ಮೈಸೂರು: ನಗರದ ಪೀಪಲ್ಸ್ ಪಾರ್ಕ್‌ನಲ್ಲಿ ಇಂದು ಬೆಳಿಗ್ಗೆ ದೊರೆತ ಅನುಮಾನಾಸ್ಪದ ವಸ್ತು ಸ್ಫೋಟಕ ಅಲ್ಲ ಎಂದು ಪೊಲೀಸ್ ಕಮಿಷನರ್ ಸುಬ್ರಹ್ಮಣ್ಣೇಶ್ವರ ರಾವ್ ಸ್ಪಷ್ಟನೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇಂದು ಬೆಳಿಗ್ಗೆ ಪೊಲೀಸ್ ಕಂಟ್ರೋಲ್ ರೂಮ್ ಗೆ ಕರೆ ಮಾಡಿದ್ದ ಅನಾಮಿಕ ವ್ಯಕ್ತಿಯೊಬ್ಬ ಪಾರ್ಕ್‌ವೊಂದರಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿದ್ದ. ಅದಕ್ಕೆ ಸರಿಯಾಗಿ ಪೀಪಲ್ಸ್ ಪಾರ್ಕ್‌ನಲ್ಲಿ ಟೇಪು ಸುತ್ತಿದ್ದ ವಸ್ತುವೊಂದು ದೊರೆತು ಆತಂಕ ಉಂಟುಮಾಡಿತ್ತು. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಬಂದು ವಸ್ತುವನ್ನು ಪರಿಶೀಲನೆ ನಡೆಸಿ, ತೆರೆದರೆ ಅದರೊಳಗೆ ಬ್ಯಾಟರಿಗಳು ಪತ್ತೆಯಾಗಿದ್ದವು. ಇದೀಗ ಪೊಲೀಸರು ಈ ಬಗ್ಗೆ ಸ್ಪಷ್ಟಣೆ ನೀಡಿದ್ದು, ಅವು ಕೇವಲ ಬ್ಯಾಟರಿಗಳಷ್ಟೆ ಸ್ಫೋಟಕಗಳಲ್ಲ ಎಂದಿದ್ದಾರೆ.


ಈ ವಸ್ತುವನ್ನು ಯಾರು ಪಾರ್ಕ್‌ನಲ್ಲಿ ಇಟ್ಟು ಹೋಗಿದ್ದಾರೆ ಹಾಗೂ ಪೊಲೀಸ್ ಕಂಟ್ರೋಲ್ ರೂಮ್ ಗೆ ಕರೆ ಮಾಡಿ ಬೆದರಿಸಿದವರು ಯಾರು ಎಂಬುದರ ಬಗ್ಗೆ ತನಿಖೆ ನಡೆಯಿತಿದ್ದು, ಸುತ್ತಲಿನ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಮಾಡಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.


ಇಂದು ಬೆಳಗ್ಗೆ ಲಘು ಬಾಂಬ್ ಪತ್ತೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿ ಮಾಡಿತ್ತು. ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗ ಇರುವ ಪೀಪಲ್ಸ್ ಪಾರ್ಕ್ ನಲ್ಲಿ ಎರಡು ಬಾಕ್ಸ್ ಗಳಲ್ಲಿ ಶೆಲ್ ಹಾಗೂ ವಯರ್ ತುಂಬಿದ ಬಾಕ್ಸ್ ಪತ್ತೆಯಾಗಿತ್ತು. ಇದನ್ನು ಕಂಡ ಸಾರ್ವಜನಿಕರು ಭಯಗೊಂಡು ಕಂಟ್ರೋಲ್ ರೂಂಗೆ ಕರೆಮಾಡಿದ್ದರು.


ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಬಂದ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಪರೀಶಿಲನೆ ನಡೆಸಿದ್ದರು.