ಬೆಂಗಳೂರು: ಬೆಳ್ಳಂದೂರಿನಲ್ಲಿರುವ ಐಬಿಡಿಒ ಕಂಪನಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಪೋಲಿಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.ಹುಸಿ ಬಾಂಬ್ ಕರೆ ಎಂದು ಗೊತ್ತಾದ ಮೇಲೆ ಕಂಪನಿ ಉದ್ಯೋಗಿಗಳು ನಿಟ್ಟುಸಿರು ಬಿಟ್ಟಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಹೊಂದಾಣಿಕೆ ರಾಜಕೀಯ ಎಂದಿರುವ ಪ್ರತಾಪ್ ಮಾತಿಗೆ ತೂಕ, ಮಾನ್ಯತೆ ಇಲ್ಲಾ: ಸಚಿವ ಎಚ್.ಸಿ‌‌‌.ಎಂ


ಬೆಳ್ಳಂದೂರಿನ ಹೊರವರ್ತುಲ ರಸ್ತೆಯಲ್ಲಿರುವ ಕನ್ಸಲ್ ಟೇನ್ಸಿ ಐಬಿಡಿಒ ಕಂಪನಿಗೆ ಇಂದು ಬೆಳಗ್ಗ್ಗೆ ಕಂಪನಿಯಲ್ಲಿ ಬಾಂಬ್ ಇಡಲಾಗಿದೆ ಕೆಲ ಹೊತ್ತಿನಲ್ಲಿ ಬಾಂಬ್ ಸ್ಪೋಟಗೊಳ್ಳಲಿದೆ ಎಂದು ಕಚೇರಿ ನಂಬರ್ ಗೆ ಅನಾಮಿಕ ಕರೆ ಬಂದಿತ್ತು, ತದನಂತರ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಪೊಲೀಸ್ ತಂಡ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.


ಇದನ್ನೂ ಓದಿ: ಸರ್ಕಾರ ಬಂದು 20 ದಿನ ಆಗಿಲ್ಲ, ಯಾವ ಪರ್ಸೇಂಟೇಜ್ ತಗೋಳೋದು: ಎಚ್ ಡಿಕೆಗೆ ವೆಂಕಟೇಶ್ ಟಾಂಗ್


ಬಾಂಬ್ ಕರೆ ಬಂದ ಮೊಬೈಲ್ ನಂಬರ್ ಪರಿಶೀಲಿಸಿದಾಗ ಕಂಪನಿಯ ಮಾಜಿ ಉದ್ಯೋಗ ನವನೀತ್ ಕರೆ ಮಾಡಿರುವುದು ಬೆಳಕಿಗೆ ಬಂದಿದೆ.ಕೆಟ್ಟ ನಡವಳಿಕೆ ಹಿನ್ನೆಲೆ ಕಳೆದ ಎರಡು ದಿನಗಳ ಹಿಂದ ನವನೀತ್ ಪ್ರಸಾದ್ ನನ್ನ ಕೆಲಸದಿಂದ ಕಂಪನಿ ತೆಗೆದುಹಾಕಿತ್ತು,ಇದರಿಂದ ಅಕ್ರೋಶಗೊಂಡಿದ್ದ ನವನೀತ್ ಕಂಪನಿಗೆ ಹುಸಿ ಬಾಂಬ್ ಕರೆ ಮಾಡಿದ್ದ ಎನ್ನಲಾಗಿದೆ.


ಈಗ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.