K Sudhakar : 'ಬ್ಲ್ಯಾಕ್ ಫಂಗಸ್ ಸಾಂಕ್ರಾಮಿಕ ರೋಗವಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ'

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಂಡುಬಂದಿದ್ದು, ಇದು ಸಾಂಕ್ರಾಮಿಕ ರೋಗವಲ್ಲ. ಆದ್ದರಿಂದ ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

Last Updated : May 21, 2021, 06:08 PM IST
  • ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಂಡುಬಂದಿದ್ದು
  • ಇದು ಸಾಂಕ್ರಾಮಿಕ ರೋಗವಲ್ಲ, ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ
  • ಸೋಂಕು ನಿವಾರಣೆಗೆ ಅಗತ್ಯವಿರುವ ಔಷಧಿ ಪೂರೈಕೆಗೂ ಕ್ರಮ ವಹಿಸಲಾಗಿದ್ದು
K Sudhakar : 'ಬ್ಲ್ಯಾಕ್ ಫಂಗಸ್ ಸಾಂಕ್ರಾಮಿಕ ರೋಗವಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ' title=

ದಾವಣಗೆರೆ : ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಂಡುಬಂದಿದ್ದು, ಇದು ಸಾಂಕ್ರಾಮಿಕ ರೋಗವಲ್ಲ. ಆದ್ದರಿಂದ ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರ ಜೊತೆ ಮಾತನಾಡಿದ ಸಚಿವ ಸುಧಾಕರ್(K Sudhakar), ಜಿಲ್ಲೆಯಲ್ಲಿಯೂ ಈವರೆಗೆ 15 ರಿಂದ 20 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಸೋಂಕಿಗೆ ಚಿಕಿತ್ಸೆ ದೊರಕುವಂತೆ ಮಾಡಲಾಗಿದೆ. ಸೋಂಕು ನಿವಾರಣೆಗೆ ಅಗತ್ಯವಿರುವ ಔಷಧಿ ಪೂರೈಕೆಗೂ ಕ್ರಮ ವಹಿಸಲಾಗಿದ್ದು, ಇದು ಸಾಂಕ್ರಾಮಿಕ ರೋಗವಲ್ಲ, ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದರು.

ಇದನ್ನೂ ಓದಿ : Lockdown Extending : ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಫಿಕ್ಸ್ : ಸಚಿವ ಸುಧಾಕರ್ ಸ್ಪಷ್ಟನೆ!

ರೋಗ ನಿರೋಧಕ ಶಕ್ತಿ(Immunity Power) ಕಡಿಮೆ ಇರುವವರು, ಕೋವಿಡ್ ಚಿಕಿತ್ಸೆಯಲ್ಲಿ ಅತಿಯಾದ ಸ್ಟಿರಾಯ್ಡ್ ಬಳಕೆ, ಅನಿಯಂತ್ರಿತ ಮಧುಮೇಹ ಮುಂತಾದ ಕಾರಣಗಳಿಂದ ಈ ಸೋಂಕು ಉಂಟಾಗುತ್ತಿದೆ. ಕೋವಿಡ್ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆ ಹೊಂದಿರುವವರ ಆರೋಗ್ಯ ತಪಾಸಣೆಗೆ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಬಿಡುಗಡೆಯಾದ ದಿನದಿಂದ 3, 7, 15 ದಿನಗಳ ಅವಧಿಯಲ್ಲಿ ಅವರಿಗೆ ಯಾವ ಬಗೆಯ ಪರೀಕ್ಷೆ ಮಾಡಬೇಕು ಎಂಬುದನ್ನು ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ : Covid-19 Vaccination : ರಾಜ್ಯದಲ್ಲಿ ನಾಳೆಯಿಂದ 18 ರಿಂದ 44 ವಯಸ್ಸಿನವರಿಗೆ ಕೊರೋನಾ ಲಸಿಕೆ!

ಬ್ಲ್ಯಾಕ್ ಫಂಗಸ್(Black Fungus) ಸೋಂಕಿನ ಬಗ್ಗೆ ಮಾಧ್ಯಮಗಳು ದಯವಿಟ್ಟು ವೈಭವೀಕರಿಸಬಾರದು. ಈಗಾಗಲೇ ಕೋವಿಡ್‍ನಿಂದ ಮಾನಸಿಕವಾಗಿ ಆತಂಕದಲ್ಲಿರುವ ಸಮಾಜದಲ್ಲಿ ಇನ್ನಷ್ಟು ಭಯದ ವಾತಾವರಣ ಕಲ್ಪಿಸಬೇಡಿ ಎಂದು ಅವರು ಮನವಿ ಮಾಡಿದರು.

ಇದನ್ನೂ ಓದಿ : Lockdown Extension : ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ! ಸಿಎಂ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News