ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಭುಗಿಲೆದ್ದಿರುವ ಕಬ್ಬು ಬೆಳೆಗಾರರ ಹೋರಾಟಕ್ಕೆ ಇದೀಗ ಬಿಜೆಪಿ ಬೆಂಬಲ ನೀಡಿದ್ದು, ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬುಧವಾರ ಸರ್ಕಾರದ ವಿರುದ್ಧ ಭಾರಿ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ. ಲಕ್ಷಾಂತರ ರೈತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಹೋರಾಟ ನಡೆಸಲಿದ್ದಾರೆ ಎಂದು ಹೇಳಿದರು.


ಮುಂದುವರೆದು ಮಾತನಾಡಿದ ಅವರು,ಹೆಣ್ಣು ಮಗಳು ನಾಲಾಯಕ್‌ ಅಂದಿದ್ದಕ್ಕೆ ಸಿಟ್ಟು ಬಂತು. ಪ್ರತೀ ಬಾರಿ ಉತ್ತರ ಕರ್ನಾಟಕ ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ರಾಜಕೀಯ ಎಂದು ಪ್ರಜಾತಂತ್ರ ವ್ಯವಸ್ಥೆಯನ್ನು ಅಪಮಾನ ಮಾಡುತ್ತಿರುವುದು ಯಾಕೆ? ಎಂದು ಸಿಎಂ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದರು.


ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದವರು ಮಾತೆತ್ತಿದರೆ ಪ್ರಧಾನಿ ಮೋದಿ ಅವರನ್ನು ಟೀಕಿಸುತ್ತಾರೆ. ಆದರೆ ಗುಜರಾತ್‌ನಲ್ಲಿ  ಕಬ್ಬಿಗೆ 3,200 ರಿಂದ 4,200 ರೂಪಾಯಿ ಎಫ್ಆರ್‌ಪಿ ನೀಡಲಾಗುತ್ತಿದೆ. ಮಹಾರಾಷ್ಟ್ರದ ಬಿಜೆಪಿ ಸರ್ಕಾರ ರೈತರಿಗೆ ಕಬ್ಬಿಗೆ 2900 ರೂ. ದರ  ಮತ್ತು 200 ರೂ. ಬೆಂಬಲ ಬೆಲೆ ಕೊಡುತ್ತಿದೆ. ಅದನ್ನು ಒಮ್ಮೆ ನೋಡಿಕೊಂಡು ಬನ್ನಿ ಎಂದು ಕುಮಾರಸ್ವಾಮಿ ಅವರ ವಿರುದ್ಧ ಕಿಡಿ ಕಾರಿದರು.