ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜ, ಆದರೆ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಂಘೀ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಪ್ರತಿನಿತ್ಯ ನಿಗಾ ವಹಿಸುತ್ತಿದ್ದು, ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.‌ ಯಾವುದೇ ಬೆಡ್ ಅಥವಾ ಔಷಧಿಯ ಕೊರತೆಯಿಲ್ಲ.‌ ಡೆಂಘೀ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯವರೊಂದಿಗೆ ಚರ್ಚೆ ನಡೆಸಿದ್ದು, ಮೆಡಿಕಲ್ ಎಮರ್ಜೆನ್ಸಿ ಘೋಷಿಸುವ ಅಗತ್ಯವಿಲ್ಲ ಎಂದು ಸಲಹಾ ಸಮಿತಿಯವರು ತಿಳಿಸಿದ್ದಾರೆ ಎಂದರು.‌


ಇದನ್ನೂ ಓದಿ: 5 ನಿಮಿಷದಲ್ಲಿ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗಲು ಒಂದು ತುಂಡು ಇದ್ದಿಲು ಸಾಕು..! ಈ ಎಣ್ಣೆಯಲ್ಲಿ ಮಿಶ್ರಣ ಮಾಡಿ ಹಚ್ಚಿ


ಇನ್ನು ಎರಡು ತಿಂಗಳು ಡೆಂಘೀ ಹಾವಳಿ ಇರುತ್ತದೆ. ಜನರು ಹೆಚ್ಚು ಜಾಗೃತರಾಗಬೇಕು. ಮನೆಯ ಸುತ್ತಮುತ್ತಲು ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆ ಕೂಡ ಜನರಲ್ಲಿ ಡೆಂಘೀ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.‌ ಪ್ರತಿ ಶುಕ್ರವಾರ ಅಭಿಯಾನದ ರೀತಿಯಲ್ಲಿ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನ ನಾಶಪಡಿಸುವ ಕಾರ್ಯ ನಡೆಸುತ್ತಿದೆ. ಹೆಚ್ಚು ಡೆಂಘೀ ಪ್ರಕರಣಗಳು ಕಂಡು ಬರುವ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ತೆರೆದು, ಟೆಸ್ಟಿಂಗ್ ಹೆಚ್ಚಿಸಲು ಜಿಲ್ಲಾಧಿಕಾರಿಗಳಿಗೆ ಹಾಗೂ ಸಿಇಒಗಳಿಗೆ ಸೂಚಿಸಲಾಗಿದೆ. ಔಷಧಿಗಳ ಲಭ್ಯತೆ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆದರೆ ಜನರು ಹೆಚ್ಚು ಜಾಗೃತರಾಗಿ ಡೆಂಘೀ ಹರಡದಂತೆ ಎಚ್ಚರಿಕೆ ವಹಿಸುವುದೇ ಮುಖ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.‌


ಡೆಂಘೀ ವಿಚಾರದಲ್ಲಿ ವಿಪಕ್ಷ ನಾಯಕರು ಆತಂಕ ಹುಟ್ಟಿಸುವಂತ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಇದು ಸರಿಯಲ್ಲ. ಇಂಥಹ ಸಂದರ್ಭದಲ್ಲಿ ವಿಪಕ್ಷಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಆದರೆ ಡೆಂಘೀ ಹರಡುವ ಸೊಳ್ಳೆಗಳಿಗಿಂತ ವಿಪಕ್ಷ ನಾಯಕರ ಸುಳ್ಳುಗಳು ಹೆಚ್ಚು ಹರಡುತ್ತಿದೆ ಎಂದು ಬಿಜೆಪಿ ನಾಯಕರ ಹೇಳಿಕೆಗಳನ್ನ ಟೀಕಿಸಿದರು.


ಸಂಸದ ಡಾ. ಮಂಜುನಾಥ್ ಅವರು ಉತ್ತಮ ಸಲಹೆಗಳನ್ನ ನೀಡಿದ್ದಾರೆ. ನಾನು ಅವರ ಜೊತೆ ಮಾತನಾಡಿದ್ದೇನೆ. ಆ ರೀತಿಯ ಸಕಾರಾತ್ಮಕ ಚಿಂತನೆಗಳನ್ನ ವಿಪಕ್ಷಗಳು ಪ್ರದರ್ಶಿಸಲಿ ಎಂದರು.


