ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚನೆ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಅಂಡ್ ಗ್ಯಾಂಗ್ ವಿರುದ್ಧ ಸುಮಾರು 800 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಉದ್ಯಮಿ ಗೋವಿಂದಬಾಬು ಪೂಜಾರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಕುಂದಾಪುರ ಅಂಡ್ ಗ್ಯಾಂಗ್ ಕೋಟಿ ಕೋಟಿ ರೂ. ವಂಚಸಿತ್ತು. ಪ್ರಕರಣ ಸಂಬಂಧ ಸಿಸಿಬಿ ಪೊಲೀಸರಿಂದ ಚಾರ್ಚ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಚೈತ್ರಾ ಸೇರಿದಂತೆ 9 ಮಂದಿ ಆರೋಪಿಗಳ ವಿರುದ್ಧ ಸುಮಾರು 800 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.
ಇದನ್ನೂ ಓದಿ: ಕಾಡಾನೆ ದಾಳಿಗೆ ಬಲಿಯಾದ ಮಹಿಳೆಯ ಕುಟುಂಬಕ್ಕೆ 15 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ ಘೋಷಣೆ
1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸುದೀರ್ಘ ಚಾರ್ಚ್ಶೀಟ್ನಲ್ಲಿ 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಾಗಿದೆ. ತನಿಖೆಯಲ್ಲಿ ಡಿಜಿಟಲ್ ಸಾಕ್ಷಿಗಳು, ಬ್ಯಾಂಕ್ ಸ್ಟೇಟ್ ಮೆಂಟ್ ಗಳು ಮತ್ತು ಸಾಂಧರ್ಭಿಕ ಸಾಕ್ಷ್ಯಗಳನ್ನು ಉಲ್ಲೇಖಿಸಲಾಗಿದೆ.
ಹಾಲಶ್ರೀ ಸ್ವಾಮೀಜಿ ಕಾರು ಚಾಲಕ ಹಣ ಇಟ್ಟು ಹೋಗಿದ್ದರ ಬಗ್ಗೆ ಮೈಸೂರು ಮೂಲದ ವ್ಯಕ್ತಿಯ ಹೇಳಿಕೆಯನ್ನು ದಾಖಲು ಮಾಡಲಾಗಿದೆ. ಸ್ಥಳ ಮಹಜರು ಮಾಡಿ ಹಣ ಸೀಜ್ ಮಾಡಿದ ಸ್ಥಳಗಳ ಬಗ್ಗೆಯೂ 800 ಪುಟಗಳ ಚಾರ್ಚ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ಬಿಜೆಪಿಯಿಂದ ‘ಕಲೆಕ್ಷನ್ ಮಂತ್ರಿ’ ಪ್ರಿಯಾಂಕ್ ಖರ್ಗೆಯವರ ಘನಂದಾರಿ ಕೆಲಸಗಳ ಪಟ್ಟಿ ಬಿಡುಗಡೆ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.