ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಕೊಳ್ಳೇಗಾಲದ ಮನೆಗೆ ಕನ್ನ..!

Chamarajanagara: ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಳ್ಳರು ರಾತ್ರಿ ಮನೆಗೆ‌ ನುಗ್ಗಿ ಕಳ್ಳತನ ಮಾಡಿದ್ದಾರೆ. ನೆರೆ ಮನೆಯವರಿಂದ ಮನೆಗೆ ಕನ್ನ ಹಾಕಿರುವುದು ಬೆಳಕಿಗೆ ಬಂದಿದೆ.

Written by - Zee Kannada News Desk | Last Updated : Aug 24, 2024, 08:13 PM IST
  • ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಮನೆಯಲ್ಲಿ ಕಳ್ಳತನ
  • ಕೊಳ್ಳೇಗಾಲ ಪಟ್ಟಣದ ಆದರ್ಶ ಬಡಾವಣೆಯ ನಿವಾಸದಲ್ಲಿ ಕಳ್ಳತನ ನಡೆದಿದೆ
  • ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಳ್ಳರು ರಾತ್ರಿ ಮನೆಗೆ‌ ನುಗ್ಗಿ ಕಳ್ಳತನ ಮಾಡಿದ್ದಾರೆ
ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಕೊಳ್ಳೇಗಾಲದ ಮನೆಗೆ ಕನ್ನ..! title=
ಎನ್.ಮಹೇಶ್ ಮನೆಯಲ್ಲಿ ಕಳ್ಳತನ!

ಚಾಮರಾಜನಗರ: ಮಾಜಿ ಶಿಕ್ಷಣ ಸಚಿವ, ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಕೊಳ್ಳೇಗಾಲದ ಮನೆಯಲ್ಲಿ ಕಳ್ಳತನವಾಗಿದ್ದು, ಈ ಘಟನೆ ಶನಿವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಆದರ್ಶ ಬಡಾವಣೆಯ ನಿವಾಸದಲ್ಲಿ ಕಳ್ಳತನದ ಕೃತ್ಯ ನಡೆದಿದೆ. ಶುಕ್ರವಾರ ಸಂಜೆ ತನಕ ಮನೆಯಲ್ಲಿದ್ದ ಎನ್.ಮಹೇಶ್ ಅವರು ಬಳಿಕ ಬೆಂಗಳೂರಿಗೆ ತೆರಳಿದ್ದರು. 

ಇದನ್ನೂ ಓದಿ: ಶಿವಮೊಗ್ಗದಲ್ಲಿ ನಾಯಿ ಕಚ್ಚಿ ಮಹಿಳೆ ಸಾವು..!

ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಳ್ಳರು ರಾತ್ರಿ ಮನೆಗೆ‌ ನುಗ್ಗಿ ಕಳ್ಳತನ ಮಾಡಿದ್ದಾರೆ. ನೆರೆ ಮನೆಯವರಿಂದ ಮನೆಗೆ ಕನ್ನ ಹಾಕಿರುವುದು ಬೆಳಕಿಗೆ ಬಂದಿದೆ.

ಎನ್.ಮಹೇಶ್ ತಮ್ಮ ಮನೆಯಲ್ಲಿ ಏನು ಕಳುವಾಗಿದೆ? ಎಂಬ ಮಾಹಿತಿ ನೀಡಿದ ಬಳಿಕ ಕಳುವಿನ ಬಗ್ಗೆ ಹೆಚ್ಚು ಮಾಹಿತಿ ತಿಳಿಯಲಿದೆ. ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. 

ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2024

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News