ದೇವನಹಳ್ಳಿ: ಇಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿಯ ‘ಜನಸ್ಪಂದನ’ ಸಮಾವೇಶ ನಡೆಯಲಿದೆ. 3 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಬೆಳಗ್ಗೆ 12 ಗಂಟೆಗೆ ‘ಜನಸ್ಪಂದನ’ ಕಾರ್ಯಕ್ರಮ ಪ್ರಾರಂಭವಾಗಲಿದೆ.


COMMERCIAL BREAK
SCROLL TO CONTINUE READING

ಕೇಂದ್ರ ಸಚಿವೆ ಸ್ಪೃತಿ ಇರಾನಿ, ಪ್ರಹ್ಲಾದ್ ಜೋಷಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಸಂಪುಟದ ಸಚಿವರು, ಶಾಸಕು ಮತ್ತು ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಬಿಜೆಪಿ ಕಾರ್ಯಕರ್ತರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 3ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿ ಸಾಧ್ಯತೆ ಇದೆ.


ಇದನ್ನೂ ಓದಿ: 14 ವರ್ಷದ ಬಾಲಕಿಯನ್ನು ಮದುವೆಯಾಗಿದ್ದ ಅಂಕಲ್ ಅರೆಸ್ಟ್..!


3 ಲಕ್ಷಕ್ಕೂ ಅಧಿಕ ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, 200 ಎಕರೆಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಇರಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಘುನಾಥಪುರ ಗ್ರಾಮದ ಬಳಿ ಕಾರ್ಯಕ್ರಮ ಆಯೋಜಿಸಲಾಗಿದೆ.


ಊಟ ವಿತರಣೆಗೆ 150 ಕೌಂಟರ್ ವ್ಯವಸ್ಥೆ


‘ಜನಸ್ಪಂದನ’ ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಸುಮಾರು 1 ಸಾವಿರ ಬಾಣಸಿಗರಿಂದ ಊಟದ ತಯಾರಿ ಮಾಡಲಾಗುತ್ತಿದೆ. ಶುಕ್ರವಾರ ರಾತ್ರಿಯಿಂದಲೇ ಕಾರ್ಯಕರ್ತರಿಗೆ ಊಟದ ತಯಾರಿ ನಡೆಸಲಾಗುತ್ತಿದೆ. ವೆಜಿಟೇಬಲ್ ಪುಲಾವ್, ಮೊಸರನ್ನ ಮತ್ತು ಬದುಷಾ ತಯಾರಿಸಲಾಗುತ್ತಿದೆ.  ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕ ಕೌಂಟರ್ ಗಳ ನಿರ್ಮಾಣ ಮಾಡಲಾಗಿದೆ.


ಇದನ್ನೂ ಓದಿ: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಮತ್ತೊಂದು ಸುರಂಗ ಮಾರ್ಗ ಪತ್ತೆ!


ಒಟ್ಟು 150 ಕೌಂಟರ್ ಊಟದ ವಿತರಣೆಗೆ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮ ಮುಗಿಯುವ ತನಕ ಊಟ ವಿತರಿಸಲಾಗುತ್ತದೆ. 2 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ರಾಜ್ಯ ಬಿಜೆಪಿ ಸರ್ಕಾರದ ಸರ್ಕಾರದ 3 ವರ್ಷಗಳ ಸಾಧನೆಯನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಈ ‘ಜನಸ್ಪಂದನಾ ಸಮಾವೇಶ’ ಏರ್ಪಡಿಸಲಾಗಿದೆ. ಈ ಹಿಂದೆ ವಿವಿಧ ಕಾರಣಗಳಿಂದ ಹಲವು ಬಾರಿ ಈ ಸಮಾವೇಶ ಮುಂದೂಡಿಕೆಯಾಗಿತ್ತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.