ಮೈತ್ರಿ ಬಿಕ್ಕಟ್ಟು: ಇಂದು ವಿಧಾನಸೌಧದ ಮುಂದೆ ಬಿಜೆಪಿ ಧರಣಿ

ಸಿಎಂ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ ನಡೆಸಲಿದೆ.

Updated: Jul 10, 2019 , 10:07 AM IST
ಮೈತ್ರಿ ಬಿಕ್ಕಟ್ಟು: ಇಂದು ವಿಧಾನಸೌಧದ ಮುಂದೆ ಬಿಜೆಪಿ ಧರಣಿ

ಬೆಂಗಳೂರು: ಶಾಸಕರ ವಿಶ್ವಾಸವನ್ನು ಕಳೆದುಕೊಂಡಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಭಾರತಿಯ ಜನತಾ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಬುಧವಾರ ವಿಧಾನಸೌಧದ ಮುಂದೆ ಧರಣಿ ನಡೆಸಲಿದ್ದಾರೆ.

ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಸಿಎಂ ಕುಮಾರಸ್ವಾಮಿ ಅವರಿಗೆ ಸಿಎಂ ಸ್ಥಾನದಲ್ಲಿ ಮುಂದುವರೆಯಲು ಯಾವುದೇ ನೈತಿಕ ಹಕ್ಕಿಲ್ಲ. ಹಾಗಾಗಿ ಅವರ ರಾಜೀನಾಮೆಗೆ ಆಗ್ರಹಿಸಿ ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಎದುರು ಪಕ್ಷದ 105 ಶಾಸಕರೂ ಪ್ರತಿಭಟನೆಗೆ ಕೂರಲಿದ್ದೇವೆ ಎಂದು ತಿಳಿಸಿದ್ದಾರೆ. 

ಅಲ್ಲದೆ, ಮಧ್ಯಾಹ್ನ 3 ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ಅವರ ಭೇಟಿಗೆ ಸಮಯವನ್ನು ಕೋರಿದ್ದೇವೆ. ಅದಕ್ಕೂ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಮಾತುಕತೆ ನಡೆಸುವುದಾಗಿ ಯಡಿಯೂರಪ್ಪ ತಿಳಿಸಿದರು.