ಬೆಂಗಳೂರು : ರಾಜ್ಯದಲ್ಲಿ ಯಾರು ಧರ್ಮ-ಧರ್ಮಗಳ ನಡುವೆ ವಿಷ ಬೀಜ ಬಿತ್ತುತ್ತಿದ್ದಾರೆ. ಅಶಾಂತಿ ಸೃಷ್ಟಿಸುವ ಮೂಲಕ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು ಎಂದು , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.  ಅಂಥವರನ್ನು ಕೂಡಲೇ ಯುಎಪಿಎ ಅಡಿಯಲ್ಲಿ ಬಂಧನ ಮಾಡಬೇಕೆಂದು ಎಂದು ಅವರು ಆಗ್ರಹಿಸಿದ್ದಾರೆ.  


COMMERCIAL BREAK
SCROLL TO CONTINUE READING

ವಿಕಾಸಸೌಧದಲ್ಲಿ ಮಾತನಾಡಿದ ಅವರು, ಸರ್ಕಾರದ ವೈಫಲ್ಯವನ್ನು  ಮುಚ್ಚಿ ಹಾಕಲು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇವರುಗಳು ಸಂಘ ಪರಿವಾರದ ವಿವಿಧ ಆಕ್ಟೋಪಸ್ ಇದ್ದ ಹಾಗೆ, ಇವರ ಕೈಯಲ್ಲಿ ಈ ಕೆಲಸ ಮಾಡಿಸುತ್ತಿದ್ದಾರೆ‌. ರಾಜ್ಯದಲ್ಲಿ ಶಾಂತಿ ಕದಡಲು ಯಾರು ಪ್ರಯತ್ನ ಮಾಡುತ್ತಿದ್ದಾರೋ ಅವರನ್ನು ಭಯೋತ್ಪಾದಕರು ಎಂದಿರುವ ಹರಿಪ್ರಸಾದ್, ಯುಎಪಿಎ ಅಡಿಯಲ್ಲಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.  


ಇದನ್ನೂ ಓದಿ ಮೆಟ್ರೋ ಪಿಲ್ಲರ್ ಗೆ ಡಿಕ್ಕಿ ಹೊಡೆದ ಕೆ.ಎಸ್.ಆರ್.ಟಿ.ಸಿ ಬಸ್ : 25 ಜನರಿಗೆ ಗಾಯ


ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡರ ಹೋರಾಟಕ್ಕೆ ಬೆಂಬಲ. :
 1200 ಉಪನ್ಯಾಸಕರ ವರ್ಗಾವಣೆಯ ನಿರ್ಧಾರ ಅವೈಜ್ಞಾನಿಕವಾಗಿದೆ. ಈ ಬಗ್ಗೆ ಸಚಿವರ ಗಮನಕ್ಕೆ ತರುವ ನಿಟ್ಟಿನಲ್ಲಿ ಪರಿಷತ್ ಸದಸ್ಯ ಮರಿತಿಬ್ಬೇಗೌಡರ ಧರಣಿಗೆ ಬೆಂಬಲ ನೀಡಿದ್ದೇವೆ. ಏಪ್ರಿಲ್ ಮೇ ತಿಂಗಳಲ್ಲಿ ಕಾಲೇಜು ಪರೀಕ್ಷೆ, ಮೌಲ್ಯಮಾಪನ ನಡೆಯುತ್ತಿದೆ  ಈ ಸಂದರ್ಭದಲ್ಲಿ ಅವೈಜ್ಞಾನಿಕ ವರ್ಗಾವಣೆ ಸರಿಯಲ್ಲ ಎಂದು ಅವರು ಹೇಳಿದ್ದಾರೆ. ಗರ್ಭಿಣಿಯರು, ಅಂಗವಿಕಲರು ಇರುತ್ತಾರೆ . ಇವರನ್ನು ಏಕಾಏಕಿ ವರ್ಗಾವಣೆ ಮಾಡಲಾಗಿದ್ದು, ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಸರ್ಕಾರದ ಕ್ರಮದ ವಿರುದ್ಧಕಿಡಿ ಕಾರಿದ್ದಾರೆ. 


ಕಮಿಷನ್ ದಂಧೆ ನಡೆಯುತ್ತಿರುವುದಕ್ಕೆ ಸರ್ಕಾರ ಕುಖ್ಯಾತಿಯಾಗಿದೆ. ಶಿಕ್ಷಕರ ವರ್ಗಾವಣೆ ಕಮಿಷನ್ ದಂಧೆ ಊಹಾಪೋಹಗಳು ಇವೆ. ವರ್ಗಾವಣೆ ನೀತಿಯನ್ನು ಸರ್ಕಾರ ತರಬೇಕು. ಏಕಾಏಕಿ ವರ್ಗಾವಣೆಯಿಂದ ಶಿಕ್ಷಣಕ್ಕೆ ಅಡ್ಡಿ ಆಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ತೊಂದರೆ ಆಗುತ್ತಿದೆ. ಮರಿತಿಬ್ಬೇಗೌಡರ ಧರಣಿ ಹಿನ್ನೆಲೆಯಲ್ಲಿ ಸಚಿವರು ಖುದ್ದಾಗಿ ಭೇಟಿ ನೀಡಿ ಮಾತನಾಡಬೇಕು ಎಂದು ಒತ್ತಾಯಿಸಿದ್ದಾರೆ. ಅಧಿಕಾರಿಗಳ ಮಾತು ಕೇಳಿಕೊಂಡು ವರ್ಗಾವಣೆ ಮಾಡಬಾರದು ಸಚಿವರು ತಕ್ಷಣವೇ ವರ್ಗಾವಣೆ ಪ್ರಕ್ರಿಯೆ ರದ್ದು ಮಾಡಬೇಕೆಂದು  ಎಂದು ಹರಿಪ್ರಸಾದ್ ಒತ್ತಾಯಿಸಿದ್ದಾರೆ. 


ಇದನ್ನೂ ಓದಿ : 19 ವರ್ಷಗಳ ಬಳಿಕ ಈ ಗ್ರಾಮದಲ್ಲಿ ನರಬಲಿ ಆಚರಣೆ.. 6 ತಾಸು ಉಸಿರಾಟ ನಿಲ್ಲಿಸ್ತಾರಂತೆ ವ್ಯಕ್ತಿ!


 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - https://bit.ly/3hDyh4G Apple Link - https://apple.co/3hEw2hy ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.