ಸಿಎಂ ಸಿದ್ದರಾಮಯ್ಯ ಪತ್ನಿ, ಸೊಸೆ ಬಗ್ಗೆ ಅವಹೇಳನಕಾರಿ ಟ್ವೀಟ್; ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನ!
Udupi Video Case: ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನದ ಬೆನ್ನಲ್ಲೇ ಹಲವು ಬಿಜೆಪಿ ನಾಯಕರು ಪೊಲೀಸ್ ಠಾಣೆಗೆ ತೆರಳಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಸ್ಟೇಷನ್ ಬೇಲ್ ಮೇಲೆ ಶಕುಂತಲಾರನ್ನು ಪೊಲೀಸರು ರಿಲೀಸ್ ಮಾಡಿದ್ದಾರೆ.
ಬೆಂಗಳೂರು: ಉಡುಪಿಯ ಪ್ರತಿಷ್ಠಿತ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ ಕಾಂಗ್ರೆಸ್ ಟೀಕಿಸುವ ಭರದಲ್ಲಿ ಸಿಎಂ ಸಿದ್ದರಾಮಯ್ಯರ ಪತ್ನಿ ಮತ್ತು ಸೊಸೆ ವಿರುದ್ಧ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾರನ್ನು ಬಂಧಿಸಲಾಗಿದೆ.
ಉಡುಪಿಯ ವಿವಾದದ ಕುರಿತು ಟ್ವೀಟ್ ಮಾಡಿದ್ದ ಕಾಂಗ್ರೆಸ್, ವಿದ್ಯಾರ್ಥಿನಿಯರ ಮಕ್ಕಳಾಟವನ್ನು ಬಿಜೆಪಿ ರಾಜಕೀಯ ಕಳ್ಳಾಟವನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ಹೇಳಿತ್ತು. ಈ ಟ್ವೀಟ್‍ಗೆ ಮರುಟ್ವೀಟ್ ಮಾಡಿದ್ದ ಶಕುಂತಲಾ ಅವರು ಸಿಎಂ ಸಿದ್ದರಾಮಯ್ಯರನ್ನು ಟೀಕಿಸಿ ಅವರ ಕುಟುಂಬವನ್ನು ಅವಹೇಳನ ಮಾಡಿದ್ದರು. ಹೀಗಾಗಿ ಅವರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಡಬಲ್ ಸ್ಟೇರಿಂಗ್ ಕಾಂಗ್ರೆಸ್ ಸರ್ಕಾರದ ಗೋಳಿನ ಧಾರಾವಾಹಿ ಇನ್ನೂ ನಿಂತಿಲ್ಲ: ಬಿಜೆಪಿ ವ್ಯಂಗ್ಯ
ಶಕುಂತಲಾ ಟ್ವೀಟ್‍ನಲ್ಲಿ ಏನಿತ್ತು?
ಪೊಲೀಸರು ರಿಲೀಸ್ ಮಾಡಿದ್ದಾರೆ.
ಇದನ್ನೂ ಓದಿ: ನಿಮ್ಮ ಗೊಡ್ಡು ಬೆದರಿಕೆಗಳಿಗೆ ನಾವೆಂದಿಗೂ ಜಗ್ಗುವುದಿಲ್ಲ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.