ಬೆಂಗಳೂರು : ಬಿಜೆಪಿಯವರಿಗೆ ಜಾತಿ ಭೇದ,‌ಧರ್ಮಭೇದದಲ್ಲಿ ನಂಬಿಕೆ ಹೆಚ್ಚು. ಹೀಗಾಗಿಯೇ  ಮತಾಂತರ ನಿಷೇಧದಂತಹ ಕಾಯಿದೆಗಳ ಜಾರಿಗೆ ಮುಂದಾಗಿದೆ.ಇದರಲ್ಲಿ ಆರ್ ಎಸ್ ಎಸ್ ನ ಹುನ್ನಾರವೂ ಅಡಗಿದೆ ಎಂದು ಪ್ರತಿಪಕ್ಷದ ಸಿದ್ಧರಾಮಯ್ಯ ಟೀಕಾ ಪ್ರಹಾರ ನಡೆಸಿದ್ಧಾರೆ.


COMMERCIAL BREAK
SCROLL TO CONTINUE READING

ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಮತಾಂತರ ನಿಷೇಧ ಕಾಯಿದೆ ಹಿಂದೆ ಜನರ ಹಿತ ಇಲ್ಲ. ದೇಶದ ಕೋಮುಸೌಹಾರ್ದತೆ ಹಾಳುಗೆಡಹುದೇ ಇದರ ದುರುದ್ದೇಶ.ಬಲಾತ್ಕಾರದ ಮತಾಂತರ‌ ಈಗಲೂ ಶಿಕ್ಷಾರ್ಹ ಅಪರಾಧವಾಗಿರುವಾಗ ಹೊಸ ಕಾಯ್ದೆಯನ್ನು ರಚಿಸುವುದು ಯಾವ  ಉದ್ದೇಶಕ್ಕೆ ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರ ವಿರುದ್ಧ ಇತರರನ್ನು ಎತ್ತಿಕಟ್ಟುವ ದುರುದ್ದೇಶದಿಂದಲೇ ಬಿಜೆಪಿ ಈ ಕಾಯ್ದೆ ತರಲು ಹೊರಟಿದೆ ಎಂದು ಆರೋಪಿಸಿದರು.


ಇದನ್ನೂ ಓದಿ: ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ


ಕಾಂಗ್ರೆಸ್ ಪಕ್ಷ  ಜಾತಿ-ಧರ್ಮದ ಭೇದವಿಲ್ಲದೆ ಕ್ರಿಶ್ಚಿಯನರು ಸೇರಿದಂತೆ ಎಲ್ಲ ಸಮುದಾಯಗಳ ಜೊತೆಗಿರುತ್ತದೆ. ಯಾವ ಸಮುದಾಯದವರಿಗೂ ತೊಂದರೆಯಾಗಲು ಅವಕಾಶ ನೀಡುವುದಿಲ್ಲ.ಸಂವಿಧಾನದ ಪ್ರಕಾರ ದೇಶದ ಪ್ರಜೆ ತನ್ನ ಆಸಕ್ತಿ ಹಾಗೂ ಇಚ್ಚೆಗೆ ಸೂಕ್ತವಾದ ಧರ್ಮವನ್ನು ಆರಿಸಿಕೊಳ್ಳುವ, ಪಾಲಿಸುವ ಮತ್ತು ಆಚರಿಸುವ ಹಕ್ಕು ಇದೆ. ಇದಕ್ಕೆ ವಿರುದ್ಧವಾಗಿ ಕಾಯಿದೆ ತರುವುದು ಸಂವಿಧಾನಬಾಹಿರ ಎಂದು ಟೀಕಿಸಿದರು.


Covid-19 : ವಿದೇಶದಿಂದ ರಾಜ್ಯಕ್ಕೆ ಬಂದ 8 ಜನರಿಗೆ ಕೊರೊನಾ ಪಾಸಿಟಿವ್!


ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ. ಅವರು ನಡೆಸುವ ಶಾಲೆ, ಕಾಲೇಜು, ಆಸ್ಪತ್ರೆಗಳಿಗೆ ಒಂದು ಸಮುದಾಯದವರು ಮಾತ್ರ ಹೋಗುವುದಿಲ್ಲ. ಹೋಗುವ ಎಲ್ಲರೂ ಮತಾಂತರ ಆಗಿಲ್ಲ. ಅದಕ್ಕಾಗಿ ಬಲವಂತವೂ ನಡೆಯುತ್ತಿಲ್ಲ ಎಂದು ಹೇಳಿದರು.


ಯಾವುದೋ ಒಂದು ಧರ್ಮವನ್ನು ಆಧಾರವಾಗಿಟ್ಟುಕೊಂಡು ಸಂವಿಧಾನ ರಚನೆ ಮಾಡಿಲ್ಲ. ಸಂವಿಧಾನದಿಂದ ಒಳ್ಳೆಯದಾಗಬೇಕಾದರೆ ಆಡಳಿತ ಒಳ್ಳೆಯವರ ಕೈಯ್ಯಲ್ಲೇ ಇರಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದ್ದರು. ಬಿಜೆಪಿಯವರಿಗೆ ಜಾತಿ ಭೇದ,‌ಧರ್ಮಭೇದದಲ್ಲಿ ನಂಬಿಕೆ ಹೆಚ್ಚು. ಹೀಗಾಗಿಯೇ ಇಂಥ ಕಾಯಿದೆಗಳ ಜಾರಿಗೆ ಮುಂದಾಗಿದೆ. ಇದರಲ್ಲಿ ಆರ್ ಎಸ್ ಎಸ್ ನ ಹುನ್ನಾರವೂ ಅಡಗಿದೆ ಎಂದು ಸಿದ್ಧರಾಮಯ್ಯ ಆರೋಪಿಸಿದರು.


ಇದನ್ನೂ ಓದಿ: ಇಂದಿನಿಂದ ಕನ್ನಡ ನಾಡು-ನುಡಿ- ವಿಚಾರ ಸಂಕಿರಣ ಮತ್ತು ಕವಿಗೋಷ್ಠಿ


"ದಯೆಯೇ ಧರ್ಮದ ಮೂಲ" ಎಂದು ಬಸವಣ್ಣ ಅವರು ಹೇಳಿದ್ದರು. ಆದರೆ, ಅದಕ್ಕೆ ವಿರುದ್ಧವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ.ರಾಜ್ಯದಲ್ಲಿ ಚರ್ಚ್‌ಗಳ ಮೇಲೆ ದಾಳಿಯಾಗುತ್ತಿದೆ. ನಮ್ಮ ಸರ್ಕಾರ ಇದ್ದಾಗ ಅದಕ್ಕೆ ಅವಕಾಶ ಕೊಟ್ಟಿರಲಿಲ್ಲ' ಎಂದು ಅವರು ಹೇಳಿದರು.


ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಶಾಸಕರಾದ ರಾಜೇಗೌಡ, ವಿಜಯಸಿಂಗ್, ಪ್ರಕಾಶ್ ರಾಥೋಡ್, ಭಾರತೀಯ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಡಾ. ಸಜ್ಜನ್ ಜಾರ್ಜ್ ಮತ್ತಿತರರು ಭಾಗವಹಿಸಿದ್ದರು.