರೆಸ್ ಜೊತೆ ಸರ್ಕಾರ ಮಾಡಿ ಕೆಟ್ಟೆ: 'ಬಿಗ್ ಬಾಂಬ್ ಸ್ಫೋಟಿಸಿದ' ಹೆಚ್ ಡಿಕೆ!
ಸಂಪುಟ ವಿಸ್ತರಣೆ ಬಗ್ಗೆ ಕೆಲವರು ನೋವು ವ್ಯಕ್ತಪಡಿಸಿದ್ದಾರೆ. ಆದರೆ, ಯಾರೂ ಅನಗತ್ಯ ಹೇಳಿಕೆ ನೀಡಬಾರದು. ಸಂಪುಟ ವಿಸ್ತರಣೆ ಮತ್ತು ಪುನಾರಚನೆ ವಿಚಾರ ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟಿದ್ದು. ಯಡಿಯೂರಪ್ಪನವರೇ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.