ಎಸ್ಟಿ ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್ಮೇಲ್ ಪ್ರಕರಣ: ಉದ್ಯಮಿ ವಿರುದ್ಧ ದಾಖಲಾದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ST Somasekar: ಈ ಕುರಿತಾಗಿ ತಮ್ಮ ವಿರುದ್ಧ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಲ್ಲಿಕೆಯಾದ ಚಾರ್ಜ್ ಶೀಟ್ ಅನ್ನು ರದ್ದುಗೊಳಿಸುವಂತೆ ಕೋರಿ ಬೆಂಗಳೂರಿನ ಆರ್ಟಿ ನಗರ ನಿವಾಸಿ ರಾಹುಲ್ ಭಟ್ ಅರ್ಜಿ ಸಲ್ಲಿಸಿದರು. ಈ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ ತೀರ್ಪನ್ನು ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸೋಮವಾರ ಪ್ರಕಟಿಸಿತು.
ಶಾಸಕ ಎಸ್.ಟಿ ಸೋಮಶೇಖರ್ ಪುತ್ರ ನಿಶಾಂತ್ ಅವರಿಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಹುಲ್ ಭಟ್ ವಿರುದ್ಧ ದಾಖಲಾದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಇದನ್ನೂ ಓದಿ: Bigg Boss 11: ಬಿಗ್‌ಬಾಸ್ ಮನೆಯಿಂದ ಹೊರಬರುತ್ತಿದ್ದಂತೆ ಕಿಚ್ಚನ ಭೇಟಿ ಮಾಡಲು ಬಂದ ದರ್ಶನ್ ಅಭಿಮಾನಿ!! ಫೋಟೋ ವೈರಲ್
ಈ ಕುರಿತಾಗಿ ತಮ್ಮ ವಿರುದ್ಧ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಲ್ಲಿಕೆಯಾದ ಚಾರ್ಜ್ ಶೀಟ್ ಅನ್ನು ರದ್ದುಗೊಳಿಸುವಂತೆ ಕೋರಿ ಬೆಂಗಳೂರಿನ ಆರ್ಟಿ ನಗರ ನಿವಾಸಿ ರಾಹುಲ್ ಭಟ್ ಅರ್ಜಿ ಸಲ್ಲಿಸಿದರು. ಈ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ ತೀರ್ಪನ್ನು ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸೋಮವಾರ ಪ್ರಕಟಿಸಿತು.
ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಈ ಹಿಂದಿನ ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲ ವಕೀಲ ಪಿ. ವೆಂಕಟೇಶ್ ದಳವಾಯಿ ವಾದ ಮಂಡಿಸಿ ಅರ್ಜಿದಾರರ ವಿರುದ್ಧ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾದದ್ದು, ದುರುದ್ದೇಶದಿಂದ ಸುಖಾಸುಮ್ಮನೆ ಅವರ ಮೇಲೆ ಅಪಾದನೆ ಹೊರಿಸಲಾಗಿದೆ. ಹಾಗಾಗಿ ಪ್ರಕರಣವನ್ನು ರದ್ದುಗೊಳಿಸುವಂತೆ ಮನವಿ ಮಾಡಿದರು.
ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ಈ 2 ಬೀಜಗಳನ್ನು ಜಗಿದು ತಿಂದ್ರೆ ಹೈ ಶುಗರ್ ಕೂಡ ಕೆಲ ಹೊತ್ತಲ್ಲೇ ಕಂಟ್ರೋಲ್ ಆಗುತ್ತೆ!
ಪ್ರಕರಣವೇನು ?
ನಿಶಾಂತ್ ಅವರ ಅಶ್ಲೀಲ ವಿಡಿಯೋ ತಯಾರಿಸಿ ವಾಟ್ಸಾಪ್ ಮೂಲಕ ಕಳುಹಿಸಿ, ಆರೋಪಿ ರಾಹುಲ್ ಭಟ್ ಎಂಬಾತ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾನೆ. ಕೇಳಿದಷ್ಟು ಹಣವನ್ನು ನೀಡದೆ ಹೋದರೆ ಅಶ್ಲೀಲ ವಿಡಿಯೋ ಮತ್ತು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಮತ್ತು ಮಾಧ್ಯಮಗಳಿಗೆ ಹರಿದುಬಿಡುವುದಾಗಿ ಬೆದರಿಕೆ ಹಾಕಿರುವುದಾಗಿ ಶಾಸಕ ಎಸ್.ಟಿ ಸೋಮಶೇಖರ್ ಪಿಎ ಸಿಸಿಬಿಯ ಸೈಬರ್ ಕ್ರೈಂ ಠಾಣೆಗೆ ದೂರೂ ದಾಖಲಿಸಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.