BMTC Recruitment 2024 : 2,500 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಪೂರ್ಣ ಮಾಹಿತಿ ಇಲ್ಲಿದೆ
BMTC : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 2500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
BMTC Recruitment 2024 : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಕುರಿತು ಅಧಿಸೂಚನೆ ಹೊರಡಿಸಿದ್ದು, 2,500 ನಿರ್ವಾಹಕ ಹುದ್ದೆಗಳನ್ನು ಭರ್ತಿ ಅರ್ಜಿ ಅಹ್ವಾನಿಸಿದೆ. ಮಾರ್ಚ್ 10ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಎಂದು ತಿಳಿಸಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ, ವಯೋಮಿತಿ, ವೇತನ ಕುರಿತು ಮಾಹಿತಿ ಈ ಕೆಳಗಿನಂತಿದೆ.
ಅರ್ಹತೆಗಳು : 2,500 ನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ನೋಟಿಫಿಕೇಶನ್ ಬಿಡುಗಡೆಗೊಳಿಸಿದೆ. ದ್ವಿತೀಯ ಪಿಯು ಪೂರ್ಣಗೊಳಿಸಿರಬೇಕು. ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ, ಬ್ಯಾಡ್ಜ್ ಹೊಂದಿರಬೇಕಾಗುತ್ತದೆ.
ಇದನ್ನು ಓದಿ : ಎರಡು ತಂಡಗಳಲ್ಲಿ ಮಹತ್ವದ ಬದಲಾವಣೆ! ತಂಡಕ್ಕೆ ಆಧಾರಸ್ಥಂಭವಾಗಿದ್ದ ಇಬ್ಬರು ಸ್ಟಾರ್ ಪ್ಲೇಯರ್ಸ್ ಔಟ್
ವಯೋಮಿತಿ ;
ಸಾಮಾನ್ಯ ವರ್ಗ : ಗರಿಷ್ಠ 35 ವರ್ಷ
2ಎ, 2ಬಿ, 3ಎ ಮತ್ತು 3ಬಿ ; ಗರಿಷ್ಠ 38 ವರ್ಷ
ಎಸ್ಸಿ, ಎಸ್ಟಿ ಮತ್ತು ಪ್ರವರ್ಗ-1 : ಗರಿಷ್ಠ 40 ವರ್ಷ
ಮಾಜಿ ಸೈನಿಕ, ಇಲಾಖಾ ಅಭ್ಯರ್ಥಿಗೆ 45 ವರ್ಷ
ಅಭ್ಯರ್ಥಿಗಳು ಕನಿಷ್ಠ ವಯೋಮಿತಿ 18 ವರ್ಷ ಹೊಂದಿರಬೇಕು.
ದೇಹದಾರ್ಢ್ಯತೆ : ಪುರುಷರು 160 ಸೆಂಟಿ ಮೀಟರ್, ಮಹಿಳೆಯರು 150 ಸೆಂಟ್ ಮೀಟರ್ ಎತ್ತರ ಇರಬೇಕಾಗುತ್ತದೆ.
ಶುಲ್ಕ :
ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 750 ರೂಪಾಯಿ
ಎಸ್ಸಿ, ಎಸ್ಟಿ, ಪ್ರವರ್ಗ 1, ಮಾಜಿ ಸೈನಿಕ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 500 ರೂಪಾಯಿ
ಇದನ್ನು ಓದಿ : 5 ನಿಮಿಷದಲ್ಲಿ ಬಿಳಿ ಕೂದಲನ್ನು ಕಪ್ಪಾಗಿಸುತ್ತವೆ ಅಡುಗೆ ಮನೆಯಲ್ಲಿ ಸಿಗುವ ಈ 3 ವಸ್ತುಗಳು..!
ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ವೃತ್ತಿ ತರಬೇತಿಯಲ್ಲಿ ಮಾಸಿಕ ವೇತನ 9,100 ರೂಪಾಯಿ ನೀಡಲಾಗುತ್ತದೆ. ವರ್ಷದ ಬಳಿಕ ಎರಡು ವರ್ಷಗಳ ಅವಧಿಗೆ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆಯಲ್ಲಿ ನೇಮಕ ಆದಲ್ಲಿ ಮಾಸಿಕ 18,660-25,300 ರೂಪಾಯಿ ವೇತನ ನಿಗದಿಪಡಿಸಲಾಗಿದೆ. ಎರಡು ವರ್ಷಗಳ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆ ತೃಪ್ತಿಕರವಾಗಿ ಪೂರೈಸಿದ ಬಳಿಕ ಅಭ್ಯರ್ಥಿಗಳ ನೇಮಕಾತಿಯನ್ನು ಪ್ರಾಧಿಕಾರದಿಂದ ಖಾಯಂಗೊಳಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.