BMTC Buses : ಹೊಸ ವರ್ಷಕ್ಕೆ ಕೆಲವೇ ಕೆಲವು ದಿನಗಳು ಮಾತ್ರ ಬಾಕಿ ಇದೆ. ನೂತನ ವರ್ಷ ಪ್ರಾರಂಭಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನ ಪ್ರಯಾಣಿಕರಿಗೆ ಸಿಹಿ ಸುದ್ದಿಯನ್ನು ನೀಡಿದೆ... ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


COMMERCIAL BREAK
SCROLL TO CONTINUE READING

ಹೌದು.. ಹೊಸ ವರ್ಷಕ್ಕೆ ತನ್ನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಲು ಬಿಎಂಟಿಸಿ ರೆಡಿಯಾಗಿದೆ.. ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ನೀಡಿದೆ. ಇನ್ನು ಇದೇ ವೇಳೆ ಪ್ರಯಾಣಿಕರ ಕಷ್ಟವನ್ನು ಅರ್ಥಮಾಡಿಕೊಂಡಿರವ ಬಿಎಂಟಿಸಿ ಹೊಸದಾಗಿ ಬಸ್‌ ಸಂಚಾರ ಪ್ರಾರಂಭಿಸಲು ರೆಡಿಯಾಗಿದೆ.


ಇದನ್ನೂ ಓದಿ: ರಸ್ತೆ ಗುತ್ತಿಗೆದಾರನಿಂದ ಹಣ ಸ್ವೀಕರಿಸುವಾಗ ಲೋಕಾಯುಕ್ತ ರೇಡ್‌


ಹೊಸದಾಗಿ 100 ಹೊಸ ನಾನ್-ಎಸಿ ಎಲೆಕ್ಟ್ರಿಕ್ ಬಸ್‌ಗಳನ್ನು ಬೆಂಗಳೂರಿನ ರಸ್ತೆಗೆ ಇಳಿಸಲು ಬಿಎಂಟಿಸಿ ಸಚ್ಚಾಗಿದೆ. ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಹಿನ್ನೆಲೆ ಬಸ್​ಗಳಲ್ಲಿ ಜನಸಂದಣಿ ಉಂಟಾಗುತ್ತಿತ್ತು. ಅಲ್ಲದೆ, ಇದನ್ನೇ ಕೆಲ ಕಿಡಿಗೇಡಿಗಳು ಲಾಭವಾಗಿಸಿಕೊಂಡು, ಉಚಿತ ಪ್ರಯಾಣ, ಕಳ್ಳತನ ಸೇರಿದಂತೆ ಹಲವು ರೀತಿಯ ಅಪರಾಧ ಕೃತ್ಯಕ್ಕೆ ಮುಂದಾಗಿದ್ದರು. 


ಟಾಟಾ ಮೋಟಾರ್ಸ್ ತಯಾರಿಸಿರುವ ಈ ಹೊಸ ನಾನ್ ಎಸಿ ಎಲೆಕ್ಟ್ರಿಕ್ ಬಸ್‌ಗಳು, ಬೆಂಗಳೂರು ನಗರ ಮತ್ತು ಉಪನಗರದ ಪ್ರದೇಶಗಳು ಸೇರಿದಂತೆ ಒಟ್ಟು 12 ಮಾರ್ಗಗಳಲ್ಲಿ ಸಂಚಾರ ನಡೆಸಲಿದೆ. ಈ ಕುರಿತು ಟೈಮ್ಸ್ ಆಫ್ ಇಂಡಿಯಾಗೆ ಬಿಎಂಟಿಸಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕ ಕಟ್ಟಲು ಮುಂದಾದ ಅಭಿಮಾನಿಗಳು


ಸರ್ಜಾಪುರ, ಚಂದಾಪುರ, ಬನ್ನೇರುಘಟ್ಟ ರಸ್ತೆ ಮತ್ತಿತರ ಮಾರ್ಗಗಳಲ್ಲಿ ಈ ಬಸ್‌ಗಳು ಸಂಚರಿಸುವ ಸಾಧ್ಯತೆ ಇದೆ. ಬಸ್‌ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಆದರೆ ಸಂತೋಷದ ವಿಚಾರ ಅಂದ್ರೆ, ಶಕ್ತಿ ಯೋಜನೆಯ ಫಲಾನುಭವಿಗಳು ಈ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬಿಎಂಟಿಸಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.