BMTC Recruitment 2024 : 2,500 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಪೂರ್ಣ ಮಾಹಿತಿ ಇಲ್ಲಿದೆ

BMTC : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 2500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.   

Written by - Zee Kannada News Desk | Last Updated : Mar 29, 2024, 04:41 PM IST
  • ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
  • 2500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
  • ದ್ವಿತೀಯ ಪಿಯು ಪೂರ್ಣಗೊಳಿಸಿರಬೇಕು. ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ, ಬ್ಯಾಡ್ಜ್ ಹೊಂದಿರಬೇಕಾಗುತ್ತದೆ.
BMTC Recruitment 2024 : 2,500 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಪೂರ್ಣ ಮಾಹಿತಿ ಇಲ್ಲಿದೆ title=

BMTC Recruitment 2024 : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು  ಈ ಕುರಿತು ಅಧಿಸೂಚನೆ ಹೊರಡಿಸಿದ್ದು,  2,500 ನಿರ್ವಾಹಕ ಹುದ್ದೆಗಳನ್ನು ಭರ್ತಿ ಅರ್ಜಿ ಅಹ್ವಾನಿಸಿದೆ. ಮಾರ್ಚ್‌ 10ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಎಂದು ತಿಳಿಸಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ, ವಯೋಮಿತಿ, ವೇತನ ಕುರಿತು ಮಾಹಿತಿ ಈ ಕೆಳಗಿನಂತಿದೆ. 

ಅರ್ಹತೆಗಳು : 2,500 ನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ನೋಟಿಫಿಕೇಶನ್‌ ಬಿಡುಗಡೆಗೊಳಿಸಿದೆ. ದ್ವಿತೀಯ ಪಿಯು ಪೂರ್ಣಗೊಳಿಸಿರಬೇಕು. ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ, ಬ್ಯಾಡ್ಜ್ ಹೊಂದಿರಬೇಕಾಗುತ್ತದೆ.

ಇದನ್ನು ಓದಿ : ಎರಡು ತಂಡಗಳಲ್ಲಿ ಮಹತ್ವದ ಬದಲಾವಣೆ! ತಂಡಕ್ಕೆ ಆಧಾರಸ್ಥಂಭವಾಗಿದ್ದ ಇಬ್ಬರು ಸ್ಟಾರ್ ಪ್ಲೇಯರ್ಸ್ ಔಟ್

ವಯೋಮಿತಿ ; 
ಸಾಮಾನ್ಯ ವರ್ಗ : ಗರಿಷ್ಠ 35 ವರ್ಷ
 2ಎ, 2ಬಿ, 3ಎ ಮತ್ತು 3ಬಿ ; ಗರಿಷ್ಠ 38 ವರ್ಷ
ಎಸ್ಸಿ, ಎಸ್ಟಿ ಮತ್ತು ಪ್ರವರ್ಗ-1 : ಗರಿಷ್ಠ 40 ವರ್ಷ
ಮಾಜಿ ಸೈನಿಕ, ಇಲಾಖಾ ಅಭ್ಯರ್ಥಿಗೆ 45 ವರ್ಷ
ಅಭ್ಯರ್ಥಿಗಳು ಕನಿಷ್ಠ ವಯೋಮಿತಿ 18 ವರ್ಷ ಹೊಂದಿರಬೇಕು. 

ದೇಹದಾರ್ಢ್ಯತೆ : ಪುರುಷರು 160 ಸೆಂಟಿ ಮೀಟರ್‌, ಮಹಿಳೆಯರು 150 ಸೆಂಟ್‌ ಮೀಟರ್‌ ಎತ್ತರ ಇರಬೇಕಾಗುತ್ತದೆ.

ಶುಲ್ಕ : 
ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 750 ರೂಪಾಯಿ
ಎಸ್ಸಿ, ಎಸ್ಟಿ, ಪ್ರವರ್ಗ 1, ಮಾಜಿ ಸೈನಿಕ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 500 ರೂಪಾಯಿ 

ಇದನ್ನು ಓದಿ : 5 ನಿಮಿಷದಲ್ಲಿ ಬಿಳಿ ಕೂದಲನ್ನು ಕಪ್ಪಾಗಿಸುತ್ತವೆ ಅಡುಗೆ ಮನೆಯಲ್ಲಿ ಸಿಗುವ ಈ 3 ವಸ್ತುಗಳು..!

ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ವೃತ್ತಿ ತರಬೇತಿಯಲ್ಲಿ ಮಾಸಿಕ ವೇತನ 9,100 ರೂಪಾಯಿ ನೀಡಲಾಗುತ್ತದೆ. ವರ್ಷದ ಬಳಿಕ ಎರಡು ವರ್ಷಗಳ ಅವಧಿಗೆ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆಯಲ್ಲಿ ನೇಮಕ ಆದಲ್ಲಿ ಮಾಸಿಕ 18,660-25,300 ರೂಪಾಯಿ ವೇತನ ನಿಗದಿಪಡಿಸಲಾಗಿದೆ. ಎರಡು ವರ್ಷಗಳ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆ ತೃಪ್ತಿಕರವಾಗಿ ಪೂರೈಸಿದ ಬಳಿಕ ಅಭ್ಯರ್ಥಿಗಳ ನೇಮಕಾತಿಯನ್ನು ಪ್ರಾಧಿಕಾರದಿಂದ ಖಾಯಂಗೊಳಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News