Karnataka Budget 2024 : ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್ - ವಿಜಯೇಂದ್ರ

 Vijayendra On Karnataka Budget :ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.   

Written by - Ranjitha R K | Last Updated : Feb 16, 2024, 01:27 PM IST
  • ಇಂದು ಮಂಡಿಸಿದ ಬಜೆಟ್ ರೈತವಿರೋಧಿ - ವಿಜಯೇಂದ್ರ
  • ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್
  • ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿ ಇಲ್ಲ
Karnataka Budget 2024 : ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್ - ವಿಜಯೇಂದ್ರ  title=

ಬೆಂಗಳೂರು:  Vijayendra On Karnataka Budget : ಮುಖ್ಯಮಂತ್ರಿಗಳು ಮತ್ತು ರಾಜ್ಯದ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶೂನ್ಯ ಪ್ರಗತಿಯ ಬಜೆಟ್ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್ ಇದು ಎಂದು ಅವರು ಟೀಕಿಸಿದ್ದಾರೆ. 

ಯುವಕರಿಗೆ ಯಾವುದೇ ಒಂದು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಣೆ ಮಾಡಿಲ್ಲ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮತ್ತು ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳಲು ಮುಖ್ಯಮಂತ್ರಿಗಳು ಇಂದು ತಮ್ಮ ಸಮಯ ವ್ಯರ್ಥ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. 

ಇದನ್ನೂ ಓದಿ :Exam Time Table: ಶಿಕ್ಷಣ ಇಲಾಖೆಯಿಂದ SSLC, PUC ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿ ಇಲ್ಲ :
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ಕೊಡದ ಬಜೆಟ್ ಇದಾಗಿದೆ. ಸಂಕಷ್ಟದಲ್ಲಿರುವ ರೈತರು ಬಜೆಟ್ ಮೂಲಕ ಪರಿಹಾರದ ನಿರೀಕ್ಷೆಯಲ್ಲಿದ್ದರು. ಬಜೆಟ್ ನಲ್ಲಿ ಮಹಿಳೆಯರಿಗೂ ಯಾವುದೇ ಅನುಕೂಲ ನೀಡಿಲ್ಲ. ಪ್ರಣಾಳಿಕೆಯಲ್ಲಿ ನೇಕಾರರ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್, ನೇಕಾರರ ಪರವಾಗಿ ಯಾವುದೇ ಒಂದು ಯೋಜನೆಯನ್ನು ಘೋಷಣೆ ಮಾಡಿಲ್ಲ ಎಂದು ವಿಜಯೇಂದ್ರ ಅವರು ಟೀಕಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಭರವಸೆ ನೀಡಿದ್ದರು. ಅದರ ಬಗ್ಗೆಯೂ ಉಲ್ಲೇಖ ಮಾಡಿಲ್ಲ. ರಾಜ್ಯದ ರೈತರು, ಬಡವರು, ದೀನದಲಿತರು, ನೇಕಾರರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿ ಎಲ್ಲ ವರ್ಗಕ್ಕೂ ನಿರಾಸೆ ಮೂಡಿಸಿದ ಬಜೆಟ್ ಇದು ಎಂದು  ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ :ದಾವಣಗೆರೆ ಬಸ್‌ ನಿಲ್ದಾಣದಲ್ಲಿ ಅಪರಿಚಿತ ಸೂಟ್‌ ಕೇಸ್‌ ಪತ್ತೆ

ಬರಗಾಲದ ಸಂದರ್ಭದಲ್ಲೂ ಕೃಷಿ ಮತ್ತು ಬೆಳೆ ಸಾಲದ ಮನ್ನಾ ಕುರಿತು  ಮಾತನಾಡಿಲ್ಲ.  ಸರಕಾರಿ ನೌಕರರ ಮೂಗಿಗೆ ತುಪ್ಪ ಹಚ್ಚುವ ಕೆಲಸವಾಗಿದೆ. ಬರಗಾಲದ ಸಂದರ್ಭದಲ್ಲಿ ಯಾವುದೇ ರೀತಿಯ ಅನುಕೂಲ ಆಗದ ಬಜೆಟ್, ನಿಶ್ಚಿತವಾಗಿ ಇದು ಕರಾಳ ದಿನ ಎಂದರೂ ತಪ್ಪಾಗಲಾರದು ಎಂದಿದ್ದಾರೆ. 

15ನೇ ಬಜೆಟ್ ಮಂಡಿಸುತ್ತಿರುವ ಒಬ್ಬ ಅನುಭವಿ ಮುಖ್ಯಮಂತ್ರಿ ಈ ರೀತಿ ಬಜೆಟ್ ಮಂಡಿಸಬಹುದೆಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ನಿಜವಾಗಲೂ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಒಂದು ದುರಂತವೇ ಸರಿ ಎಂಡು ಹೇಳಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News