ಬೆಂಗಳೂರು: ಅಕ್ರಮ ವಿದೇಶಿ ವಲಸಿಗರನ್ನು ತಡೆದಿಡುವ ಮತ್ತು ಕೇಂದ್ರ ಸರ್ಕಾರದ ಸಾಮರ್ಥ್ಯವನ್ನು ಇಮ್ಮಡಿಗೊಳಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಉನ್ನತ ಮಟ್ಟದ ಜಂಟಿ ಸಭೆಯನ್ನು, ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಜೊತೆ ನಡೆಸಿದರು.


COMMERCIAL BREAK
SCROLL TO CONTINUE READING

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, “ಅಕ್ರಮ ವಲಸಿಗರು ವೀಸಾ ಅವಧಿ ಮುಗಿದರೂ ದೇಶದಲ್ಲಿಯೇ ಉಳಿದುಕೊಳ್ಳುತ್ತಿದ್ದು ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಅಪಾಯ ಇರುವ ದೃಷ್ಟಿಯಿಂದ ಅವರನ್ನು ಗಡಿಪಾರು ಮಾಡುವ ಅಗತ್ಯವಿದೆ” ಎಂದರು.


ಇದನ್ನೂ ಓದಿ: ರಕ್ಷಾ ದಾರ ಮೊದಲು ಕಟ್ಟಿದ್ದು ಯಾರು ಗೊತ್ತಾ? ಅಣ್ಣ ತಂಗಿಯರ ಸಂಬಂಧದಲ್ಲಿ ಇರಲಿಲ್ಲ ಈ ಪದ್ಧತಿ!


ಪ್ರಸ್ತುತ ಇರುವ ಅಕ್ರಮ ವಿದೇಶಿ ವಲಸಿಗರಿಗೆ ತಾತ್ಕಾಲಿಕ ವಸತಿ ಕಲ್ಪಿಸುವ ' ದಿಗ್ಬಂಧನ ಕೇಂದ್ರ ' (detention center) ವನ್ನು ವಿಸ್ತರಿಸಿ ಸಾಮರ್ಥ್ಯ ಹೆಚ್ಚಿಸುವ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಪ್ರಸ್ತಾಪಿಸಿದರು. ಅಕ್ರಮ ಬಾಂಗ್ಲಾದೇಶಿ ನಾಗರಿಕರೂ ಸೇರಿದಂತೆ ಇತರ ದೇಶದ ವಲಸಿಗರನ್ನು ದೇಶದ ಕಾನೂನಿನಂತೆ ಬಂಧಿಸಿ ಯಾವುದೇ ಕಾರಾಗೃಹಗಳಲ್ಲಿ ಇಡದೆ, ಇವರಿಗೆಂದೇ ಇರುವ ದಿಗ್ಬಂಧನ ಕೇಂದ್ರದಲ್ಲಿ ವಸತಿ ಕಲ್ಪಿಸಬೇಕು ಹಾಗೂ ಅದಕ್ಕಾಗಿ ತಕ್ಷಣ ಕ್ರಮ ವಹಿಸಬೇಕಾಗಿದೆ ಎಂದರು.


ಪ್ರಸ್ತುತ ಬೆಂಗಳೂರಿನ ಸಮೀಪವಿರುವ ನೆಲಮಂಗಲದಲ್ಲಿ ದಿಗ್ಬಂಧನ ಕೇಂದ್ರವೊಂದು ಕಾರ್ಯಾಚರಣೆ ನಡೆಸುತ್ತಿದ್ದು, ಅಲ್ಲಿ ಸ್ಥಳಾವಕಾಶ ಕೊರತೆ ಇದೆ ಎಂದರು.


ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, “ಪ್ರಸ್ತುತ ದಿಗ್ಬಂಧನ ಕೇಂದ್ರದ ಸಾಮರ್ಥ್ಯ ವಿಸ್ತರಣೆಗೆ ಸಮಾಜ ಕಲ್ಯಾಣ ಇಲಾಖೆ ಅನುದಾನ ಒದಗಿಸಬೇಕು. ವಿಳಂಬವಿಲ್ಲದಂತೆ ಕ್ರಮ ಕೈಗೊಳ್ಳಬೇಕು” ಎಂದು ವಿನಂತಿಸಿದರು.


ಈ ಕುರಿತು ಮಾತನಾಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, “ಈ ಕುರಿತು ಗೃಹ ಇಲಾಖೆ ಸಲ್ಲಿಸುವ ಪ್ರಸ್ತಾವನೆಯನ್ನು ಆದ್ಯತೆ ಮೇರೆಗೆ ಪರಿಗಣಿಸಲಾಗುವುದು” ಎಂದರು.


ಇದನ್ನೂ ಓದಿ: ಬಿಹಾರದಲ್ಲಿ ಬಿಜೆಪಿ ಮೈತ್ರಿ ಗುಡ್ ಬೈ : ನಿತೀಶ್ ವ್ಯಂಗ್ಯವಾಡಿದ ಪ್ರಶಾಂತ್ ಕಿಶೋರ್!


ಸಭೆಯಲ್ಲಿ ಉಪಸ್ಥಿತರಿದ್ದ ಹಿರಿಯ ಸಮಾಜ ಕಲ್ಯಾಣ ಅಧಿಕಾರಿಗಳಿಗೆ, ಸಚಿವ ಪೂಜಾರಿಯವರು ಸಭೆಯಲ್ಲಿಯೇ ನಿರ್ದೇಶನ ನೀಡಿದರು. ಇನ್ನು ಇದೇ ಸಂದರ್ಭದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳೂ ಉಪಸ್ತಿತರಿದ್ದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.