ಬೆಂಗಳೂರು: ಸಕಲ ಸೌಲಭ್ಯಗಳಿರುವ ನವಬೆಂಗಳೂರನ್ನು ನಿರ್ಮಿಸಲು ನೀಲನಕ್ಷೆ ( Blueprint for New Bangalore) ಸಿದ್ಧಪಡಿಸಲಾಗುತ್ತಿದೆ. ಈ ಹಿನ್ನೆಲೆ ವಿಶೇಷ ಅನುದಾನವನ್ನು ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 


COMMERCIAL BREAK
SCROLL TO CONTINUE READING

ಅವರು ಇಂದು ಜಿಎಂ ಹಾಗೂ ಅದ್ವಿತೀಯ ಗ್ರೂಪ್ ನ ಐಟಿ ಪಾರ್ಕ್ (IT Park) ಯೋಜನೆಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai), ಬೃಹತ್ ಆಗಿ ಬೆಳೆಯುತ್ತಿರುವ ಬೆಂಗಳೂರನ್ನು ಯೋಜನಾಬದ್ಧವಾಗಿ ಹಾಗೂ ಸಮಗ್ರವಾಗಿ ಅಭಿವೃದ್ಧಿಗೊಳಿಸಬೇಕಿದೆ. ಎಲ್ಲ ವರ್ಗದ ಜನರಿಗೆ ಸೌಲಭ್ಯಗಳನ್ನು ತಲುಪಿಸುವ ವಿಶೇಷ ಯೋಜನೆಗಳನ್ನು ಒಟ್ಟಾಗಿ ರೂಪಿಸುತ್ತಿದ್ದೇವೆ ಎಂದರು. 


ಬಿ.ಎಸ್.ಯಡಿಯೂರಪ್ಪ (BS Yediyurappa) ಅವರ ಕಾಲದಲ್ಲಿ ರೂಪಿಸಲಾದ ಬೆಂಗಳೂರು ವಿಷನ್-2022 ಯೋಜನೆಯಡಿ 4-5 ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಅವುಗಳಿಗೆ ವೇಗವನ್ನು ನೀಡಲು  ಈಗಾಗಲೇ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. 


ಜಿಎಂ ಸಂಸ್ಥೆಯ ಕೊಡುಗೆ:


ಜಿ.ಎಂ.ಸಿದ್ದೇಶ್ವರ (G.M.Siddeshwar) ಅವರ ಎರಡು ಮತ್ತು ಮೂರನೇ ಪೀಳಿಗೆ ಯಶಸ್ವಿಯಾಗಿ ವ್ಯಾಪಾರದಲ್ಲಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಕೊಡುಗೆ ನೀಡಿದ್ದಾರೆ. ಉತ್ತರ ಕರ್ನಾಟಕಕ್ಕೆ ಹೆಸರುವಾಸಿಯಾದ ಸಂಸ್ಥೆಯಾಗಿದೆ. ಬೆಂಗಳೂರಿನಲ್ಲಿ ಆಸ್ಪತ್ರೆ ನಿರ್ಮಿಸಿ, ಆರೋಗ್ಯ ಸೇವೆಗಳನ್ನು ಉತ್ತಮ ರೀತಿಯಲ್ಲಿ ನೀಡುತ್ತಿದ್ದಾರೆ. ಎಲ್ಲ ರಂಗದಲ್ಲಿಯೂ ಯಶಸ್ವಿಯಾಗಿ ಕಠಿಣ ಪರಿಶ್ರಮದಿಂದ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದರು. 


ಇದೀಗ ಐಟಿ ಹಬ್ (IT Hub) ನಿರ್ಮಿಸಿ 10 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಲಿದ್ದಾರೆ. ರಾಜ್ಯದಲ್ಲಿ ಬೆಂಗಳೂರು ಪ್ರಸಿದ್ಧವಾಗಿದ್ದು ಐಟಿಯಿಂದಾಗಿ ನಾಲ್ಕು ದಿಕ್ಕಿನಲ್ಲಿಯೂ ಮಾಹಿತಿ ತಂತ್ರಜ್ಞಾನ ಉದ್ಯಮ ವಿಸ್ತರಣೆಯಾಗಿದೆ. ಐಟಿ ಉದ್ಯಮಕ್ಕೆ ಹಿಂದಿನ ಸರ್ಕಾರಗಳೂ ಸೇರಿದಂತೆ ನಮ್ಮ ಸರ್ಕಾರವೂ ಮಹತ್ವ ಮತ್ತು ಪ್ರೋತ್ಸಾಹ ನೀಡುತ್ತಾ ಬಂದಿದೆ. ಅತಿ ಹೆಚ್ಚು ಉದ್ಯೋಗ ಲಭಿಸುತ್ತಿರುವುದು ಐಟಿ ವಲಯದಲ್ಲಿ ವಿದ್ಯಾವಂತರಿಗೆ ದೊಡ್ಡ ಪ್ರಮಾಣದಲ್ಲಿ ಅವಕಾಶಗಳು ದೊರಕುತ್ತಿದೆ ಎಂದು ಹೇಳಿದರು. 


ದುಡಿಯುವ ವರ್ಗದವರ ಕೈಯಲ್ಲಿ ದೇಶದ ಆರ್ಥಿಕತೆ:


ಜನರ ಕೈಯಲ್ಲಿ ಉದ್ಯೋಗ ಇದ್ದಾಗ ಮಾತ್ರ ದೇಶ ಅಭಿವೃದ್ಧಿಯಾಗಿ, ಆರ್ಥಿಕತೆ ಬೆಳೆಯುತ್ತದೆ. ಆ ನಿಟ್ಟಿನಲ್ಲಿ ಐಟಿ ಸೇವೆಗಳು ದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅತಿ ಹೆಚ್ಚು ರಫ್ತು ಆಗುತ್ತಿರುವುದು ಐಟಿ ವಲಯದಲ್ಲಿ. ದೇಶದ ಒಟ್ಟು ರಫ್ತಿನ ಪ್ರಮಾಣದಲ್ಲಿ ಶೇ.40 ರಷ್ಟು ರಫ್ತು ಬೆಂಗಳೂರಿನಿಂದ ಆಗುತ್ತಿದೆ. ಹೀಗಾಗಿ ಬೆಂಗಳೂರು ದೇಶದ ಆರ್ಥಿಕತೆಯ ಪ್ರಮುಖ ಕೇಂದ್ರವಾಗಿದೆ ಎಂದು ಮಾಹಿತಿ ನೀಡಿದರು.    


ಕೋವಿಡ್ ಮುಗಿದು ಆರ್ಥಿಕ ಬೆಳವಣಿಗೆಯಾಗುತ್ತಿರುವ ಸಂದರ್ಭದಲ್ಲಿ ಐಟಿ ಹಬ್ ನಿರ್ಮಾಣವಾಗುತ್ತಿರುವುದು ಬೆಂಗಳೂರಿನ ಬೆಳವಣಿಗೆಯ ಕಿರೀಟಕ್ಕೆ ಮತ್ತೊಂದು ಗರಿ ಮೂಡಿಸಿದಂತಾಗಿದೆ ಎಂದರು. 


ಇದನ್ನೂ ಓದಿ: ಮುಂದಿನ 4 ರಿಂದ 6 ವಾರಗಳ ಕಾಲ ಸೋಂಕು ಹೆಚ್ಚಾಗಿ ಹರಡುತ್ತೆ, ಜನ ಎಚ್ಚರ ವಹಿಸಬೇಕು: ಆರೋಗ್ಯ ಸಚಿವ ಸುಧಾಕರ್


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.