ಸರ್ಕಾರಿ ಈಜುಕೊಳಕ್ಕೆ ಭೇಟಿ ನೀಡಿದ್ದೆ, ಯಾವುದೇ ರೆಸಾರ್ಟ್ ಹೋಗಿರಲಿಲ್ಲ. ಡೆಂಘೀ ಹೆಚ್ಚಳಕ್ಕೂ, ನಾನು ಮಂಗಳೂರಿನ ಅಂತಾರಾಷ್ಟ್ರೀಯ ಸರ್ಕಾರಿ ಈಜುಕೊಳಕ್ಕೆ ಭೇಟಿ ನೀಡಿ ಈಜಿದ್ದಕ್ಕೂ ಎತ್ತಣ ಸಂಬಂಧ ಎಂದು ಸಚಿವ ದಿನೇಶ್ ಗುಂಡೂರಾವ್ ಬಿಜೆಪಿಯನ್ನ ಪ್ರಶ್ನಿಸಿದರು.


ಇದನ್ನೂ ಓದಿ:  ಟೀಂ ಇಂಡಿಯಾದಲ್ಲಿ ಸಂಚಲನ… ಬಿಸಿಸಿಐ ಕಾರ್ಯದರ್ಶಿ ಸ್ಥಾನಕ್ಕೆ ಜಯ್ ಶಾ ರಾಜೀನಾಮೆ! ಕಾರಣ ಕೂಡ ರಿವೀಲ್


ಮಂಗಳೂರಿನಲ್ಲಿ ನಾನು ಈಜಿದ್ದು ಮಾತ್ರವಲ್ಲ, ಡೆಂಘೀ ಈಡಿಸ್ ಸೊಳ್ಳೆಗಳ ಲಾರ್ವಾ ನಾಶಪಡಿಸುವ ಬೃಹತ್ ಅಭಿಯಾನಕ್ಕೆ ಕೂಡ ಚಾಲನೆ ಕೊಟ್ಟಿದ್ದೇನೆ. ಮನೆ ಮನೆಗೆ ತೆರಳಿ ನೀರು ಶೇಖರಣೆಯಾಗಿರುವ ಸ್ಥಳಗಳನ್ನ ಗುರುತಿಸಿ ಅಲ್ಲಿಯ ನಿವಾಸಿಗಳನ್ನ ಎಚ್ಚರಿಸಿದ್ದೇವೆ. ಎರಡು ದಿನ ಪ್ರವಾಸದಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ.‌ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಹಾಗೂ ತಾಲೂಕು ಮಟ್ಟದಲ್ಲಿ ಜನತಾ ದರ್ಶನ ನಡೆಸಿದ್ದೇನೆ. ಹೀಗಿರುವಾಗ ಬಿಜೆಪಿ ನಾನು ಈಜುಕೊಳ್ಳದಲ್ಲಿ ಈಜಿದ್ದನ್ನೇ ಪ್ರಶ್ನೆ ಮಾಡಿದೆ‌. ಬಿಜೆಪಿಗರಿಗೆ ಈಜು ಒಂದು ರೀತಿಯಲ್ಲಿ ಮೋಜು ಮಸ್ತಿಯಾಗಿರಬಹುದು‌. ಆದರೆ ನನಗಲ್ಲ. ನಾನು ಮಂಗಳೂರಿನ ಸರ್ಕಾರಿ ಈಜುಕೊಳಕ್ಕೆ ಭೇಟಿ ನೀಡಿದ್ದೇನೆ ಹೊರೆತು ಬಿಜೆಪಿಯವರ ರೀತಿ ಯಾವುದೋ ರೆಸಾರ್ಟ್’ಗೆ ಹೋಗಿಲ್ಲ.‌ ಅದು ಬೆಳಗ್ಗೆ 6 ಗಂಟೆಗೆ ಎದ್ದು, ಸಮಯ ಬಿಡುವು ಮಾಡಿಕೊಂಡು ನಾನು ಈಜುಕೊಳಕ್ಕೆ ಹೋಗಿದ್ದೆ.  ಏಕೆಂದರೆ ಈಜುಕೊಳಕ್ಕೆ ಭೇಟಿ ನೀಡುವುದು ನನ್ನ ಮಂಗಳೂರು ಪ್ರವಾಸದ ಒಂದು ಭಾಗವಾಗಿತ್ತು ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದರು.‌


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