ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಜಯಭೇರಿ ಬಾರಿಸಲು ಎಲ್ಲಾ ಪಕ್ಷಗಳು ಸಿದ್ಧತೆ ಆರಂಭಿಸಿವೆ. ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ ಗೆ ಇನ್ನೊಂದೇ ತಿಂಗಳು ಬಾಕಿಯಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಕರ್ನಾಟಕಕ್ಕೆ ಬಿಜೆಪಿ ಕೇಂದ್ರ ನಾಯಕರ ಭೇಟಿ ಹೆಚ್ಚಾಗುತ್ತಿದೆ. ನಿನ್ನೆಯಷ್ಟೇ ರಾಜ್ಯಕ್ಕೆ ಕೇಂದ್ರ ಸಚಿವರಾದ ಅಮಿತ್ ಷಾ, ಧರ್ಮೇಂದ್ರ ಪ್ರಧಾನ್, ಮುನ್ಸೂಖ್ ಮಾಂಡವೀಯ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ 20 ಕ್ಷೇತ್ರ ಗೆಲ್ಲಲು ಬಿಜೆಪಿ ಭರ್ಜರಿ ಪ್ಲ್ಯಾನ್‌  ರೂಪಿಸಿದೆ.


COMMERCIAL BREAK
SCROLL TO CONTINUE READING

ನಿನ್ನೆ(23, ಗುರುವಾರ) ಕೇಂದ್ರ ಗೃಹ ಸಚಿವ, ಬಿಜೆಪಿ ಚುನಾವಣಾ ಚಾಣಾಕ್ಷ ಅಮಿತ್ ಷಾ ಅವರ ಅನುಪಸ್ಥಿತಿಯಲ್ಲಿ ಧರ್ಮೇಂದ್ರ ಪ್ರಧಾನ್ ಮತ್ತು ಮುನ್ಸೂಖ್ ಮಾಂಡವೀಯ ನೇತೃತ್ವದಲ್ಲಿ ಬಿಜೆಪಿ ನಾಯಕರ ಮಹತ್ವ ಸಭೆ ಜರುಗಿತು. 


ಇದನ್ನೂ ಓದಿ- ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದ ಆರೋಪಿಗೆ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದ ಸಿಎಂಎಂ ನ್ಯಾಯಾಲಯ


ರಾಜ್ಯ ಬಿಜೆಪಿಯ ಚುನಾವಣಾ ಉಸ್ತುವಾರಿ ನಾಯಕರುಗಳ ಉಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ ಕೆಲವು ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಈ ಸಭೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಬೇರೆ ಯಾರ ಸಹಾಯವೂ ಇಲ್ಲದೆ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬರಬೇಕು. ಈ ನಿಟ್ಟಿನಲ್ಲಿ ಎಲ್ಲ ಕೆಲಸ ಮಾಡಲು ರಾಜ್ಯ ಬಿಜೆಪಿ ಘಟಕಕ್ಕೆ ಸೂಚನೆ ನೀಡಲಾಗಿದೆ. 


ಇದನ್ನೂ ಓದಿ-  ವಿಧಾನಸಭಾ ಅಧಿವೇಶನದಲ್ಲಿ ಅಬ್ಬರಿಸಿದ ಸಿಎಂ ಬೊಮ್ಮಾಯಿ


ಸಭೆಯಲ್ಲಿ ಧರ್ಮೇಂದ್ರ ಪ್ರಧಾನ್ ಹೇಳಿದ್ದೇನು..?
ಮೊದಲು ಬೆಂಗಳೂರಿನ ಬಗ್ಗೆ ಪ್ರಸ್ತಾಪಿಸಿದ ಧರ್ಮೇಂದ್ರ ಪ್ರಧಾನ್, ನಮಗೆ ಬೆಂಗಳೂರಲ್ಲಿ ಗೆಲ್ಲಲು ಪೂರಕ ವಾತಾವರಣ ಇದೆ. ಯಾವುದೇ ನಾಯಕರು ಅಲಸ್ಯದಿಂದ ಇರಬಾರದು. ಮೈ ಚಳಿ ಬಿಟ್ಟು ಪ್ರತಿಯೊಬ್ಬರೂ ಕೆಲಸ ಮಾಡಬೇಕು. 2018ರ ವಿಧಾನಸಭೆ ಚುನಾವಣೆ ನಮಗೆ ಪಾಠವಾಗಬೇಕು. ಆ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 11ರಲ್ಲಿ ಗೆದ್ದಿದ್ದು, ಬಳಿಕ ಆಪರೇಷನ್ ಕಮಲ ಮಾಡಿ, 4 ಕ್ಷೇತ್ರ ಹೆಚ್ಚಿಸಿಕೊಂಡಿದ್ದೇವೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಹಾಗೇ ಆಗಬಾರದು. 28 ಕ್ಷೇತ್ರಗಳ ಪೈಕಿ ಕನಿಷ್ಠ‌ 20, ಗರಿಷ್ಠ 22 ಸ್ಥಾನವನ್ನ ಗೆಲ್ಲಬೇಕು. ಎಲ್ಲಾ ನಾಯಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಣೆ ಮಾಡಬೇಕು ಎಂದು ಹೀಗೆ ಸಾಲು ಸಾಲು ಮಹತ್ವದ ಸೂಚನೆ ಕೊಟ್ಟಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.