Pro-Pakistan Slogans: ದೇಶದ್ರೋಹಿಗಳನ್ನು ಬಂಧಿಸುವವರೆಗೂ ಬಿಜೆಪಿಯಿಂದ ಹೋರಾಟ: ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ

Opposition Leader R. Ashoka Statement: ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದ ಒಳಗೆ ದೇಶದ್ರೋಹದ ಚಟುವಟಿಕೆ ನಡೆದಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಹಾಕಲಾಗಿದೆ. ಗೃಹ ಸಚಿವರಿಗೆ ಬೇರೆ ದೇಶಗಳಿಂದಲೂ ಜನರು ಕರೆ ಮಾಡಿ ಈ ಬಗ್ಗೆ ವಿಚಾರಿಸುತ್ತಿದ್ದಾರೆ.

Written by - Prashobh Devanahalli | Edited by - Bhavishya Shetty | Last Updated : Feb 28, 2024, 04:22 PM IST
    • ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು
    • ಪಾಕಿಸ್ತಾನ ಪರ ಘೋಷಣೆ ಹಾಕಲಾಗಿದೆ
    • ಸಚಿವ ಪ್ರಿಯಾಂಕ್ ಖರ್ಗೆ ಅವರಂತೂ ಮಾಧ್ಯಮಗಳಿಗೆ ಬೆದರಿಕೆ ಹಾಕಿದ್ದಾರೆ ಎಂದರು
Pro-Pakistan Slogans: ದೇಶದ್ರೋಹಿಗಳನ್ನು ಬಂಧಿಸುವವರೆಗೂ ಬಿಜೆಪಿಯಿಂದ ಹೋರಾಟ: ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ title=
R Ashok

Pro-Pakistan slogans controversy: ಪಾಕಿಸ್ತಾನ ಪರ ಘೋಷಣೆ ಕೂಗಿದ ದೇಶದ್ರೋಹಿಗಳನ್ನು ಬಂಧಿಸುವವರೆಗೂ ಬಿಜೆಪಿಯ ಹೋರಾಟ ಮುಂದುವರಿಯಲಿದೆ. ಇದು ಕಾಂಗ್ರೆಸ್’ಗೆ ನಾಚಿಕೆಗೇಡಿನ ವಿಚಾರವಾಗಿದ್ದು, ಇದರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: IND vs ENG: 5ನೇ ಟೆಸ್ಟ್ ಗೆ ಈ ಸ್ಟಾರ್ ಬ್ಯಾಟ್ಸ್ ಮ್ಯಾನ್ ಅಲಭ್ಯ ! ಮೈದಾನಕ್ಕೆ ಇಳಿಯುತ್ತಾರೆಯೇ ಬುಮ್ರಾ ?

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದ ಒಳಗೆ ದೇಶದ್ರೋಹದ ಚಟುವಟಿಕೆ ನಡೆದಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಹಾಕಲಾಗಿದೆ. ಗೃಹ ಸಚಿವರಿಗೆ ಬೇರೆ ದೇಶಗಳಿಂದಲೂ ಜನರು ಕರೆ ಮಾಡಿ ಈ ಬಗ್ಗೆ ವಿಚಾರಿಸುತ್ತಿದ್ದಾರೆ. ಇಂದು ಅಂತಾರಾಷ್ಟ್ರೀಯ ಸುದ್ದಿಯಾದರೂ ಕಾಂಗ್ರೆಸ್ ಮಾತ್ರ ಇದನ್ನು ನಂಬುತ್ತಿಲ್ಲ. ಇದು ಮಾಧ್ಯಮಗಳ ಸೃಷ್ಟಿ ಎಂದು ಹೇಳಲಾಗುತ್ತಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರಂತೂ ಮಾಧ್ಯಮಗಳಿಗೆ ಬೆದರಿಕೆ ಹಾಕಿದ್ದಾರೆ ಎಂದರು.

ಈ ಘಟನೆ ನಡೆದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸಚಿವ ಸಂಪುಟ ಸಭೆ ನಡೆಸಿ ಖಂಡಿಸಿ, ಪಾತಕಿಗಳನ್ನು ಹೆಡೆಮುರಿ ಕಟ್ಟಿ ತರುತ್ತೇವೆ ಎಂದು ಪ್ರಕಟಿಸಬೇಕಿತ್ತು. ಆದರೆ ಸಂಪುಟ ಸಭೆ ನಡೆಸಿಲ್ಲ, ಒಬ್ಬ ಸಚಿವರು ಕೂಡ ಘಟನಾ ಸ್ಥಳಕ್ಕೆ ಬಂದಿಲ್ಲ. ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಮಾಧ್ಯಮಗಳನ್ನೇ ನಿಂದಿಸಿದ್ದಾರೆ. ಇದು ಎಲ್ಲೋ ದೂರದ ಹಳ್ಳಿಯಲ್ಲಿ ನಡೆದಿಲ್ಲ. ವಿಧಾನಸೌಧದಲ್ಲೇ ನಡೆದಿರುವ ಘಟನೆಗೆ ಸಾಕ್ಷಿ ಕೇಳುತ್ತಿದ್ದಾರೆ. 24 ಗಂಟೆಯಾದರೂ ಯಾರನ್ನೂ ಬಂಧಿಸಿಲ್ಲ, ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಬಿಜೆಪಿ ಯಾವುದನ್ನು ಬೇಕಾದರೂ ಸಹಿಸಿಕೊಳ್ಳುತ್ತದೆ. ಆದರೆ ದೇಶದ್ರೋಹವನ್ನು ಮಾತ್ರ ಸಹಿಸುವುದಿಲ್ಲ. ಇದನ್ನು ಕಾಂಗ್ರೆಸ್ಸಿಗರು ಸಮರ್ಥಿಸಬಾರದು. ಕೂಡಲೇ ದೇಶದ್ರೋಹಿಗಳನ್ನು ಬಂಧಿಸಬೇಕು. ಅಂತಹವರಿಗೆ ರಾಜ್ಯದಲ್ಲಿ ಸ್ಥಳವಿಲ್ಲ. ಅವರನ್ನು ಬಂಧಿಸುವವರೆಗೂ ಹೋರಾಟ ನಡೆಯಲಿದೆ ಎಂದರು.

ಇದನ್ನೂ ಓದಿ:  RCB ಆಟಗಾರ್ತಿ ಶ್ರೇಯಾಂಕಾಗೆ ಮೈದಾನದಲ್ಲೇ ಲವ್ ಪ್ರಪೋಸ್: ಅಭಿಮಾನಿಯ ಪ್ರೇಮ ನಿವೇದನೆಯ ಫೋಟೋ ವೈರಲ್

ಈ ಕುರಿತು ರಾಜ್ಯಪಾಲರಿಗೆ ದೂರು ಸಲ್ಲಿಸಲಾಗುವುದು‌‌. ಕೂಡಲೇ ಸರ್ಕಾರವನ್ನು ವಿಸರ್ಜಿಸುವಂತೆ ಮನವಿ ಮಾಡಲಾಗುವುದು. ಗಡಿಗಳಲ್ಲಿ ಯೋಧರು ದೇಶ ಕಾಯುತ್ತಿದ್ದಾರೆ. ಅನೇಕರು ಬಲಿದಾನ ಮಾಡಿದ್ದಾರೆ. ಅವರಿಗೆ ಗೃಹ ಸಚಿವರ ಉತ್ತರ ಏನು? ಎಂದು ಪ್ರಶ್ನಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News