BMTC Bus: ಬೆಂಗಳೂರಿನಲ್ಲಿ ಬಸ್ ಸಂಚಾರ ಹೆಚ್ಚಳಕ್ಕೆ ಬಿಎಂಟಿಸಿ ನಿರ್ಧಾರ

ಪರಸ್ಥಳಗಳಿಂದ ಬೆಂಗಳೂರಿಗೆ ಬರುವ ಸಾಮಾನ್ಯ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿರುವ ಹಿನ್ನೆಲೆ ಸಂಸ್ಥೆಯಿಂದ ಹೆಚ್ಚುವರಿ ಬಸ್​ಗಳ ಸಂಚಾರ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Written by - Puttaraj K Alur | Last Updated : Oct 2, 2021, 10:00 AM IST
  • ಪ್ರಯಾಣಿಕರು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಿಎಂಟಿಸಿ ಸಂಸ್ಥೆಯಿಂದ ಕ್ರಮ
  • ಪ್ರಸ್ತುತ ಇರುವ ಬಸ್ ಗಳ ಜೊತೆಗೆ 100 ಹೆಚ್ಚುವರಿ ಬಸ್ ಸಂಚಾರಕ್ಕೆ ನಿರ್ಧಾರ
  • ಲಾಕ್​ಡೌನ್ ಸಡಿಲಕೆ ಬಳಿಕ ಪ್ರಯಾಣಿಕರಿಗೆ ಸಮರ್ಪಕ & ಸುರಕ್ಷಿತ ಸೇವೆ ಒದಗಿಸಲು ಬದ್ಧವಾದ ಸಂಸ್ಥೆ
BMTC Bus: ಬೆಂಗಳೂರಿನಲ್ಲಿ ಬಸ್ ಸಂಚಾರ ಹೆಚ್ಚಳಕ್ಕೆ ಬಿಎಂಟಿಸಿ ನಿರ್ಧಾರ title=
ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರ (Photo Courtesy: @Zee News)

ಬೆಂಗಳೂರು: ಪ್ರಯಾಣಿಕರು, ವಿದ್ಯಾರ್ಥಿಗಳ ಅನುಕೂಲಕಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (Bengaluru Metropolitan Transport Corporation) ಸೋಮವಾರದಿಂದ (ಅಕ್ಟೋಬರ್ 4) ಹೆಚ್ಚುವರಿಯಾಗಿ 100 ಬಸ್​ಗಳನ್ನು ವಿವಿಧ ಮಾರ್ಗಗಳಲ್ಲಿ ಸಂಚರಿಸಲು ಕ್ರಮ ಕೈಗೊಂಡಿದೆ. ಈ ಬಗ್ಗೆ ಬಿಎಂಟಿಸಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪತ್ರಿಕಾ ಹೇಳಿಕೆ ಮೂಲಕ ಮಾಹಿತಿ ನೀಡಿದೆ.

‘ಬಿಎಂಟಿಸಿ(BMTC) ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ಸಮರ್ಪಕ ಸುರಕ್ಷಿತ ಸಾರಿಗೆ ಸೇವೆಯನ್ನು ಕಡಿಮೆ ದರದಲ್ಲಿ ಒದಗಿಸುತ್ತಿದೆ. ಸಂಸ್ಥೆಯ ವಿವಿಧ ಮಾರ್ಗಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಹಾಗೂ ಅವರ ಹಿತದೃಷ್ಟಿಯಿಂದ ಸಾರಿಗೆ ಸೇವೆಗಳನ್ನು ಒದಗಿಸುತ್ತಿದೆ. ಕೊವಿಡ್-19 ಲಾಕ್​ಡೌನ್ ಸಡಿಲಕೆಯ ನಂತರ ಪ್ರಯಾಣಿಕರಿಗೆ ಸಮರ್ಪಕ ಹಾಗೂ ಸುರಕ್ಷಿತ ಸೇವೆ ಒದಗಿಸಲು ಸಂಸ್ಥೆಯು ಬದ್ಧವಾಗಿದೆ. ಕೊರೊನಾ ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರದ ಸೂಚನೆಯಂತೆ ಎಲ್ಲ ರೀತಿಯ ಕೊವಿಡ್(COVI-19) ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ನಮ್ಮ ಬಸ್​ಗಳು ಸಂಚರಿಸುತ್ತವೆ. ಪ್ರಸ್ತುತ ಬೆಂಗಳೂರಿನಲ್ಲಿ ಒಟ್ಟು 4,943 ಬಸ್​ಗಳು ಸಂಚರಿಸುತ್ತಿವೆ’ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಬಸವರಾಜ್ ಬೊಮ್ಮಾಯಿ ರಾಜ್ಯಕ್ಕೆ ‘ಅತಿಥಿ ಸಿಎಂ’ನಂತಾಗಿದ್ದಾರೆ: ಕಾಂಗ್ರೆಸ್ ಟೀಕೆ

ರಾಜ್ಯ ಸರ್ಕಾರವು ಕೊವಿಡ್-19(COVID-19) ನಿರ್ಬಂಧಗಳನ್ನು ಸಡಿಲಗೊಳಿಸಿದೆ. ಹೀಗಾಗಿ ‘ಬೆಂಗಳೂರಿನ ಜನಜೀವನ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. 6ನೇ ತರಗತಿಯಿಂದ 10ನೇ ತರಗತಿ, ಪದವಿ, ಸ್ನಾತಕೋತ್ತರ, ತಾಂತ್ರಿಕ ಮತ್ತು ವೈದ್ಯಕೀಯ ಹಾಗೂ ಡಿಪ್ಲೊಮಾ ಕಾಲೇಜುಗಳಲ್ಲಿ ತರಗತಿಗಳು ಆರಂಭ(College Reopening)ವಾಗಿವೆ. ಬೆಂಗಳೂರು ನಗರ ಹಾಗೂ ಹೊರವಲಯದಲ್ಲಿ ಪ್ರಯಾಣಿಕರ ಸಂಚಾರ ಹಾಗೂ ವಾಣಿಜ್ಯ ಚಟುವಟಿಕೆಗಳು ಕೂಡ ಸಹಜ ಸ್ಥಿತಿಯತ್ತ ಮರಳುತ್ತಿದೆ. ಪರಸ್ಥಳಗಳಿಂದ ಬೆಂಗಳೂರಿಗೆ ಬರುವ ಸಾಮಾನ್ಯ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿರುವ ಹಿನ್ನೆಲೆ ಸಂಸ್ಥೆಯಿಂದ ಹೆಚ್ಚುವರಿ ಬಸ್​ಗಳ ಸಂಚಾರ ಆರಂಭಿಸಲು ನಿರ್ಧರಿಸಲಾಗಿದೆ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಬಿಜೆಪಿ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡಿದೆ: ಸಿದ್ದರಾಮಯ್ಯ ಆರೋಪ

‘ಸಾರ್ವಜನಿಕ ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ಇತರ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬಿಎಂಟಿಸಿ ವತಿಯಿಂದ ಅಕ್ಟೋಬರ್ 4 ರಿಂದ ಜಾರಿಗೆ ಬರುವಂತೆ ಪ್ರಸ್ತತ ಸಂಚರಿಸುತ್ತಿರುವ ಸಾರಿಗೆ ಬಸ್ ಗಳ ಜೊತೆ ಹೆಚ್ಚುವರಿಯಾಗಿ 100 ಬಸ್ ಗಳನ್ನು ಕಾರ್ಯಾಚರಿಸಲಾಗುವುದು’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News