ಭಯೋತ್ಪಾದಕ ಕೃತ್ಯಕ್ಕೆ ಬೆಂಬಲ ಅಥವಾ ನೆರವು ನೀಡುವವರ ಹೆಡೆಮುರಿ ಕಟ್ಟುತ್ತೇವೆ: ಕಟೀಲ್
ಬಾಂಬ್ ಸ್ಫೋಟದ ಹಿಂದೆ ಅಂತರಾಜ್ಯ ದೇಶದ್ರೋಹಿಗಳ ಕೈವಾಡ ಪತ್ತೆ ಹಚ್ಚಲು #NIA ಕಾರ್ಯತತ್ಪರವಾಗಿದೆ. ನಮ್ಮ ಉನ್ನತ ಪೊಲೀಸ್ ಅಧಿಕಾರಿಗಳು ಸಹಕರಿಸುತ್ತಿದ್ದಾರೆ’ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬೆಂಗಳೂರು: ಮಂಗಳೂರಿನ ಆಟೋರಿಕ್ಷಾದಲ್ಲಿ ನಡೆದ ಸ್ಫೋಟದ ಹಿಂದೆ ಮತೀಯ ಶಕ್ತಿಗಳು ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಕದಡುವ ಪ್ರಯತ್ನ ಮಾಡಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದೆ. ಮೂಲಭೂತವಾದಿಗಳ ಇಂತಹ ಭಯೋತ್ಪಾದಕ ಕೃತ್ಯಕ್ಕೆ ಬೆಂಬಲ ಅಥವಾ ನೆರವು ನೀಡುವವರಿಗೂ ಹೆಡೆಮುರಿ ಕಟ್ಟಲು ನಮ್ಮ ಪೊಲೀಸ್ ವ್ಯವಸ್ಥೆ ಸನ್ನದ್ಧವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ದೇಶದ್ರೋಹಿ ಸಂಘಟನೆಗಳನ್ನು ಬ್ಯಾನ್ ಮಾಡಿದ ಬಳಿಕ ವಿಧ್ವಂಸಕ ಕೃತ್ಯಗಳನ್ನು ಮಾಡಿ ಬಾಲ ಬಿಚ್ಚಲು ಕೆಲವರು ಹೊರಟಿದ್ದಾರೆ. ಭಯೋತ್ಪಾದನೆಯ ವಿರುದ್ಧದ ನಮ್ಮ ಸಮರದಲ್ಲಿ ನಾಗರಿಕರ ಸಹಕಾರ ಮುಖ್ಯ. ಕರ್ನಾಟಕದಲ್ಲಿ ನಮ್ಮ ಪೊಲೀಸ್ ಇಲಾಖೆ ಮಂಗಳೂರಿನ ಸ್ಫೋಟದ ಮೂಲ ಪತ್ತೆಹಚ್ಚುವಲ್ಲಿ ನಿರತವಾಗಿದ್ದು, ಕೇಂದ್ರದಿಂದ ಅಗತ್ಯ ನೆರವು ನೀಡಲಾಗಿದೆ’ ಎಂದು ಹೇಳಿದ್ದಾರೆ.
ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ : ನಕಲಿ ಆಧಾರ್ ಕಾರ್ಡ್‌ನ ಅಸಲಿ ವ್ಯಕ್ತಿ ತುಮಕೂರಿನಲ್ಲಿ ಪತ್ತೆ
ಬಾಂಬ್ ಸ್ಫೋಟದ ಹಿಂದೆ ಅಂತರಾಜ್ಯ ದೇಶದ್ರೋಹಿಗಳ ಕೈವಾಡ ಪತ್ತೆ ಹಚ್ಚಲು #NIA ಕಾರ್ಯತತ್ಪರವಾಗಿದೆ. ನಮ್ಮ ಉನ್ನತ ಪೊಲೀಸ್ ಅಧಿಕಾರಿಗಳು ಸಹಕರಿಸುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.
ಮಂಗಳೂರು ಸ್ಪೋಟ ಪ್ರಕರಣದ ಜಾಲವನ್ನು ಸರ್ಕಾರ ಬೇಧಿಸಲಿದೆ : ಸಿಎಂ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.