ಬೆಂಗಳೂರು : ರೈತ ಮುಖಂಡ ರಾಕೇಶ್ ಸಿಂಗ್ ಟಿಕಾಯತ್ ಮೇಲೆ ಮಸಿ ಎರಚಿದ ಘಟನೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದಿದೆ. ಗಾಂಧಿಭವನದಲ್ಲಿ ಸುದ್ದಿ ಗೋಷ್ಠಿ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ. ಕರ್ನಾಟಕ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಗ್ಗೆ ಪ್ರಾದೇಶಿಕ ವಾಹಿನಿಯೊಂದರ ಸ್ಟಿಂಗ್ ಆಪರೇಷನ್ ವಿಡಿಯೋ ಬಗ್ಗೆ ಟೀಕಾಯತ್ ಮಾತನಾಡುತ್ತಿದ್ದ ವೇಳೆ ಅವರ ಮೇಲೆ ಮಸಿ ಎಸೆಯಲಾಗಿದೆ.
ಕೋಡಿಹಳ್ಳಿ ಚಂದ್ರಶೇಖರ್ ಬಗ್ಗೆ ಪ್ರಾದೇಶಿಕ ವಾಹಿನಿಯೊಂದರ ಸ್ಟಿಂಗ್ ಆಪರೇಷನ್ ವಿಡಿಯೋ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದ ವೇಳೆ ಯುವಕನೊಬ್ಬ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಮಸಿ ಎರಚಿದ್ದಾನೆ. ರಾಕೇಶ್ ಸಿಂಗ್ ಟಿಕಾಯತ್,ಯದುವೀರ್ ಸಿಂಗ್ ಚುಕ್ಕಿ ನಂಜುಂಡಸ್ವಾಮಿ ಜಂಟಿ ಪ್ರತಿಕಾಗೊಷ್ಟಿ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ.
ಇದನ್ನೂ ಓದಿ : ಅಯೋಧ್ಯೆ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸಿಎಂ ಬೊಮ್ಮಾಯಿ ಸಾಂತ್ವನ
ಸುದ್ದಿ ಗೋಷ್ಠಿ ನಡೆಯುತ್ತಿದ್ದ ವೇಳೆ ಏಕಾಏಕಿ ನುಗ್ಗಿದ ಯುವಕ ಟಿವಿ ಮೈಕ್ ಕಿತ್ತುಕೊಂಡು ಟಿಕಾಯತ್ ಮೇಲೆ ಹಲ್ಲೆ ನಡೆಸಿದ್ದಾನೆ. ನಂತರ ಟಿಕಾಯತ್ ಮುಖದ ಮೇಲೆ ಕಪ್ಪು ಬಣ್ಣ ಎರಚಿದ್ದಾನೆ. ತಕ್ಷಣವೇ ಸ್ಥಳದಲ್ಲಿದ್ದವರು ಟಿಕಾಯತ್ ರಕ್ಷಣೆಗೆ ಧಾವಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಕೆಲವರು ವಾಗ್ವಾದಕ್ಕಿಳಿದಿದ್ದು, ಅಲ್ಲಿದ್ದ ಕುರ್ಚಿಗಳನ್ನು ಎಸೆಯಲು ಆರಂಭಿಸಿದ್ದಾರೆ. ರೈತ ಮುಖಂಡ ಚಂದ್ರಶೇಖರ್ ಬೆಂಬಲಿಗರು ಈ ಕೃತ್ಯ ಎಸಗಿದ್ದಾರೆ ಎಂದು ರಾಕೇಶ್ ಸಿಂಗ್ ಟಿಕಾಯತ್ ಆರೋಪಿಸಿದ್ದಾರೆ.
ಇದನ್ನೂ ಓದಿ : ಬಸವರಾಜ ಬೊಮ್ಮಾಯಿಯವರೇ, ನಾನು ಮಾತ್ರವಲ್ಲ, ನೀವೂ ದ್ರಾವಿಡರೇ ಆಗಿದ್ದೀರಿ'
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.