ಬೆಂಗಳೂರು : ಸಿಲಿಕಾನ್ ಸಿಟಿಯ ಆರು ಶಾಲೆಗಳಿಗೆ ಬಾಂಬ್ ಬೆದರಿಕೆ ಇದೆ ಎಂದು ಅನಾಮಧೇಯ ವ್ಯಕ್ತಿಗಳಿಂದ ಮೇಲ್ ಮೂಲಕ ಸಂದೇಶ ಬಂದಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಮಾಹಿತಿ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್, ಬೆಂಗಳೂರಿನ ಹೊರವಲಯದಲ್ಲಿರುವ ಹೆಣ್ಣೂರಿನ ವಿನ್ಸೆಂಟ್ ಪಲ್ಲೋಟಿ ಶಾಲೆ, ಹೆಬ್ಬಗೋಡಿಯ ಎಬಿನೈಸರ್ ಶಾಲೆ ಸೇರಿ ಒಟ್ಟು ಆರು ಶಾಲೆಗಳಿಗೆ ಬಾಂಬ್ ಬೆದರಿಕೆ ಇದೆ ಎಂದು ಇಂದು ಬೆಳಗ್ಗೆ ಅನಾಮಧೇಯ ವ್ಯಕ್ತಿಗಳಿಂದ ಮೇಲ್ ಸಂದೇಶ ಬಂದಿದೆ. 


ಸದ್ಯ ಶಾಲೆಗಳ ಬಳಿ‌ ಪೊಲೀಸ್ ಅಧಿಕಾರಿಗಳು ಮತ್ತು ಬಾಂಬ್ ಪತ್ತೆ ದಳ ಹಾಗೂ ಶ್ವಾನ‌ದಳ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಎಂದು ತಿಳಿಸಿದ್ದಾರೆ.


ಪ್ರಾಥಮಿಕ ಪರಿಶೀಲನೆಯಲ್ಲಿ ಇದುವರೆಗೂ  ಯಾವುದೇ ಅನುಮನಾಸ್ಪದ ವಸ್ತು ಪತ್ತೆಯಾಗಿಲ್ಲ. ನಕಲಿ ಮೇಲ್ ಐಡಿ ಬಳಸಿ ಶಾಲೆಗಳಿಗೆ ಮೇಲ್ ಮಾಡಿರೋ ಶಂಕೆ ಹಿನ್ನಲೆ ಸೈಬರ್ ಪೊಲೀಸ್ ರಿಂದ ತನಿಖೆ ನಡೆಸಲಾಗುತ್ತಿದೆ. ಇದೀಗ ಸ್ಥಳಕ್ಕೆ ಭಯೋತ್ಪಾದಕ ನಿಗ್ರಹ ದಳ ಮತ್ತು ಸಿಸಿಬಿ ಪೊಲೀಸರು ಸಹ ಶಾಲೆಗಳ ಬಳಿ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸರು ಘಟನೆಯನ್ನ ಗಂಭೀರವಾಗಿ ಪರಿಗಣಿಸಿದ್ದಾರೆ.  


ಇದನ್ನೂ ಓದಿ : ಹಿಂದೂ-ಮುಸ್ಲಿಂ ಸಾಮರಸ್ಯದ ಬೆಂಗಳೂರು ಕರಗ ಉತ್ಸವಕ್ಕೆ ವಿದ್ಯುಕ್ತ ಚಾಲನೆ


ಎಸ್​ಎಸ್​ಎಲ್​ಸಿ  ಪರೀಕ್ಷೆ ನಡೆಯುತ್ತಿರೋ ಬೆನ್ನಲೆ ಈ ರೀತಿಯ ಬೆದರಿಕೆ ಬಂದಿರೋದು ಪೊಲೀಸ್ರಿಗೆ ಸಾಕಷ್ಟುಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಶಾಲೆಯ ಪಾರ್ಕಿಂಗ್, ಗಾರ್ಡನ್ ಮೇಲ್ಚಾವಣಿ ಪ್ರದೇಶಗಳಲ್ಲಿ ಬಾಂಬ್ ಸ್ಕ್ವಾರ್ಡ್ ಪರಿಶೀಲನೆ ನಡೆಸಿದ್ದಾರೆ.


ಶಾಲೆಗಳಿಗೆ ಪೂರ್ವ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ಸುಬ್ರಮಣ್ಯೇಶ್ವರ ರಾವ್ ಭೇಟಿ ನೀಡಿದ್ದಾರೆ. 


ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಗರದಲ್ಲಿ 8-9 ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಪೊಲೀಸರು 7  ಶಾಲೆಗಳನ್ನ ಸಂಪೂರ್ಣ ಪರಿಶೀಲನೆ ಮಾಡಿದ್ದಾರೆ. ಮಕ್ಕಳು, ಪೋಷಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಪರೀಕ್ಷೆ ಸಮಯದಲ್ಲಿ ಈ ರೀತಿ ಬೆದರಿಕೆ ಬರುವುದು ಸಹಜ. ವಿವಿಧ ಮೇಲ್ ಐಡಿಗಳಿಂದ ಬೆದರಿಕೆ ಬಂದಿದೆ.
ಎರಡು ಡಿವಿಷನ್ ಗಳಿಂದ, ಡಿಸಿಪಿ ಪೂರ್ವ ಮತ್ತು ವೈಟ್ ಫೀಲ್ಡ್ ವಿಭಾಗ ಡಿಸಿಪಿ ಪ್ರತ್ಯೇಕ ತಂಡ ರಚಿಸಿಕೊಂಡು ತನಿಖೆ ನಡೆಸ್ತಿದ್ದಾರೆ.ಪರೀಕ್ಷೆಗೆ ಯಾವುದೇ ತೊಂದರೆ ನೀಡದಂತೆ ಕಾರ್ಯಚರಣೆ ನಡೆಸ್ತಿದ್ದೇವೆ ಎಂದು ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.