BMS ಅಕ್ರಮ: ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ರಾಜೀನಾಮೆಗೆ ಬೀಗಿ ಪಟ್ಟು

ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್ ನಲ್ಲಿ ದಾನಿ ಟ್ರಸ್ಟಿ ಮತ್ತು ಅಜೀವ ಟ್ರಸ್ಟಿಗಳ ನೇಮಕದಲ್ಲಿ ಅಕ್ರಮ ಹಾಗೂ ಇಡೀ ಟ್ರಸ್ಟಿನ ಆಸ್ತಿಯನ್ನು ಖಾಸಗಿ ವ್ಯಕ್ತಿಗಳು ಲಪಟಾಯಿಸಲು ಶಾಮೀಲು ಆರೋಪಕ್ಕೆ ಗುರಿಯಾಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿರುದ್ಧ ಬೆಂಗಳೂರಿನ ಸರ್ವಜ್ಞನಗರ ವಿಧಾನಸಭೆ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಜಾಥಾ ನಡೆಸಿ ಪ್ರತಿಭಟನೆ ನಡೆಸಿದರು.

Last Updated : Sep 25, 2022, 05:16 AM IST
  • ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ರಮೇಶ್ ಗೌಡ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
  • ಪಕ್ಷದ ಕಾರ್ಯಕರ್ತರು ಸಚಿವರ ಭೂತ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
BMS ಅಕ್ರಮ: ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ರಾಜೀನಾಮೆಗೆ ಬೀಗಿ ಪಟ್ಟು title=

ಬೆಂಗಳೂರು: ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್ ನಲ್ಲಿ ದಾನಿ ಟ್ರಸ್ಟಿ ಮತ್ತು ಅಜೀವ ಟ್ರಸ್ಟಿಗಳ ನೇಮಕದಲ್ಲಿ ಅಕ್ರಮ ಹಾಗೂ ಇಡೀ ಟ್ರಸ್ಟಿನ ಆಸ್ತಿಯನ್ನು ಖಾಸಗಿ ವ್ಯಕ್ತಿಗಳು ಲಪಟಾಯಿಸಲು ಶಾಮೀಲು ಆರೋಪಕ್ಕೆ ಗುರಿಯಾಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿರುದ್ಧ ಬೆಂಗಳೂರಿನ ಸರ್ವಜ್ಞನಗರ ವಿಧಾನಸಭೆ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಜಾಥಾ ನಡೆಸಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ದೆಹಲಿ ಏಮ್ಸ್ ನಿರ್ದೇಶಕರಾಗಿ ಕನ್ನಡಿಗ ಎಂ.ಶ್ರೀನಿವಾಸ ಪ್ರಸಾದ್ ನೇಮಕ

ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ರಮೇಶ್ ಗೌಡ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪಕ್ಷದ ಕಾರ್ಯಕರ್ತರು ಸಚಿವರ ಭೂತ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ನಾಳೆ ಯಾವ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ MSD? ಸಾಮಾಜಿಕ ಮಾಧ್ಯಮದ ಮೇಲೆ ಘೋಷಣೆ

ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡರು; "ಸಚಿವ ಸ್ಥಾನಕ್ಕೆ ಅಶ್ವತ್ಥನಾರಾಯಣ ಅವರು ಕೂಡಲೇ ರಾಜೀನಾಮೆ ನೀಡಬೇಕು, ಇಡೀ ಬಿಎಂಸ್ ಟ್ರಸ್ಟ್ ಅನ್ನು ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಅಕ್ರಮದ ಬಗ್ಗೆ ಉನ್ನತ ತನಿಖೆ ನಡೆಸಬೇಕು" ಎಂದು ಒತ್ತಾಯಿಸಿದರು.

ವಿಧಾನಸಭೆ ಕಲಾಪದಲ್ಲಿಯೇ ನಮ್ಮ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ದಾಖಲೆ ಸಮೇತ ಹಗರಣವನ್ನು ಬಯಲು ಮಾಡಿದ್ದಾರೆ. ಆದರೆ, ತನಿಖೆ ನಡೆಸುವುದಿಲ್ಲ ಎಂದು ಹೇಳಿ ಬಿಜೆಪಿ ಸರಕಾರ ಭಂಡತನ ಪ್ರದರ್ಶಿಸುತ್ತಿದೆ ಎಂದು ಅವರು ಆರೋಪ ಮಾಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News