ಮಂಗಳೂರು: ಮಾರ್ಚ್ 15 ರೊಳಗೆ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. 


COMMERCIAL BREAK
SCROLL TO CONTINUE READING

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಅಭ್ಯರ್ಥಿಗಳ ಕುರಿತು ಈಗಾಗಲೇ ಅಮಿತಾ ಷಾ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ಮುಂದಿನ ವಾರ ಮತ್ತೆ ಅಮಿತ್ ಷಾ ಅವರನ್ನು ಭೇಟಿ ಮಾಡಿ, ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ಮಾರ್ಚ್ 15 ರೊಳಗೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. 


ಲೋಕಸಭೆ ಚುನಾವಣೆಯಲ್ಲಿ ಪಕ್ಷ ಎಷ್ಟು ಸ್ಥಾನಗಳನ್ನು ಗೆಲ್ಲಲಿದೆ ಎಂಬ ಪ್ರಷಣೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ 22 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಈಗಾಗಲೇ ಚುನಾವಣಾ ಪ್ರಚಾರಕ್ಕೆ ಯೋಜನೆ ರೂಪಿಸಲಾಗುತ್ತಿದೆ ಎಂದು ಯಡಿಯೂರಪ್ಪ ಹೇಳಿದರು.