'ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ'

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲಲಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ವಿಶ್ವಾಸ

Last Updated : Nov 30, 2020, 01:18 PM IST
  • ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲಲಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ವಿಶ್ವಾಸ
  • ಕಾಂಗ್ರೆಸ್ ಸಾಧನೆಗೆ ಹೋಲಿಸಿದರೆ ನರೇಂದ್ರ ಮೋದಿ ಸರಕಾರದ ಸಾಧನೆ ಶೇ.90ರಷ್ಟು ಹೆಚ್ಚಿದೆ
  • ಡಿಸೆಂಬರ್‌ ತಿಂಗಳಲ್ಲಿ ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿ ಆರಂಭ
'ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ' title=

ವಿಜಯಪುರ: ಪಾರ್ಲಿಮೆಂಟ್‌ನಿಂದ ಹಿಡಿದು ಗ್ರಾಮ  ತನಕ ಪಕ್ಷದ ಗೆಲುವಿಗೆ ತಂತ್ರ ರೂಪಿಸಲಾಗಿದೆ. ದಕ್ಷಿಣ ಹಾಗೂ ಉತ್ತರ ಎನ್ನದೇ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲಲಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸಾಧನೆಗೆ ಹೋಲಿಸಿದರೆ ನರೇಂದ್ರ ಮೋದಿ(Narendra Modi) ಸರಕಾರದ ಸಾಧನೆ ಶೇ.90ರಷ್ಟು ಹೆಚ್ಚಿದೆ. ಕೊರೊನಾ ಸಂಕಷ್ಟದಲ್ಲಿ 80 ಕೋಟಿ ಬಡ ಜನರಿಗೆ ಅಕ್ಕಿ ಬೇಳೆ ವಿತರಣೆ ಮಾಡಲಾಗಿದೆ. ಗುಳೆ ಹೋದವರಿಗ ದೇಶದ ಯಾವುದೇ ಮೂಲೆಯಲ್ಲಿ ರೇಷನ್ ಪಡೆಯುವ ಅವಕಾಶ ಕಲ್ಪಿಸಲಾಗಿದೆ ಎಂದರು.

ಡಿ.ಕೆ.ಶಿವಕುಮಾರ್ ಗೆ 'ಟಾಂಗ್' ನೀಡಿದ ಬಿ.ವೈ. ವಿಜಯೇಂದ್ರ!

ಇನ್ನು, ಡಿಸೆಂಬರ್‌ ತಿಂಗಳಲ್ಲಿ ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿ ಆರಂಭವಾಗುತ್ತದೆ. ಲೋಕೋಪಯೋಗಿ ಇಲಾಖೆ ಅನುದಾನದಲ್ಲಿ ಕಾಮಗಾರಿ ನಡೆಸುತ್ತಿರುವುದರಿಂದ ಟೆಂಡರ್ ಮೌಲ್ಯಮಾಪನ ನಡೆಯುತ್ತಿದೆ. ಆದ್ದರಿಂದ ಕಾಮಗಾರಿ ವಿಳಂಬವಾಗಿದೆ. ಯಾರಿಗೂ ನಕಾರಾತ್ಮಕ ಭಾವನೆ ಬೇಡ ಎಂದು ಹೇಳಿದರು.

ಗ್ರಾಮಪಂಚಾಯತ್ ಚುನಾವಣೆಗೆ ಮುಹೂರ್ತ ಫಿಕ್ಸ್

Trending News