ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಮೇ 12ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಸಿದ್ಧತೆ ನಡೆಸಿದೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾನತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ನಾಳೆ ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಈವರೆಗೆ 154 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ನಾಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರೊಂದಿಗೆ ಚರ್ಚಿಸಿದ ಬಳಿಕ ಮೂರನೇ ಪಟ್ಟಿ ಬಿಡುಗಡೆ ಮಾಡಲಾಗುವುದು. ಅಲ್ಲಿಯವರೆಗೆ ಎಲ್ಲರೂ ಸಮಾಧಾನದಿಂದ ಇರಬೇಕು ಎಂದು ಯಡಿಯೂರಪ್ಪ ಹೇಳಿದರು.


ಏ.8ರಂದು ಬಿಡುಗಡೆ ಮಾಡಿದ್ದ ಮೊದಲ ಪಟ್ಟಿಯಲ್ಲಿ 72 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ನಂತರ ತನ್ನ ಎರಡನೇ ಪಟ್ಟಿಯನ್ನು 82 ಅಭ್ಯರ್ಥಿಗಳನ್ನು ಪ್ರಕಟಿಸಿದ್ದ ಬಿಜೆಪಿ ನಾಳೆ ಉಳಿದ 70 ಅಭ್ಯರ್ಥಿಗಳ ಹೆಸರನ್ನು ಮೂರನೇ ಪಟ್ಟಿಯಲ್ಲಿ ಬಿಡುಗಡೆ ಮಾಡಲಿದೆ.