ಬೆಂಗಳೂರು: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಬಿಜೆಪಿ ನೇತೃತ್ವದ ಸರ್ಕಾರ ತಿರಸ್ಕರಿಸಲು ಹುನ್ನಾರ ನಡೆಸಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ '  ನಮ್ಮ ಸರ್ಕಾರ ರಾಜ್ಯದಲ್ಲಿ ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಂಡಿರದಿದ್ದ ಕಾರಣದಿಂದಾಗಿ ಜಾರಿಗೊಳಿಸಲು ಆಗಿಲ್ಲ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಈಗಿನ ಸರ್ಕಾರಕ್ಕೆ ಸಮೀಕ್ಷೆಯ ವರದಿ ಸಲ್ಲಿಸಿದ್ದಾರೆ. ವರದಿಯನ್ನು ಬಿಜೆಪಿ ತಿರಸ್ಕರಿಸಲು ಹುನ್ನಾರ ನಡೆಸುತ್ತಿದೆ. 



ಈ ಸಮೀಕ್ಷೆ ಯಾವುದೋ ಒಂದು ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ, ರಾಜ್ಯದ ಪ್ರತಿ ಕುಟುಂಬವನ್ನು ಸಂಪರ್ಕಿಸಿ ತಲೆ ಎಣಿಕೆ ಮೂಲಕ ವೈಜ್ಞಾನಿಕವಾಗಿ ನಡೆಸಿದ್ದ ಸಮೀಕ್ಷೆ. ಈ ವರದಿಯನ್ನು ಒಪ್ಪಿಕೊಂಡರೆ ಸರ್ವಜನಾಂಗಕ್ಕೂ ಸಾಮಾಜಿಕ ನ್ಯಾಯ ನೀಡಲು ಸಾಧ್ಯವಾಗುತ್ತದೆ. ಸಾಮಾಜಿಕ ನ್ಯಾಯದ ಸಿದ್ಧಾಂತಕ್ಕೆ ವಿರೋಧಿಯಾಗಿರುವ ಬಿಜೆಪಿಗೆ ಇದು ಇಷ್ಟ ಆಗುತ್ತಿಲ್ಲ ' ಎಂದು ಟ್ವೀಟ್ ಮಾಡಿದ್ದಾರೆ.


ಈ ರಾಜ್ಯದಲ್ಲಿನ ಜನರ ಸಾಮಾಜಿಕ ಆರ್ಥಿಕ ಹಾಗೂ ಸ್ಥಿತಿಗತಿಯನ್ನು ತಿಳಿಯುವ ನಿಟ್ಟಿನಲ್ಲಿ ಸಮೀಕ್ಷೆ ನಡೆಸಲು  ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿತ್ತು  ಆದರೆ, ಅದು ಪೂರ್ಣಗೊಳ್ಳದೆ ಹಾಗೆ ಉಳಿದಿತ್ತು,